ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ, ಬಿಬಿಎಂಪಿ ನೌಕರರ ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಬಿಎಂಪಿಯ ಸುಮಾರು ಒಂದು ಸಾವಿರ ನೌಕರರು ಶುಕ್ರವಾರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು
ಬಿಬಿಎಂಪಿ ಸಾಂದರ್ಭಿಕ ಚಿತ್ರ
ಬಿಬಿಎಂಪಿ ಸಾಂದರ್ಭಿಕ ಚಿತ್ರ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಬಿಎಂಪಿಯ ಸುಮಾರು ಒಂದು ಸಾವಿರ ನೌಕರರು ಶುಕ್ರವಾರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು. ಕಳೆದ ವರ್ಷದಿಂದ ಕಂದಾಯ ಇಲಾಖೆ ತೆರಿಗೆ ಸಂಗ್ರಹ ಹೆಚ್ಚಿಸಿದ್ದರೂ ಕ್ಷುಲ್ಲಕ ಕಾರಣಕ್ಕೆ ಅಧಿಕಾರಿಗಳನ್ನು ಅಮಾನತು ಮಾಡಲಾಗುತ್ತಿದೆ ಎಂದು ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತರಾಜ್ ಹೇಳಿದರು.

2022-23ರಲ್ಲಿ ರೂ.3,339 ಕೋಟಿ ಮತ್ತು 2023-24ರಲ್ಲಿ ರೂ.3,598 ಕೋಟಿ ಸಂಗ್ರಹಿಸಲಾಗಿದೆ. ಆದರೆ ಸಹಾಯಕ ಕಂದಾಯ ಅಧಿಕಾರಿ ಲಕ್ಷ್ಮಿ ಅವರನ್ನು ಐದು ವರ್ಷಗಳಿಂದ ಅಂತಿಮ ಆದೇಶ ನೀಡದೆ ಅಮಾನತು ಮಾಡಲಾಗಿದೆ.

ಆರ್.ಆರ್.ನಗರ ವಲಯದ ಆರೋಗ್ಯಾಧಿಕಾರಿ ದೇವಿಕಾ ರಾಣಿ ಅವರಿಗೆ ಸ್ಥಳ ನಿಯೋಜನೆ ಮಾಡಿಲ್ಲ. ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಇಂಗ್ಲಿಷ್ ಫಲಕಕ್ಕೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಆರೋಗ್ಯ ನಿರೀಕ್ಷಕ ಕೆ.ಎಲ್.ವಿಶ್ವನಾಥ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಅವರು ತಿಳಿಸಿದರು.

ಬಿಬಿಎಂಪಿ ಸಾಂದರ್ಭಿಕ ಚಿತ್ರ
ಶೇ.60ರಷ್ಟು ಕನ್ನಡ ಕಡ್ಡಾಯ ನೀತಿ ಅನುಷ್ಠಾನದಲ್ಲಿ ವಿಫಲ: ಬಿಬಿಎಂಪಿ ಅಧಿಕಾರಿ ಅಮಾನತು!

ಬೆಳಿಗ್ಗೆ 10 ಗಂಟೆಗೆ ಬಯೋಮೆಟ್ರಿಕ್ ಲಾಗಿನ್ ಮತ್ತು ಸಂಜೆ 5.30 ಕ್ಕೆ ಲಾಗ್‌ಔಟ್ ಮಾಡುವುದು ಕ್ಷೇತ್ರ ಅಧಿಕಾರಿಗಳಿಗೆ ಹೊರೆಯಾಗಿ ಪರಿಣಮಿಸಿದೆ. ಏಕೆಂದರೆ ಅವರು ಮನೆಯಿಂದ ಬೇಗ ಹೊರಟು ತಡವಾಗಿ ತಲುಪುತ್ತಾರೆ. 108 ಕಿರಿಯ ಎಂಜಿನಿಯರ್‌ಗಳು, 10 ಸೂಪರಿಂಟೆಂಡಿಂಗ್ ಎಂಜಿನಿಯರ್‌ಗಳು ಮತ್ತು 20 ಕಾರ್ಯಪಾಲಕ ಎಂಜಿನಿಯರ್‌ಗಳ ನೇಮಕಾತಿ ಮತ್ತು ಬಡ್ತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.

‘ಎ’ ದರ್ಜೆಯ ಅಧಿಕಾರಿಗಳಿಗೆ ಬಡ್ತಿ ನೀಡುವ ಅಧಿಕಾರವನ್ನು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ನೀಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ವಾರ್ಡ್ ಸಂಖ್ಯೆ 198 ರಿಂದ 225 ಆಗಿರುವುದರಿಂದ 27 ವಾರ್ಡ್‌ಗಳಲ್ಲಿ ವಾರ್ಡ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕೊರತೆಯಿದೆ. ಪಾಲಿಕೆಯಲ್ಲಿ 5,219 ಹುದ್ದೆಗಳು ಖಾಲಿ ಇದ್ದರೂ, ಹಣಕಾಸು ಇಲಾಖೆ ನೇಮಕಾತಿ ಪೂರ್ಣಗೊಳಿಸಿಲ್ಲ ಎಂದು ದೂರಿದರು.ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ನೌಕರರ ಬೇಡಿಕೆಗಳನ್ನು ಪರಿಗಣಿಸಿ ಪ್ರತಿಭಟನೆ ಕೈಬಿಡಬೇಕು ಎಂದು ಮನವಿ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com