ಚಿಕ್ಕಮಗಳೂರಿನಲ್ಲಿ ಇಂದು ಕಾಂಗ್ರೆಸ್ ಗ್ಯಾರಂಟಿ ಸಮಾವೇಶ: ಬೆಂಗಳೂರು ಸ್ಫೋಟ ಹಿನ್ನೆಲೆ ಹೈ ಅಲರ್ಟ್

ಮಾರ್ಚ್ 3ನೇ ತಾರೀಖು ಸರ್ಕಾರದಿಂದ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಗ್ಯಾರಂಟಿ ಸಮಾವೇಶ ಆಯೋಜಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚಿಕ್ಕಮಗಳೂರು: ಇಂದು ಮಾರ್ಚ್ 3ನೇ ತಾರೀಖು ಸರ್ಕಾರದಿಂದ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಗ್ಯಾರಂಟಿ ಸಮಾವೇಶ ಆಯೋಜಿಸಲಾಗಿದೆ. ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಘಟನೆ ನಡೆದ ಹಿನ್ನೆಲೆ ಗ್ಯಾರಂಟಿ ಸಮಾವೇಶಕ್ಕೆ ಭಾರೀ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಚಿಕ್ಕಮಗಳೂರು ನಗರದಾದ್ಯಂತ ಪೊಲೀಸ್ ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಚಿಕ್ಕಮಗಳೂರಿನ ಸುಭಾಶ್ಚಂದ್ರ ಬೋಸ್ ಆಟದ ಮೈದಾನದಲ್ಲಿ ಇಂದು ಸಮಾವೇಶ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನದ ಹಿನ್ನೆಲೆ ವೇದಿಕೆ ಸುತ್ತಮುತ್ತ ಭಾರೀ ಭದ್ರತೆ ಕಲ್ಪಿಸಲಾಗಿದೆ. ಸಮಾವೇಶ ಸ್ಥಳದಲ್ಲಿ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ ನಡೆಸಲಾಗಿದೆ. ಚಿಕ್ಕಮಗಳೂರು ಎಸ್ಪಿ ವಿಕ್ರಂ ಆಮ್ಟೆ ನೇತೃತ್ವದಲ್ಲಿ ಗ್ಯಾರಂಟಿ ಸಮಾವೇಶ ನಡೆಯುವ ಸ್ಥಳ ಹಾಗೂ ಸುತ್ತಮುತ್ತಲೂ ತಪಾಸಣೆ ನಡೆಸಲಾಗಿದೆ. ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಕೆಜೆ ಜಾರ್ಜ್ ಸಿಎಂ ಭಾಗವಹಿಸಲಿದ್ದಾರೆ.

ಸಾಂದರ್ಭಿಕ ಚಿತ್ರ
ಬೇರೆ ಬ್ರಾಂಚ್ ನಲ್ಲೂ ಅನುಮಾನಾಸ್ಪದ ಬ್ಯಾಗ್ ಪತ್ತೆ, ಶಿವರಾತ್ರಿಗೇ ಪುನಾರಂಭ: ರಾಮೇಶ್ವರಂ ಕೆಫೆ ಮಾಲೀಕ

ಹೆಲಿಕಾಪ್ಟರ್ ಮೂಲಕ 11 ಗಂಟೆಗೆ ಚಿಕ್ಕಮಗಳೂರಿಗೆ ಆಗಮಿಸಲಿರುವ ಸಿಎಂ, ಡಿಸಿಎಂ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯನವರು 28 ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪ್ರಯಾಣಿಕರ ಬಸ್ಸುಗಳ ಕರೆತರಲು 300ಕ್ಕೂ ಹೆಚ್ಚು KSRTC ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದ ಭದ್ರತೆಗಾಗಿ 1 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com