ಕೆಫೆ ಸ್ಫೋಟ ಪ್ರಕರಣ ಅಗತ್ಯಬಿದ್ದರೆ NIA ತನಿಖೆ-ಸಿಎಂ; 3 ವರ್ಷದ ಮಗುವಿಗೆ ತಾಯಿಯಿಂದ ಚಿತ್ರ ಹಿಂಸೆ: ಈ ದಿನದ ಸುದ್ದಿ ಮುಖ್ಯಾಂಶಗಳು 03-03-2024

ಅಗತ್ಯ ಬಿದ್ದರೆ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಹಸ್ತಾಂತರಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರonline desk

ಬೆಂಗಳೂರು: ಅಗತ್ಯ ಬಿದ್ದರೆ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಹಸ್ತಾಂತರಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಹೇಳಿರುವ ಸಿಎಂ, ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹದ ಕುರಿತು ಪ್ರತಿಕ್ರಿಯೆ ನೀಡಿದ್ದು, ತನಿಖೆ ಆರಂಭವಾಗಿದೆ. ಇದುವರೆಗೂ ಯಾವುದೇ ಆರೋಪಿಯನ್ನು ಬಂಧಿಸಿಲ್ಲ. ಎನ್ಐಎ ತನಿಖೆ ಅಗತ್ಯವಿದ್ದಲ್ಲಿ ನಾವು ಆ ಬಗ್ಗೆ ಯೋಚಿಸುತ್ತೇವೆ ಎಂದರು. ಈ ಪ್ರಕರಣದ ಬಗ್ಗೆ ಮಾತನಾಡಿರುವ ಗೃಹ ಸಚಿವ ಪರಮೇಶ್ವರ್, ಘಟನೆ ಸಂಬಂಧ ಕೆಲವು ಮಾಹಿತಿ ಲಭ್ಯವಾಗಿದೆ. ಇನ್ನು ಹೆಚ್ಚಿನ ಮಾಹಿತಿ ಕಲೆ ಹಾಕ್ತಿದ್ದೇವೆ. ಸ್ಪೋಟ ಮಾಡಿದ ವ್ಯಕ್ತಿಯ ಮಾಹಿತಿ ಸಿಕ್ಕಿದೆ. ವ್ಯಕ್ತಿಯನ್ನು ಆದಷ್ಟು ಬೇಗ ಹಿಡಿಯುತ್ತೇವೆ. ಒಂದು ದಿನ, ಎರಡು ದಿನ ಆಗಬಹುದು ಎಂದು ಹೇಳಿದ್ದಾರೆ.

ಮೈಸೂರು ವಿಶ್ವವಿದ್ಯಾಲಯದ 104ನೇ ಘಟಿಕೋತ್ಸವ ಸಮಾರಂಭ ಇಂದು ನಡೆದಿದ್ದು, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ, ಪ್ರಾಧ್ಯಾಪಕ ಡಾ. ಭಾಷ್ಯಂ ಸ್ವಾಮೀಜಿ ಮತ್ತು ಎಂ.ಆರ್. ಸೀತಾರಾಮ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಯಿತು. ಘಟಿಕೋತ್ಸವ ಸಮಾರಂಭದಲ್ಲಿ ವಿಶ್ವವಿಖ್ಯಾತ ಕ್ರಿಕೆಟಿಗರಾದ ಜಾವಗಲ್ ಶ್ರೀನಾಥ್ ಅವರಿಗೆ ಗೌರವ ಪದವಿ ನೀಡಿ ಗೌರವಿಸಲು ನಿರ್ಧರಿಸಲಾಗಿತ್ತು. ಆದರೆ ಅವರ ಬಿಡುವಿಲ್ಲದ ಕಾರಣ ಅಂದು ಬರಲಾಗಲಿಲ್ಲ. ಈ ಘಟಿಕೋತ್ಸವದಲ್ಲಿ ಅವರನ್ನೂ ಗೌರವಿಸಲಾಗಿದೆ. ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಈ ಸಾಧಕರ ಸಾಧನೆ ಪ್ರತಿಯೊಬ್ಬರಿಗೂ ಸ್ಫೂರ್ತಿ. ಈ ಸಾಧಕರ ಸಾಧನೆ ಹೀಗೆ ನಿರಂತರವಾಗಿರಲಿ ಎಂದು ಆಶಿಸುವುದಾಗಿ ತಿಳಿಸಿದರು.

ಸಾಂಕೇತಿಕ ಚಿತ್ರ
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಅಗತ್ಯ ಬಿದ್ದರೆ ಎನ್‌ಐಎಗೆ ಹಸ್ತಾಂತರಿಸುವ ಬಗ್ಗೆ ಚಿಂತನೆ: ಸಿಎಂ ಸಿದ್ದರಾಮಯ್ಯ

ಇಂದಿನಿಂದ ಮಾರ್ಚ್ 6 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ದೇಶಾದ್ಯಂತ ನಡೆಯಲಿದ್ದು ಬಳ್ಳಾರಿ ಜಿಲ್ಲೆ ಹೊಸಪೇಟೆಯ ಕಮಲಾಪುರ ಪ್ರಾಥಮಿಕ‌ ಆರೋಗ್ಯ ಕೇಂದ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಟ್ಟ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. ಕ್ರೀಡಾ ಸಚಿವ ನಾಗೇಂದ್ರ, ಶಾಸಕ ಗವಿಯಪ್ಪ ಮತ್ತಿತರರು ಈ ಸಂದರ್ಭದಲ್ಲಿಉಪಸ್ಥಿತರಿದ್ದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೋದಂಡರಾಮಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ರಾಜ್ಯದಲ್ಲಿ ಲಸಿಕೆ ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು, ಎಲ್ಲಾ ಆರೋಗ್ಯ ಕೇಂದ್ರ, ಅಂಗನವಾಡಿ, ಶಾಲೆ, ಆಸ್ಪತ್ರೆ, ಬಸ್ , ರೈಲ್ವೆ, ವಿಮಾನ ನಿಲ್ದಾಣ, ಗ್ರಾಮ ಪಂಚಾಯಿತಿ, ಪ್ರವಾಸಿ ತಾಣ, ಸಮಾರಂಭಗಳು ನಡೆಯುವ ಸ್ಥಳಗಳಲ್ಲಿ ಲಸಿಕೆ ಲಭ್ಯವಾಗಿರುತ್ತದೆ.

ಸಾಂಕೇತಿಕ ಚಿತ್ರ
ರಾಜ್ಯಾದ್ಯಂತ ಇಂದಿನಿಂದ ಮಾರ್ಚ್ 6 ರವರೆಗೆ ಪಲ್ಸ್ ಪೋಲಿಯೋ ಅಭಿಯಾನ!

ಕೊಡಗಿನ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದ ನಿಶಾನಿ ಬೆಟ್ಟದಲ್ಲಿ ವೃದ್ಧನ ಶವವೊಂದು ಪತ್ತೆಯಾಗಿದ್ದು ಕಾಡಾನೆ ದಾಳಿಗೆ ವೃದ್ಧ ಬಲಿ ಆಗಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಸಂಜೆಯಿಂದ‌ ಅಪ್ಪಚ್ಚ ಕಾಣೆಯಾಗಿದ್ದು, ಇಂದು ಬೆಟ್ಟದಲ್ಲಿ ಅವರ ಶವವಾಗಿ ಪತ್ತೆಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಘಟನಾ ಸ್ಥಳ ಮತ್ತು ಆಸುಪಾಸಿನಲ್ಲಿ ಆನೆ ನಡೆದಾಡಿದ ಹೆಜ್ಜೆ ಗುರುತುಗಳು ಕಂಡುಬಂದಿದ್ದರಿಂದ ಆನೆ ದಾಳಿಯಿಂದ ಸಾವು ಎಂದು ಸಂಶಯಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹೆತ್ತ ತಾಯಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಎರಡು ವರ್ಷದ ಮಗುವನ್ನು ಮನೆಯಲ್ಲಿ ಕೂಡಿ ಹಾಕಿ, ಹಲ್ಲೆ ನಡೆಸಿ ಚಿತ್ರ ಹಿಂಸೆ ನೀಡಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮಹಿಳೆ ಗಂಡನಿಂದ ವಿಚ್ಛೇಧನ ಪಡೆದಿದ್ದು, ಮಗುವಿನ ಮೈ ತುಂಬ ಗಾಯಗಳಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ವತಃ ಮಗು ತನಗೆ ಹೇಗೆಲ್ಲ ಹೊಡೆದು ಹಿಂಸೆ ಕೊಡುತ್ತಿದ್ದರು ಎಂಬುದನ್ನು ಹೇಳಿದೆ.

ಗುತ್ತಿಗೆದಾರರ ಬಾಕಿ ಬಿಲ್ ಗಳಿಗೆ ಸರ್ಕಾರ ಹಣ ಬಿಡುಗಡೆ ಮಾಡಿದ್ದು, ಅದೇ ರೀತಿ ಬಾಕಿ ಉಳಿದಿರುವ ಔಷಧ ಬಿಲ್ ಗಳಿಗೆ ಹಣ ಪಾವತಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಔಷಧ ವಿತರಕರು ಮನವಿ ಮಾಡಿಕೊಂಡಿದ್ದಾರೆ. ಆರೋಗ್ಯ ಇಲಾಖೆ ಅಧೀನದ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮಕ್ಕೆ ಪೂರೈಸಿದ್ದ ಕೋಟ್ಯಂತರ ರೂಪಾಯಿ ಔಷಧ ಬಿಲ್ ಗಳು ಬಾಕಿ ಉಳಿದಿವೆ. ಬಿಲ್ ಹಣ ಪಾವತಿ ವಿಳಂಬದಿಂದಾಗಿ ನಮಗೆ ತೊಂದರೆಯಾಗುತ್ತಿದೆ ಎಂದು ವಿತರರಕರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com