ರಾಜ್ಯಾದ್ಯಂತ ಇಂದಿನಿಂದ ಮಾರ್ಚ್ 6 ರವರೆಗೆ ಪಲ್ಸ್ ಪೋಲಿಯೋ ಅಭಿಯಾನ!

ಇಂದಿನಿಂದ ಮಾರ್ಚ್ 6 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದೆ. ದೇಶಕ್ಕೆ ಸದೃಢ, ಆರೋಗ್ಯವಂತ ಮಕ್ಕಳನ್ನು ರೂಪಿಸುವ ಉದ್ದೇಶದಿಂದ ದೇಶಾದ್ಯಂತ ಅಭಿಯಾನ ಆಯೋಜಿಸಲಾಗಿದ್ದು, 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಇಂದಿನಿಂದ ಮಾರ್ಚ್ 6 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದೆ. ದೇಶಕ್ಕೆ ಸದೃಢ, ಆರೋಗ್ಯವಂತ ಮಕ್ಕಳನ್ನು ರೂಪಿಸುವ ಉದ್ದೇಶದಿಂದ ದೇಶಾದ್ಯಂತ ಅಭಿಯಾನ ಆಯೋಜಿಸಲಾಗಿದ್ದು, 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗುತ್ತಿದೆ.

ಪೋಲಿಯೋ ರೋಗ ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, 5 ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಇದರಿಂದ ಶಾಶ್ವತ ಅಂಗವೈಕಲ್ಯ ಉಂಟಾಗಬಹುದು. ಆದರಿಂದ ತಪ್ಪದೇ ಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರವನ್ನಾಗಿ ಮಾಡಲು ಜನತೆ ಕೈ ಜೋಡಿಸಬೇಕಾಗಿದೆ.

ರಾಜ್ಯದಲ್ಲಿ ಲಸಿಕೆ ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದೆ. ಎಲ್ಲಾ ಆರೋಗ್ಯ ಕೇಂದ್ರ, ಅಂಗನವಾಡಿ, ಶಾಲೆ, ಆಸ್ಪತ್ರೆ, ಬಸ್ , ರೈಲ್ವೆ, ವಿಮಾನ ನಿಲ್ದಾಣ, ಗ್ರಾಮ ಪಂಚಾಯಿತಿ, ಪ್ರವಾಸಿ ತಾಣ, ಸಮಾರಂಭಗಳು ನಡೆಯುವ ಸ್ಥಳಗಳಲ್ಲಿ ಲಸಿಕೆ ಲಭ್ಯವಾಗಿರುತ್ತದೆ. ಲಸಿಕಾ ಕೇಂದ್ರಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಲಸಿಕೆ ನೀಡಲಾಗುವುದು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋ ಸಂದೇಶ ನೀಡಿರುವ ವೈದ್ಯಕೀಯ ಶಿಕ್ಷಣ ಡಾ.ಶರಣ ಪ್ರಕಾಶ್ ಪಾಟೀಲ್, ಹತ್ತಿರದ ಅಂಗನವಾಡಿ ಅಥವಾ ಪೋಲಿಯೋ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ, 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ ಪೋಲಿಯೊ ಮುಕ್ತ ಭಾರತ ಮುನ್ನಡೆಯಲು ಸಹಕರಿಸಿ ಎಂದು ಜನತೆಗೆ ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com