ಬಳ್ಳಾರಿ: ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಇಂದಿನಿಂದ ಮಾರ್ಚ್ 6 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ದೇಶಾದ್ಯಂತ ನಡೆಯಲಿದೆ. ಬಳ್ಳಾರಿ ಜಿಲ್ಲೆ ಹೊಸಪೇಟೆಯ ಕಮಲಾಪುರ ಪ್ರಾಥಮಿಕ‌ ಆರೋಗ್ಯ ಕೇಂದ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಟ್ಟ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು.
ಸಿಎಂ ಸಿದ್ದರಾಮಯ್ಯ ಮತ್ತಿತರರು
ಸಿಎಂ ಸಿದ್ದರಾಮಯ್ಯ ಮತ್ತಿತರರು

ಬೆಂಗಳೂರು: ಇಂದಿನಿಂದ ಮಾರ್ಚ್ 6 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ದೇಶಾದ್ಯಂತ ನಡೆಯಲಿದೆ. ಬಳ್ಳಾರಿ ಜಿಲ್ಲೆ ಹೊಸಪೇಟೆಯ ಕಮಲಾಪುರ ಪ್ರಾಥಮಿಕ‌ ಆರೋಗ್ಯ ಕೇಂದ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಟ್ಟ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. ಕ್ರೀಡಾ ಸಚಿವ ನಾಗೇಂದ್ರ, ಶಾಸಕ ಗವಿಯಪ್ಪ ಮತ್ತಿತರರು ಈ ಸಂದರ್ಭದಲ್ಲಿಉಪಸ್ಥಿತರಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ನೀವೂ ಕೂಡ ತಪ್ಪದೇ ನಿಮ್ಮ ಮನೆಯ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಿ, ಅವರ ನೆಮ್ಮದಿಯ ನಾಳೆಗಳನ್ನು ಖಾತ್ರಿಪಡಿಸಿ ಎಂದು ಮನವಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತಿತರರು
ರಾಜ್ಯಾದ್ಯಂತ ಇಂದಿನಿಂದ ಮಾರ್ಚ್ 6 ರವರೆಗೆ ಪಲ್ಸ್ ಪೋಲಿಯೋ ಅಭಿಯಾನ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೋದಂಡರಾಮಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೋ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಅರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್, ರಾಷ್ಟ್ರೀಯ ಆರೋಗ್ಯ ಮಿಷನ್ (NHM) ನಿರ್ದೇಶಕರಾದ ಡಾ. ನವೀನ್ ಭಟ್, ಮುಖ್ಯ ಆರೋಗ್ಯಾಧಿಕಾರಿಯಾದ ಡಾ. ಮದನಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದಲ್ಲಿ ಲಸಿಕೆ ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು, ಎಲ್ಲಾ ಆರೋಗ್ಯ ಕೇಂದ್ರ, ಅಂಗನವಾಡಿ, ಶಾಲೆ, ಆಸ್ಪತ್ರೆ, ಬಸ್ , ರೈಲ್ವೆ, ವಿಮಾನ ನಿಲ್ದಾಣ, ಗ್ರಾಮ ಪಂಚಾಯಿತಿ, ಪ್ರವಾಸಿ ತಾಣ, ಸಮಾರಂಭಗಳು ನಡೆಯುವ ಸ್ಥಳಗಳಲ್ಲಿ ಲಸಿಕೆ ಲಭ್ಯವಾಗಿರುತ್ತದೆ. ಲಸಿಕಾ ಕೇಂದ್ರಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಲಸಿಕೆ ನೀಡಲಾಗುವುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com