ಬೆಳಗಾವಿ: ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ, ಪುತ್ರಿಯಿಂದ ದೂರು ದಾಖಲು; ವಿಡಿಯೋ ವೈರಲ್

ಸುಮಾರು ಏಳು ತಿಂಗಳ ಹಿಂದೆ ಇಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ವಿಡಿಯೋ ಇತ್ತೀಚೆಗೆ ವೈರಲ್ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ಪುತ್ರಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣವನ್ನು ತನಿಖೆಗೆ ಕೈಗೆತ್ತಿಕೊಂಡಿರುವುದಾಗಿ ಗುರುವಾರ ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬೆಳಗಾವಿ: ಸುಮಾರು ಏಳು ತಿಂಗಳ ಹಿಂದೆ ಇಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ವಿಡಿಯೋ ಇತ್ತೀಚೆಗೆ ವೈರಲ್ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯ ಪುತ್ರಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣವನ್ನು ತನಿಖೆಗೆ ಕೈಗೆತ್ತಿಕೊಂಡಿರುವುದಾಗಿ ಗುರುವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, 2023ರ ಜುಲೈ 31 ರಂದು ಸರ್ಕಾರವು ತನಗೆ ಮಂಜೂರು ಮಾಡಿದ ಮೂರು ಎಕರೆ ಭೂಮಿಯಲ್ಲಿ ಅರ್ಧ ಎಕರೆ ಭೂಮಿ ಒತ್ತುವರಿಯನ್ನು ಪ್ರಶ್ನಿಸಿದ್ದಕ್ಕಾಗಿ ಸಂತ್ರಸ್ತೆ ಮತ್ತು ಅವಳ ಮಗನನ್ನು ಥಳಿಸಿದ ಘಟನೆ ನಡೆದಿದೆ.

ಪ್ರಾತಿನಿಧಿಕ ಚಿತ್ರ
ಬೆಳಗಾವಿಯಲ್ಲಿ ಮತ್ತೊಬ್ಬ ಮಹಿಳೆ ವಿವಸ್ತ್ರಗೊಳಿಸಿದ ಆರೋಪ: ಜಮೀನು ಒತ್ತುವರಿ ಪ್ರಶ್ನಿಸಿದ್ದಕ್ಕೆ ಬಡ ಮಹಿಳೆ ಮೇಲೆ ಹಲ್ಲೆ?

ಆರೋಪಿಯು ಮಹಿಳೆಯ ನಗ್ನ ಮೆರವಣಿಗೆ ನಡೆಸಿ, ಆಕೆಯ ಮನೆಯವರನ್ನು ಥಳಿಸಿದ್ದಲ್ಲದೆ, ದೂರು ನೀಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾಗಿ ದೂರುದಾರರು ಆರೋಪಿಸಿದ್ದಾರೆ.

ಗುರುವಾರ ಸಂತ್ರಸ್ತೆ ಮಗಳು ದೂರು ನೀಡಿದಾಗ ವಿಷಯ ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಈ ಘಟನೆಯು ಬೆಳಗಾವಿ ಜಿಲ್ಲೆಯ ವಂಟಮುರಿ ಗ್ರಾಮದಲ್ಲಿ 2023ರ ಡಿಸೆಂಬರ್ 11 ರಂದು ತನ್ನ ಮಗ ಇತರ ಸಮುದಾಯದ ಹುಡುಗಿ ಜೊತೆ ಓಡಿಹೋದ ನಂತರ ಮಹಿಳೆ ಮೇಲೆ ನಡೆದ ಇದೇ ರೀತಿಯ ಘಟನೆಯನ್ನು ನೆನಪಿಸುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com