2nd PUC Exam: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ; ಆಲ್ ದಿ ಬೆಸ್ಟ್ ಮಕ್ಕಳೇ...
ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ಇಂದು ಶುಕ್ರವಾರ(ಮಾರ್ಚ್ 1) ಆರಂಭವಾಗುತ್ತಿದೆ. ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ ಈ ಬಾರಿ 6,98,624 ವಿದ್ಯಾರ್ಥಿಗಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ.
ಆಂತರಿಕ ಮೌಲ್ಯಮಾಪನ: 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ.
ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ: ಇಂದಿನಿಂದ ಮಾ.22 ರವರೆಗೆ ಬೆಳಗ್ಗೆ 10:15 ರಿಂದ ಮಧ್ಯಾಹ್ನ 1:30 ರವರೆಗೆ ಪರೀಕ್ಷೆಗಳು ನಡೆಯಲಿವೆ. ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಯಾವುದೇ ಪರೀಕ್ಷಾ ಅಕ್ರಮಗಳು ನಡೆಯದಂತೆ ನೋಡಿಕೊಳ್ಳಲು ಕ್ರಮ ವಹಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 9:30 ರಿಂದ ಮಧ್ಯಾಹ್ನ 2 ರವರೆಗೆ ಜೆರಾಕ್ಸ್ ಅಂಗಡಿಗಳು ಬಂದ್ ಆಗಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಸಿಟಿವಿ ಅಳವಡಿಕೆ: ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ತೆರಳಲು ಹಾಗೂ ಮನೆಗೆ ಹಿಂದಿರುಗಲು ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು.
ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಂತಿದೆ: 01-03-2024- ಕನ್ನಡ ಹಾಗೂ ಅರೇಬಿಕ್ ಭಾಷೆ
04-03-2024- ಗಣಿತ, ಶಿಕ್ಷಣ ಶಾಸ್ತ್ರ
05-03-2024 -ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ
06-03-2024 -ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್
07-03-2024 -ಇತಿಹಾಸ ಹಾಗೂ ಭೌತಶಾಸ್ತ್ರ
09-03-2024- ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ
11-03-2024 -ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ
13-03-2024 -ಇಂಗ್ಲಿಷ್
15-03-2024- ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ
18-03-2024-ಭೂಗೋಳ ಶಾಸ್ತ್ರ, ಜೀವಶಾಸ್ತ್ರ
20-03-2024- ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
22-03-2024- ಹಿಂದಿ
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ