

ಮಂಗಳೂರು: ಪಣಂಬೂರು ಬೀಚ್‌ನಲ್ಲಿ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಸಿಲುಕಿ ಮೂವರು ಯುವಕರು ಕೊಚ್ಚಿ ಹೋಗಿರುವ ಘಟನೆ ಭಾನುವಾರ ವರದಿಯಾಗಿದೆ.
ಲೈಫ್ ಗಾರ್ಡ್ ಎಚ್ಚರಿಕೆಯ ಹೊರತಾಗಿಯೂ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಮೂವರು ಯುವಕರು ನಾಪತ್ತೆಯಾಗಿದ್ದು, ಆಲೆಗಳಲ್ಲಿ ಕೊಚ್ಚಿ ಹೋದ ಯುವಕರನ್ನು ಮಿಲನ್(20), ಲಿಖಿತ್(18) ಹಾಗೂ ನಾಗರಾಜ್ (24) ಎಂದು ಗುರುತಿಸಲಾಗಿದೆ.
ಮಿಲನ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಲಿಖಿತ್ ಕೈಕಂಬದ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ನಾಗರಾಜ್ ಬೈಕಂಪಾಡಿಯ ಕಂಪನಿಯಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಭಾನುವಾರ ಸಂಜೆ 6 ಗಂಟೆಯ ಸುಮಾರಿಗೆ ಪಣಂಬೂರು ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದ ವೇಳೆ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ಮೂವರೂ ನೀರು ಪಾಲಾಗಿದ್ದಾರೆ. ನಾಪತ್ತೆಯಾದ ಯುವಕರಿಗಾಗಿ ಮುಳುಗತಜ್ಞರು ಹುಡುಕಾಟ ನಡೆಸುತ್ತಿದ್ದಾರೆ.
Advertisement