ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ರಾಜ್ಯಕ್ಕೆ ಬೆದರಿಕೆ, ಎನ್‌ಐಎ ತನಿಖೆಗೆ ಬಿಜೆಪಿ ಒತ್ತಾಯ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಒಪ್ಪಿಸುವಂತೆ ರಾಜ್ಯ ಸರ್ಕಾರವನ್ನು ಬಿಜೆಪಿ ಒತ್ತಾಯಿಸಿದೆ.
ಬಿವೈ ವಿಜಯೇಂದ್ರ
ಬಿವೈ ವಿಜಯೇಂದ್ರ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಒಪ್ಪಿಸುವಂತೆ ರಾಜ್ಯ ಸರ್ಕಾರವನ್ನು ಬಿಜೆಪಿ ಒತ್ತಾಯಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದ ಸುರಕ್ಷತೆಗೆ ಧಕ್ಕೆ ತರುವ ಘಟನೆಗಳು ನಡೆಯುತ್ತಲೇ ಇವೆ. "ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವು ಇತ್ತೀಚಿನ ರಾಜ್ಯಸಭಾ ಚುನಾವಣೆಯ ಸಮಯದಲ್ಲಿ ವಿಧಾನಸೌಧದೊಳಗೆ ಕೇಳಿಬಂದ ಪಾಕಿಸ್ತಾನದ ಪರ ಘೋಷಣೆಗಳ ಮುಂದುವರೆದ ಭಾಗವಾಗಿದೆ" ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯದ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕಾಂಗ್ರೆಸ್‌ನ ‘ಸಹೋದರ ನೀತಿ’ಯನ್ನು ಸಹಿಸಿಕೊಳ್ಳುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಓಲೈಸುತ್ತಿರುವುದು ರಾಜ್ಯದ ಭದ್ರತೆಗೆ ಅಪಾಯ ತಂದೊಡ್ಡುತ್ತಿದೆ ಎಂದರು.

ಪಾಕಿಸ್ತಾನದ ಪರ ಘೋಷಣೆಗಳ ವಿಚಾರವಾಗಿ ಎಫ್‌ಎಸ್‌ಎಲ್ ವರದಿಯು ಪಾಕಿಸ್ತಾನದ ಪರ ಘೋಷಣೆಯಾಗಿದೆ ಎಂದು ದೃಢಪಡಿಸಿದೆ. ''ರಾಜ್ಯ ಸರಕಾರ ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ. ದೇಶ ವಿರೋಧಿ ಶಕ್ತಿಗಳು ಮತ್ತು ಸಮಾಜ ವಿರೋಧಿ ಅಂಶಗಳ ಬಗ್ಗೆ ಸರ್ಕಾರ ಮೃದುವಾಗಿದೆ ಎಂದು ಆರೋಪಿಸಿದ ವಿಜಯೇಂದ್ರ, ರಾಜ್ಯ ಸರ್ಕಾರ ಎಫ್‌ಎಸ್‌ಎಲ್ ವರದಿಯನ್ನು ಬಹಿರಂಗಗೊಳಿಸಬೇಕು ಎಂದು ಒತ್ತಾಯಿಸಿದರು.

ಬಿವೈ ವಿಜಯೇಂದ್ರ
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ತೀವ್ರವಾಗಿ ಗಾಯಗೊಂಡ ಮಹಿಳಾ ಟೆಕ್ಕಿಗೆ ಶೇ.40 ರಷ್ಟು ಸುಟ್ಟ ಗಾಯ

ರಾಮೇಶ್ವರಂ ಕೆಫೆ ಸ್ಫೋಟವನ್ನು ಸಿಎಂ ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕು. “ನಾವು ರಾಜಕೀಯ ಮಾಡುವುದಿಲ್ಲ, ರಾಜ್ಯವು ಅಪಾಯದಲ್ಲಿದೆ, ”ಎಂದು ಅವರು ಪುನರುಚ್ಚರಿಸಿದರು.

ಕಲಬುರಗಿಯಲ್ಲಿ ಇತ್ತೀಚೆಗೆ ಇಬ್ಬರು ಬಿಜೆಪಿ ಕಾರ್ಯಕರ್ತರ ಹತ್ಯೆಯಾಗಿದೆ. ಬಿಜೆಪಿ ಕಾರ್ಯಕರ್ತರಿಗೂ ಬೆದರಿಕೆ ಇದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com