ರಾಮೇಶ್ವರ ಕೆಫೆ ಬ್ಲಾಸ್ಟ್: ಮಧ್ಯರಾತ್ರಿ 1 ಗಂಟೆಯವರೆಗೆ ರೆಸ್ಟೋರೆಂಟ್‌ ತೆರೆಯುಲು ಅನುಮತಿ ಸಿಗುವುದು ಡೌಟ್!

ಬೆಂಗಳೂರಿನಲ್ಲಿ ಬಹಳಷ್ಟು ಜನರು ಪ್ರತಿದಿನ ಮೂರು ಹೊತ್ತಿನ ಊಟಕ್ಕಾಗಿ ರೆಸ್ಟೋರೆಂಟ್‌ಗಳನ್ನು ಅವಲಂಬಿಸಿದ್ದಾರೆ. ಪರಿಸ್ಥಿತಿ ಶೀಘ್ರದಲ್ಲೇ ಸಹಜ ಸ್ಥಿತಿಗೆ ಮರಳುತ್ತವೆ.
ರಾಮೇಶ್ವರ ಕೆಫೆ ಬಳಿ ಪೊಲೀಸರ ಶೋಧ
ರಾಮೇಶ್ವರ ಕೆಫೆ ಬಳಿ ಪೊಲೀಸರ ಶೋಧ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಿಂದ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರಲ್ಲಿ ಆತಂಕ ಹೆಚ್ಚಿದೆ. ಇತ್ತೀಚೆಗಿನ ಬಜೆಟ್‌ನಲ್ಲಿ ಮಧ್ಯರಾತ್ರಿ 1 ಗಂಟೆಯವರೆಗೆ ರೆಸ್ಟೋರೆಂಟ್ ಗಳು ತೆರೆದಿರಲು ಅನುಮತಿ ನೀಡುವುದಾಗಿ ಸರ್ಕಾರ ಘೋಷಿಸಿತ್ತು, ಆದರೆ ಬ್ಲಾಸ್ಟ್ ಹಿನ್ನೆಲೆಯಲ್ಲಿ ಮಧ್ಯರಾತ್ರಿ ವರೆಗೆ ಹೋಟೆಲ್ ತೆರೆಯಲು ಅವಕಾಶ ಸಿಗುವುದೇ ಎಂದು ಮಾಲೀಕರು ಆತಂಕದಲ್ಲಿದ್ದಾರೆ.

ನಾವು ಈ ಹಿಂದೆ ಹಗಲಿರುಳು ಕಾರ್ಯನಿರ್ವಹಿಸಲು ಅನುಮತಿ ಕೋರಿ ಅನೇಕ ಪ್ರಯತ್ನಗಳನ್ನು ಮಾಡಿದ್ದೆವು, ಆದರೆ ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ನಿರಾಕರಿಸಲಾಗಿತ್ತು. ಈಗ ಈ ಸ್ಫೋಟದೊಂದಿಗೆ ನಮಗೆ ಮತ್ತಷ್ಟು ಹಿನ್ನಡೆಯಾಗಿದೆ ಎಂದು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳ ಅಸೋಸಿಯೇಷನ್‌ನ ಮೂಲಗಳು ತಿಳಿಸಿವೆ.

ಇಂತಹ ಘಟನೆಗಳು ಯಾವುದೇ ಸಮಯದಲ್ಲಿ ಮತ್ತು ಯಾವುದೇ ಸ್ಥಳದಲ್ಲಿ ಸಂಭವಿಸಬಹುದು ಎಂದು ಬೆಂಗಳೂರು ಮೂಲದ ರೆಸ್ಟೋರೆಂಟ್ ಮಾಲೀಕರು ಹೇಳಿದ್ದಾರೆ. ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಸುರಕ್ಷಿತವಲ್ಲ ಎಂದು ಇದರ ಅರ್ಥವಲ್ಲ. ಸೂಕ್ತ ಭದ್ರತಾ ವ್ಯವಸ್ಥೆ ಇರುವಂತೆ ನೋಡಿಕೊಳ್ಳುವುದು ಪೊಲೀಸರ ಕರ್ತವ್ಯ ಎಂದಿದ್ದಾರೆ.

ನಗರದ ಕೆಲವು ತಿನಿಸುಗಳ ಮಾರಾಟದ ಮೇಲೆ ಸ್ಫೋಟ ಪರಿಣಾಮ ಬೀರಿದೆ ಎಂದು ಮತ್ತೊಬ್ಬ ಹೋಟೆಲ್ ಮಾಲೀಕರು ಹೇಳಿದ್ದಾರೆ. ಜನರು ಎಲ್ಲಾ ಹೋಟೆಲ್ ಗಳನ್ನು ಅನುಮಾಸ್ಪಾದವಾಗಿ ನೋಡುವಂತಾಗುತ್ತಿದೆ. ಬೆಂಗಳೂರಿನಲ್ಲಿ ಬಹಳಷ್ಟು ಜನರು ಪ್ರತಿದಿನ ಮೂರು ಹೊತ್ತಿನ ಊಟಕ್ಕಾಗಿ ರೆಸ್ಟೋರೆಂಟ್‌ಗಳನ್ನು ಅವಲಂಬಿಸಿದ್ದಾರೆ. ಪರಿಸ್ಥಿತಿ ಶೀಘ್ರದಲ್ಲೇ ಸಹಜ ಸ್ಥಿತಿಗೆ ಮರಳುತ್ತವೆ, ಆದರೆ ತಡರಾತ್ರಿಯ ಗಂಟೆಗಳವರೆಗೆ ರೆಸ್ಟೋರೆಂಟ್‌ಗಳನ್ನು ತೆರೆಯುವ ಅನುಮತಿ ಪಡೆಯುವ ಮೇಲೆ ಪರಿಣಾಮ ಬೀರುತ್ತದೆ ಎಂದು ಮಾಲೀಕರು ಹೇಳಿದರು.

ರಾಮೇಶ್ವರ ಕೆಫೆ ಬಳಿ ಪೊಲೀಸರ ಶೋಧ
ರಾಮೇಶ್ವರಂ ಕೆಫೆ ಸ್ಫೋಟ: 'ಪೊಲೀಸರ ಗುಪ್ತಚರ ವೈಫಲ್ಯ'.. ಸಿದ್ದು ಸರ್ಕಾರದ ವಿರುದ್ದ ಬಿಜೆಪಿ ಆಕ್ರೋಶ

ಇನ್ನೂ ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಚರ್ಚಿಸಲು ಎಲ್ಲಾ ಮಾಲೀಕರು ಮತ್ತು ಸದಸ್ಯರೊಂದಿಗೆ ಸಭೆ ನಡೆಸಲಾಗುವುದು ಎಂದು ಬೃಹತ್ ಬೆಂಗಳೂರು ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ಸಂಘದ ಕಾರ್ಯದರ್ಶಿ ವೀರೇಂದ್ರ ಕಾಮತ್ ತಿಳಿಸಿದ್ದಾರೆ.

ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸುತ್ತಿವೆ ಎಂಬುದನ್ನು ಖಚಿತಪಡಿಸಿಕೊಳ್ಳುತ್ತೇವೆ. ಜನರು ಗಾಬರಿಯಾಗುವ ಅಗತ್ಯವಿಲ್ಲ. ಎಲ್ಲಾ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಪೊಲೀಸರು ಸೂಚಿಸಿದ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಅನುಸರಿಸುತ್ತವೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com