ರಾಮೇಶ್ವರಂ ಕೆಫೆ ಸ್ಫೋಟ: 9 ನಿಮಿಷ ಹೊಟೆಲ್ ನಲ್ಲಿ ಕುಳಿತಿದ್ದ ಶಂಕಿತ ವ್ಯಕ್ತಿ, ಸಿಸಿಟಿವಿ ವಿಡಿಯೋ ವೈರಲ್

ಕಳೆದ ವಾರ ಬೆಂಗಳೂರಿನ ಜನಪ್ರಿಯ ರಾಮೇಶ್ವರ ಕೆಫೆಯಲ್ಲಿ ನಡೆದ ಬಾಂಬ್ ದಾಳಿ ನಡೆಸಿದ ಶಂಕಿತ ಆರೋಪಿ ಅಲ್ಲಿ ಒಂಬತ್ತು ನಿಮಿಷಗಳನ್ನು ಕಳೆದಿದ್ದು, ಈ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ದಾಖಲಾಗಿವೆ.
ರಾಮೇಶ್ವರಂ ಕೆಫೆ ಸ್ಫೋಟ ಶಂಕಿತ ವ್ಯಕ್ತಿ
ರಾಮೇಶ್ವರಂ ಕೆಫೆ ಸ್ಫೋಟ ಶಂಕಿತ ವ್ಯಕ್ತಿ

ಬೆಂಗಳೂರು: ಕಳೆದ ವಾರ ಬೆಂಗಳೂರಿನ ಜನಪ್ರಿಯ ರಾಮೇಶ್ವರ ಕೆಫೆಯಲ್ಲಿ ನಡೆದ ಬಾಂಬ್ ದಾಳಿ ನಡೆಸಿದ ಶಂಕಿತ ಆರೋಪಿ ಅಲ್ಲಿ ಒಂಬತ್ತು ನಿಮಿಷಗಳನ್ನು ಕಳೆದಿದ್ದು, ಈ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ದಾಖಲಾಗಿವೆ.

ಹೊಸದಾಗಿ ಬಿಡುಗಡೆಯಾಗಿರುವ ಸಿಸಿಟಿವಿ ವಿಡಿಯೋ ತುಣುಕಿನಲ್ಲಿ ಶಂಕಿತ ವ್ಯಕ್ತಿ ಸನ್‌ಗ್ಲಾಸ್, ಮಾಸ್ಕ್ ಮತ್ತು ಬೇಸ್‌ಬಾಲ್ ಟೋಪಿ ಧರಿಸಿ ಬಸ್ ನಿಲ್ದಾಣದಿಂದ ರಾಮೇಶ್ವರಂ ಕೆಫೆ ಕಡೆಗೆ ಹೋಗುತ್ತಿರುವುದನ್ನು ತೋರಿಸುತ್ತದೆ. ಶುಕ್ರವಾರ ಬೆಳಗ್ಗೆ 11.34ಕ್ಕೆ ಬೆಂಗಳೂರಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಕೆಫೆ ಪ್ರವೇಶಿಸಿದ ಆತ ಕೆಲ ಹೊತ್ತು ಮೊಬೈಲ್‌ನಲ್ಲಿ ಮಾತನಾಡಿದ್ದಾನೆ. ಮತ್ತೊಂದು ದೃಶ್ಯಾವಳಿಯಲ್ಲಿ ಶಂಕಿತ ವ್ಯಕ್ತಿಯು 11.43 ಕ್ಕೆ ಕೆಫೆಯಿಂದ ಹೊರಹೋಗುವುದನ್ನು ತೋರಿಸುತ್ತದೆ. ಆತ ಬಂದಷ್ಟೇ ಆತುರದಿಂದ ಕೆಫೆಯಿಂದ ಹೊರಟು ಹೋಗುತ್ತಾನೆ.

ರಾಮೇಶ್ವರಂ ಕೆಫೆ ಸ್ಫೋಟ ಶಂಕಿತ ವ್ಯಕ್ತಿ
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ತನಿಖೆ NIAಗೆ ಹಸ್ತಾಂತರ

ಶಂಕಿತ ಆರೋಪಿ ರಾಮೇಶ್ವರಂ ಕೆಫೆಯಲ್ಲಿ ಕೇವಲ ಒಂಬತ್ತು ನಿಮಿಷಗಳ ಕಾಲ ಕಳೆದಿದ್ದಾನೆ ಎಂದು ಸಿಸಿಟಿವಿ ಸಾಕ್ಷ್ಯಗಳು ಹೇಳುತ್ತಿವೆ. ಪೊಲೀಸ್ ಮೂಲಗಳ ಪ್ರಕಾರ ಶಂಕಿತ ವ್ಯಕ್ತಿ ರಾಮೇಶ್ವರಂ ಕೆಫೆಯೊಳಗೆ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಇರುವ ಬ್ಯಾಗನ್ನು ಬಿಟ್ಟು ಹೋಗಿದ್ದ.ಆತ ಬಿಟ್ಟು ಹೋಗಿದ್ದ ಬ್ಯಾಗ್ ನಲ್ಲಿದ್ದ ಸುಧಾರಿತ ಬಾಂಬ್ ಸ್ಫೋಟಗೊಂಡು ಸ್ಫೋಟದಲ್ಲಿ ಕೆಫೆಯ ಕೆಲ ಸಿಬ್ಬಂದಿ ಸೇರಿದಂತೆ 10 ಮಂದಿ ಗಾಯಗೊಂಡಿದ್ದರು.

ಈ ಗಂಭೀರ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ಇದಕ್ಕೂ ಮುನ್ನ ಬೆಂಗಳೂರು ಪೊಲೀಸರು ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.

ರಾಮೇಶ್ವರಂ ಕೆಫೆ ಸ್ಫೋಟ ಶಂಕಿತ ವ್ಯಕ್ತಿ
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ: ಪ್ರಿಯಾಂಕ್ ಖರ್ಗೆ

ವಿಭಿನ್ನ ದಿಕ್ಕುಗಳಲ್ಲಿ ತನಿಖೆ: ಗೃಹ ಸಚಿವ ಜಿ ಪರಮೇಶ್ವರ್

ಇನ್ನು ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಜಿ ಪರಮೇಶ್ವರ್, "ನಾವು ನಮ್ಮ ತನಿಖೆಯನ್ನು ಮುಂದುವರೆಸುತ್ತಿದ್ದೇವೆ. ಎಂಟು ತಂಡಗಳನ್ನು ರಚಿಸಲಾಗಿದೆ ಮತ್ತು ಎಲ್ಲರೂ ವಿಭಿನ್ನ ದಿಕ್ಕುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ವಿಭಿನ್ನ ಅಂಶಗಳನ್ನು ನೋಡುತ್ತಿದ್ದಾರೆ. ನಾವು ಹಲವಾರು ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ್ದೇವೆ" ಎಂದು ಹೇಳಿದ್ದಾರೆ. ಅಂತೆಯೇ "ಮಂಗಳೂರು ಸ್ಫೋಟಕ್ಕೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿದೆಯೇ ಎಂಬುದು ನಮಗೆ ತಿಳಿದಿಲ್ಲ. ಅವರು ತಾಂತ್ರಿಕವಾಗಿ ಇದೇ ರೀತಿಯ ವಸ್ತು ಮತ್ತು ಅದೇ ವ್ಯವಸ್ಥೆಯನ್ನು ಬಳಸಿದ್ದಾರೆ. ನಿನ್ನೆ NSG (ರಾಷ್ಟ್ರೀಯ ಭದ್ರತಾ ಸಿಬ್ಬಂದಿ) ಇಲ್ಲಿಗೆ ಬಂದಿದ್ದಾರೆ. ಶೀಘ್ರ ಖಂಡಿತವಾಗಿಯೂ ಶಂಕಿತ ವ್ಯಕ್ತಿಯನ್ನು ಪತ್ತೆ ಮಾಡಿ ಬಂಧಿಸುತ್ತೇವೆ. ಈ ಸಂಬಂಧ ನಿನ್ನೆ ಸಭೆ ನಡೆಸಿ ಮುಖ್ಯಮಂತ್ರಿಗೆ ಮಾಹಿತಿ ನೀಡಿದ್ದೇವೆ ಎಂದು ಪರಮೇಶ್ವರ ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com