ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಗಾಯಾಳುಗಳ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ
ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಗಾಯಾಳುಗಳ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ

ರಾಮೇಶ್ವರಂ ಕೆಫೆ ಸ್ಫೋಟ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಗಾಯಾಳುಗಳ ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರಿಂದ ಮಾಹಿತಿ

ಬೆಂಗಳೂರು: ರಾಮೇಶ್ವರಂ ಕೆಫೆಯ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಶುಕ್ರವಾರ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸದರು. ಆಸ್ಪತ್ರೆಗಳ ವೈದ್ಯರಿಂದ ಮಾಹಿತಿ ಪಡೆದುಕೊಂಡರು.

ವಿವಿಧ ಅಭಿವೃದ್ಧಿ‌ ಕಾರ್ಯಗಳ ಉದ್ಘಾಟನೆ/ಶಂಕುಸ್ಥಾಪನೆ ಮುಗಿಸಿ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದಂತೆ ನೇರವಾಗಿ ರಾಮೇಶ್ವರ ಕೆಫೆ ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಸ್ಫೋಟಕ್ಕೆ ಕಾರಣಕರ್ತರು ಯಾರು ಎಂದ ಗೊತ್ತಾದ ಮೇಲೆ ತನಿಖೆಯನ್ನು ಯಾವ ಹಂತದಲ್ಲಿ ನಡೆಸಬೇಕು ಎಂಬುದನ್ನು ತೀರ್ಮಾನಿಸುತ್ತೇವೆ. ಸದ್ಯಕ್ಕೆ ಘಟನೆಯ ಬಗ್ಗೆ ಮೇಲ್ನೋಟದ ಮಾಹಿತಿಗಳು ಮಾತ್ರ ಲಭ್ಯವಿದೆ. ಗಾಯಾಳುಗಳಿಗೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಗಾಯಾಳುಗಳ ಆರೋಗ್ಯದ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಸ್ವರ್ಣಾಂಬ ಎಂಬುವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಗಾಯಾಳುಗಳ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ
ರಾಮೇಶ್ವರಂ ಕೆಫೆ: ಸ್ಫೋಟಕ್ಕೆ ಮುನ್ನ ಬೀಪ್.. ಬೀಪ್.. ಶಬ್ದ ಕೇಳಿಸಿತು; ಪ್ರತ್ಯಕ್ಷದರ್ಶಿ ಹೇಳಿಕೆ

ಶೀಘ್ರದಲ್ಲೇ ಆರೋಪಿ ಪತ್ತೆ: ಈಗ ನಾನು ಹೇಳುತ್ತಿರುವುದು ಆರಂಭಿಕ ಹಂತದ ಮಾಹಿತಿ. ಯಾರು ಮಾಡಿದರು, ಯಾಕೆ ಮಾಡಿದರು ಎಂಬುದೆಲ್ಲಾ ಇನ್ನು ಸದ್ಯಕ್ಕೆ ವಿಚಾರಣೆಯ ಹಂತದಲ್ಲಿದೆ. ವ್ಯಕ್ತಿಯೊಬ್ಬ ಹೋಟೆಲ್ ನೊಳಗೆ ಟೋಕನ್ ಪಡೆದು ಬ್ಯಾಗ್ ಇಟ್ಟಿದ್ದಾನೆ‌. ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುತ್ತೇವೆ. ಆರೋಪಿ ಬಂಧನಕ್ಕೆ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ. ತನಿಖೆಯಲ್ಲಿ ಏಕೆ, ಯಾರು ಮಾಡಿದ್ದಾರೆ ಎಂದು ಗೊತ್ತಾಗಲಿದೆ. ಕುಕ್ಕರ್​ ಸ್ಫೋಟ ಪ್ರಕರಣ​​, ಈ ಕೇಸ್​ಗೂ ಸಾಮ್ಯತೆ ಇದೆಯಾ ಎಂದು ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

ರಾಮೇಶ್ವರ ಕೆಫೆಗೂ ಭೇಟಿ: ಆಸ್ಪತ್ರೆಯಿಂದ ನೇರವಾಗಿ ಸಿಎಂ ಸಿದ್ದರಾಮಯ್ಯ ಸ್ಫೋಟ ದುರ್ಘಟನೆ ಸಂಭವಿಸಿದ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಪೊಲೀಸರಿಂದ ಮಾಹಿತಿ ಪಡೆದರು, ಸ್ಥಳ ಪರಿಶೀಲನೆ ಮಾಡಿದರು.

ಮತ್ತೊಂದೆಡೆ ವೈದೇಹಿ ಆಸ್ಪತ್ರೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ನಾಲ್ವರು ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನವ್ಯಾ, ನಾಗಶ್ರೀ, ಶಂಕರ್, ಮೋಹನ್ ಆರೋಗ್ಯ ವಿಚಾರಿಸಿದ್ದಾರೆ.

ಸ್ವರ್ಣಾಂಬ ಎಂಬ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಬ್ರೂಕ್‌ಫೀಲ್ಡ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಪ್ರದೀಪ್ ಕುಮಾರ್ ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com