ಜನರು ಸಂಸ್ಕೃತಿ ಅರಿತರೆ ಮಾತ್ರ ದೇಶದ ಭವಿಷ್ಯ ರೂಪಿಸಲು ಸಾಧ್ಯ: ಸಿಎಂ ಸಿದ್ದರಾಮಯ್ಯ

ಶ್ರೇಷ್ಠತೆಯ ವ್ಯಸನದಿಂದ 58 ಲಕ್ಷ ಯಹೂದಿಗಳನ್ನು ಹತ್ಯೆ ಮಾಡಿದ ಹಿಟ್ಲರ್ ಕೊನೆಗೆ ಒಬ್ಬ ಹೇಡಿಯಂತೆ ಗುಂಡು ಹಾರಿಸಿಕೊಂಡು ಸತ್ತ. ಇಂಥಾ ಪರಿಸ್ಥಿತಿ ನಮ್ಮ ದೇಶದಲ್ಲಿ ಬರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಕನಕಗಿರಿ: ಶ್ರೇಷ್ಠತೆಯ ವ್ಯಸನದಿಂದ 58 ಲಕ್ಷ ಯಹೂದಿಗಳನ್ನು ಹತ್ಯೆ ಮಾಡಿದ ಹಿಟ್ಲರ್ ಕೊನೆಗೆ ಒಬ್ಬ ಹೇಡಿಯಂತೆ ಗುಂಡು ಹಾರಿಸಿಕೊಂಡು ಸತ್ತ. ಇಂಥಾ ಪರಿಸ್ಥಿತಿ ನಮ್ಮ ದೇಶದಲ್ಲಿ ಬರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ,ಇಲ್ಲಿ ಶ್ರೇಷ್ಠರು, ಕನಿಷ್ಠರು ಇಲ್ಲವೇ ಇಲ್ಲ. ತಮ್ಮನ್ನು ತಾವು ಶ್ರೇಷ್ಠರು ಎನ್ನುವವರು, ಮತ್ತೊಬ್ಬರನ್ನು ಕನಿಷ್ಠರು ಎನ್ನುವವರು ಮನುಷ್ಯರೇ ಅಲ್ಲ. ಈ ರೀತಿಯ ಶ್ರೇಷ್ಠತೆಯ ವ್ಯಸನವನ್ನು ಹೋಗಲಾಡಿಸಲು ಬಸವಣ್ಣ, ಅಂಬೇಡ್ಕರ್ ಹೋರಾಟ ಮಾಡಿದರು ಎಂದು ವಿವರಿಸಿದರು.‌ಅಸಮಾನತೆ ಇದೆ. ಇದನ್ನು ಹೋಗಲಾಡಿಸಲು ಏನಾದ್ರೂ ಪ್ರಯತ್ನ ಮಾಡಿದ್ವಾ ಎನ್ನುವ ಕುರಿತು ಪ್ರತಿಯೊಬ್ಬರೂ ತಮ್ಮನ್ನು ಪ್ರಶ್ನಿಸಿಕೊಳ್ಳಬೇಕು ಎಂದರು.

ಚತುವರ್ಣವ್ಯವಸ್ಥೆ ರೂಪಿಸಿ ಒಬ್ಬರನ್ನು ಶ್ರೇಷ್ಠರು ಉಳಿದವರನ್ನು ಕನಿಷ್ಠರು ಎನ್ನುವ ವ್ಯವಸ್ಥೆ ರೂಪಿಸಿದರು. ಇದನ್ನೇ ಹಿಟ್ಲರ್ ಮತ್ತು ಮುಸಲೋನಿ ಜರ್ಮನಿಯಲ್ಲಿ ಮಾಡಿದ್ದು. ಕೊನೆಗೆ ಅವರಿಗೆ ಯಾವ ಗತಿ ಆಯ್ತು ಎಂದು ಇಡಿ ಮನುಕುಲ ನೋಡಿದೆ. ನಾವು ಅಂಬೇಡ್ಕರ್, ಬುದ್ದ, ಬಸವ, ಕುವೆಂಪು ಮುಂತಾದವರ ವಿಚಾರಗಳನ್ನು ಹೆಚ್ಚೆಚ್ಚು ಪಾಲಿಸುತ್ತಾ ತಾರತಮ್ಯದ ಸಮಾಜವನ್ನು ಹೋಗಲಾಡಿಸಬೇಕು. ಇವರೆಲ್ಲಾ ಮಹನೀಯರ ಹೋರಾಟದಿಂದ ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳೆಯರು, ಶೂದ್ರರಿಗೆ ಶಿಕ್ಷಣ ಸಿಕ್ಕಿದೆ. ನಾವು ಯಾವತ್ತೂ ಸೀತಾರಾಮನ ಸಂಸ್ಕೃತಿಯವರು. ಸೀತೆ, ಲಕ್ಷ್ಮಣನನ್ನು ಬಿಟ್ಟು ರಾಮ ಯಾವತ್ತೂ ಒಂಟಿ ಅಲ್ಲ. ರಾಮನನ್ನು ಒಂಟಿ ಮಾಡುವುದಲ್ಲ. ಸಕುಂಟುಂಬ ಸಮೇತನಾದ ಸೀತಾರಾಮ ನಮ್ಮವ ಎಂದರು.

ಸಿಎಂ ಸಿದ್ದರಾಮಯ್ಯ
ಬಾಕಿ ಚಲನಚಿತ್ರ ಪ್ರಶಸ್ತಿಗಳ ಶೀಘ್ರದಲ್ಲೇ ನೀಡಲಾಗುವುದು: ಸಿಎಂ ಸಿದ್ದರಾಮಯ್ಯ

ಮುಂದಿನ ವರ್ಷ ಕನಕಗಿರಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು ಎಂದು ಸಿ.ಎಂ. ಇದೇ ಸಂದರ್ಭದಲ್ಲಿ ಮಹತ್ವದ ಘೋಷಣೆ ಮಾಡಿದರು. ಕನಕಗಿರಿ ಉತ್ಸವವನ್ನು ನಿರಂತರವಾಗಿ ನಡೆಸಲು, ಕನಕಗಿರಿಯ ಸರ್ವತೋಮುಖ ಅಭಿವೃದ್ಧಿಗೆ ನಾನು ಮತ್ತು ನಮ್ಮ ಸರ್ಕಾರ ಸದಾ ಬದ್ದವಾಗಿದೆ. ಸರ್ವೋದಯ, ಸರ್ವದರ್ಮ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಈ ದಿಕ್ಕಿನಲ್ಲೇ ನಮ್ಮ ಸರ್ಕಾರ ಮುನ್ನಡೆಯಲಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com