ಸಿಎಂ ಸಿದ್ದರಾಮಯ್ಯ ಮತ್ತಿತರರು
ಸಿಎಂ ಸಿದ್ದರಾಮಯ್ಯ ಮತ್ತಿತರರು

ವೃಷಭಾವತಿ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ವೃಷಭಾವತಿ ಏತ ನೀರಾವರಿ ಯೋಜನೆಯ ಮೊದಲ ಹಂತದಲ್ಲಿ 70 ಕೆರೆಗಳಿಗೆ ನೀರು ತುಂಬಿಸಲಾಗುವುದು. ಇದರಿಂದ ನಾಲ್ಕು ಜಿಲ್ಲೆಗಳ ಅಂತರ್ಜಲ ಪ್ರಮಾಣ ವೃದ್ಧಿಯಾಗುತ್ತದೆ. ಜಮೀನುಗಳಿಗೆ ನೀರಿನ ಆಸರೆ ಹೆಚ್ಚಾಗಿ ಜನರ ಆರ್ಥಿಕ ಶಕ್ತಿಯೂ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Published on

ನೆಲಮಂಗಲ: ವೃಷಭಾವತಿ ಏತ ನೀರಾವರಿ ಯೋಜನೆಯ ಮೊದಲ ಹಂತದಲ್ಲಿ 70 ಕೆರೆಗಳಿಗೆ ನೀರು ತುಂಬಿಸಲಾಗುವುದು. ಇದರಿಂದ ನಾಲ್ಕು ಜಿಲ್ಲೆಗಳ ಅಂತರ್ಜಲ ಪ್ರಮಾಣ ವೃದ್ಧಿಯಾಗುತ್ತದೆ. ಜಮೀನುಗಳಿಗೆ ನೀರಿನ ಆಸರೆ ಹೆಚ್ಚಾಗಿ ಜನರ ಆರ್ಥಿಕ ಶಕ್ತಿಯೂ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನೆಲಮಂಗಲದಲ್ಲಿಂದು ಆಯೋಜಿಸಿದ ಕಾರ್ಯಕ್ರಮದಲ್ಲಿ ವೃಷಭಾವತಿ ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ಹಾಗೂ ನೆಲಮಂಗಲ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ, 3 ಸಾವಿರ ಕೋಟಿ ರೂಪಾಯಿಯನ್ನು ಕೆ.ಸಿ.ವ್ಯಾಲಿ ಮತ್ತು ಹೆಚ್.ಎನ್.ವ್ಯಾಲಿಗೆ ಖರ್ಚು ಮಾಡಿದ್ದೆವು. ಈಗ ವೃಷಭಾವತಿ ಯೋಜನೆಯನ್ನು 2,240 ಕೋಟಿ ಖರ್ಚು ಮಾಡಿ ಜಾರಿ ಮಾಡುತ್ತಿದ್ದೇವೆ. ಇದರಿಂದ ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು ಜಿಲ್ಲೆಗಳ ಜನರ ನೀರಿನ ಬವಣೆ ಶಾಶ್ವತವಾಗಿ ತೀರುತ್ತದೆ ಎಂದರು.

ರಾಜ್ಯ ಬಿಜೆಪಿ ಕೇವಲ ನಿಮ್ಮ ಭಾವನೆಗಳನ್ನು ಕೆರಳಿಸುತ್ತದೆ ನಾವು ನಿಮ್ಮ ಬದುಕಿಗೆ ಬೇಕಾದ ಕಾರ್ಯಕ್ರಮಗಳನ್ನು ರೂಪಿಸುತ್ತೇವೆ.ನಾವು ಮಾಡುವ ನೀರಾವರಿ ಯೋಜನೆ, ಕುಡಿಯುವ ನೀರಿನ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಹಿಂದಿನ ಸರ್ಕಾರ ಏಕೆ ಮಾಡಲಿಲ್ಲ? ಕೇವಲ ನಿಮ್ಮನ್ನು ಭಾವನಾತ್ಮಕವಾಗಿ ಮರುಳು ಮಾಡಿದರೆ ಸಾಕಾ? ಎಂದು ಪ್ರಶ್ನಿಸಿದ ಮುಖ್ಯಮಂತ್ರಿ, ಕಾಂಗ್ರೆಸ್ ಸರ್ಕಾರ ದೇವರು - ಧರ್ಮದ ಹೆಸರಲ್ಲಿ ಮರುಳು ಮಾಡಿ ಅಧಿಕಾರ ನಡೆಸುವುದಿಲ್ಲ. ಅನ್ನ - ಆರೋಗ್ಯ - ಅಕ್ಷರ - ಸೂರು - ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com