ಮಂಗಳೂರಿನ ಕಡಬ ಸರ್ಕಾರಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ: ಆರೋಪಿ ಬಂಧನ

ಕಡಬ ಸರಕಾರಿ ಕಾಲೇಜು ಆವರಣದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನಲ್ಲಿ ಸೋಮವಾರ ಘನಘೋರ ಘಟನೆಯೊಂದು ನಡೆದಿದ್ದು, ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ (Acid Attack) ನಡೆದಿದೆ.

ಕಿರಾತಕನೋರ್ವ ಮೂವರು ವಿದ್ಯಾರ್ಥಿನಿಯರ ಮೇಲೆ ಕಾಲೇಜು ಪಕ್ಕ ಆ್ಯಸಿಡ್ ಹಾಕಿ ಪರಾರಿಯಾಗಿದ್ದಾನೆ. ಕಡಬದ ಸರ್ಕಾರಿ ಕಾಲೇಜು ಆವರಣದಲ್ಲಿ ಈ ಪೈಶಾಚಿಕ ಕೃತ್ಯ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಾಂದರ್ಭಿಕ ಚಿತ್ರ
ಆಸಿಡ್ ದಾಳಿ ವಿರುದ್ಧ ರಕ್ಷಣೆಗೆ 25 ಮಂದಿ ವೃತ್ತಿಪರರಿಗೆ ತರಬೇತಿ!

ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಅವರಲ್ಲಿ ಓರ್ವ ವಿದ್ಯಾರ್ಥಿನಿ ಸ್ಥಿತಿ ಚಿಂತಾಜನಕವಾಗಿದೆ ಎಂದು ಪ್ರಾರ್ಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ನಡೆದ ಘಟನೆಯೇನು: ಈಗ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಇಂದು ಬೆಳಗ್ಗೆ ಕಡಬ ಸರಕಾರಿ ಕಾಲೇಜಿನ ಆವರಣದಲ್ಲಿ ಪರೀಕ್ಷಾ ತಯಾರಿ ನಡೆಸುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಕಿಡಿಗೇಡಿಯೊಬ್ಬ ಆ್ಯಸಿಡ್ ದಾಳಿ ನಡೆಸಿದ್ದಾನೆ. ಆರೋಪಿ ಕೇರಳ ಮೂಲದ ಅಬೀನ್ ಎಂಬಾತನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಆರೋಪಿ ಮಾಸ್ಕ್, ಹ್ಯಾಟ್ ಹಾಕಿಕೊಂಡು ಬಂದು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ. ಈತ ಎಂಬಿಎ ವ್ಯಾಸಂಗ ಮಾಡುತ್ತಿದ್ದ. ಅಲೀನಾ ಸಿಬಿ ಎಂಬ ವಿದ್ಯಾರ್ಥಿನಿಯನ್ನ ಟಾರ್ಗೆಟ್ ಮಾಡಿ ಈತ ದಾಳಿ ನಡೆಸಿದ್ದಾನೆ. ಪರಿಣಾಮ ಆಕೆಯ ಗೆಳತಿಯರಿಗೂ ಗಂಭೀರ ಗಾಯವಾಗಿದೆ.

ಸದ್ಯ ಗಾಯಗೊಂಡ ವಿದ್ಯಾರ್ಥಿನಿಯರಿಗೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗುತ್ತಿದೆ.

ಸಂತ್ರಸ್ತ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಪ್ರೀತಿಯನ್ನು ತಿರಸ್ಕರಿಸಿದ್ದಕ್ಕೆ ಆರೋಪಿ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿರಬಹುದು ಎಂದು ಘಟನೆ ನಡೆದ ಕಡಬ ಸರಕಾರಿ ಕಾಲೇಜಿಗೆ ಭೇಟಿ ನೀಡಿದ ದಕ್ಷಿಣ ಕನ್ನಡ ಜಿಲ್ಲೆ ಎಸ್ಪಿ ಸಿ.ಬಿ.ರೈಶ್ಯಂತ್ ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ
2022ರಲ್ಲಿ ಮಹಿಳೆಯರ ಮೇಲೆ ಆಸಿಡ್ ದಾಳಿ: ಬೆಂಗಳೂರಿಗೆ ಅಗ್ರಸ್ಥಾನ- NCRB ವರದಿ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com