ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ, ಆರೋಪಿಗಳಿಗಾಗಿ ಮುಂದುವರೆದ ಶೋಧ ಕಾರ್ಯ

ವೈಟ್ ಪೀಲ್ಡ್ ನ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ನಡೆದ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಾಗಿ ಪೊಲೀಸರು ಶೋಧ ಕಾರ್ಯವನ್ನು ಮುಂದುವರೆಸಿದ್ದಾರೆ. ಸಿಸಿಟಿವಿಯಲ್ಲಿ ಆರೋಪಿಯ ಚಹರೆ ಪತ್ತೆಯಾಗಿದೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಲ್ಲಿ ಗಾಯಾಳುಗಳು
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಲ್ಲಿ ಗಾಯಾಳುಗಳು

ಬೆಂಗಳೂರು: ವೈಟ್ ಪೀಲ್ಡ್ ನ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ನಡೆದ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಾಗಿ ಪೊಲೀಸರು ಶೋಧ ಕಾರ್ಯವನ್ನು ಮುಂದುವರೆಸಿದ್ದಾರೆ. ಸಿಸಿಟಿವಿಯಲ್ಲಿ ಆರೋಪಿಯ ಚಹರೆ ಪತ್ತೆಯಾಗಿದೆ. ಆದರೆ, ಆತ ಕೆಫೆಯಲ್ಲಿ ಬಾಂಬ್ ಇಟ್ಟು ಪುಟ್ ಪಾತ್ ಬದಲಿಗೆ ರಸ್ತೆಯಲ್ಲಿ ನಡೆದು ಹೋಗಿರುವುದರಿಂದ ಗುರುತಿಸಲು ಕಷ್ಟವಾಗುತ್ತಿದೆ. ಪೊಲೀಸರು, ವಿವಿಧ ತನಿಖಾ ತಂಡಗಳು ಶಂಕಿತ ಬಾಂಬರ್ ಗಳಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಬಸ್ಸಿನಲ್ಲಿ ಕಪ್ಪು ಬಣ್ಣದ ಬ್ಯಾಗ್ ನೊಂದಿಗೆ ಕೆಫೆಗೆ ಬಂದಿದ್ದ ಆರೋಪಿ, ರವಿ ಇಡ್ಲಿ ತಿಂದು ಕೆಫೆಯಲ್ಲಿ ಓಡಾಡಿದ್ದಾನೆ. ನಂತರ ಕೆಫೆಯಿಂದ ಹೊರಗೆ ಬಂದು ಎಡಭಾಗಕ್ಕೆ ಹೋಗಿದ್ದಾನೆ. ಆತ ಎಲ್ಲಿ ಹೋಗಿದ್ದಾನೆ ಎಂಬುದು ತಿಳಿದುಬಂದಿಲ್ಲ. ಈ ನಿಟ್ಟಿನಲ್ಲಿ ಕೇರಳ, ಆಂಧ್ರ, ತಮಿಳುನಾಡು ಸೇರಿದಂತೆ ಹಲವು ಕಡೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಲ್ಲಿ ಗಾಯಾಳುಗಳು
ರಾಮೇಶ್ವರಂ ಕೆಫೆ ಸ್ಫೋಟ: 'ಪೊಲೀಸರ ಗುಪ್ತಚರ ವೈಫಲ್ಯ'.. ಸಿದ್ದು ಸರ್ಕಾರದ ವಿರುದ್ದ ಬಿಜೆಪಿ ಆಕ್ರೋಶ

ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ ನಡುವೆ ಸಾಮ್ಯತೆ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಹಾಗೂ ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ ನಡುವೆ ಸಾಮ್ಯತೆ ಕಂಡುಬಂದಿದೆ. ಈ ಎರಡು ಪ್ರಕರಣಗಳಲ್ಲಿಯೂ ಬಳಸಿರುವ ಸ್ಫೋಟಕ ಸಾಧನಗಳು ಒಂದೇ ರೀತಿಯಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಜೈಲಿನಲ್ಲಿರುವ ಆರೋಪಿಗಳನ್ನು ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com