ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಟೀಕೆ

ಕರ್ನಾಟಕದಲ್ಲಿ ಇತ್ತೀಚಿನ ಆಸಿಡ್ ದಾಳಿ ಮತ್ತು ಬಾಂಬ್ ಸ್ಫೋಟದ ಘಟನೆಗಳ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಉಡುಪಿ ಲೋಕಸಭಾ ಸಂಸದೆ ಮತ್ತು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ತೀವ್ರವಾಗಿ ಟೀಕಿಸಿದ್ದಾರೆ.
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ
Updated on

ನವದೆಹಲಿ: ಕರ್ನಾಟಕದಲ್ಲಿ ಇತ್ತೀಚಿನ ಆಸಿಡ್ ದಾಳಿ ಮತ್ತು ಬಾಂಬ್ ಸ್ಫೋಟದ ಘಟನೆಗಳ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಉಡುಪಿ ಲೋಕಸಭಾ ಸಂಸದೆ ಮತ್ತು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ತೀವ್ರವಾಗಿ ಟೀಕಿಸಿದ್ದಾರೆ.

ಮಂಗಳೂರಿನ ಕಡಬ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ಕೇರಳ ಮೂಲದ ಶಂಕಿತ ವ್ಯಕ್ತಿಯೊಬ್ಬರು ನಡೆಸಿದ ಆಸಿಡ್ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಶೋಭಾ ಕರಂದ್ಲಾಜೆ, ಕಾನೂನು ಮತ್ತು ಸುವ್ಯವಸ್ಥೆಯ ತೀವ್ರ ಸವಾಲುಗಳನ್ನು ಒತ್ತಿ ಹೇಳಿದ್ದಾರೆ.

ಶೋಭಾ ಕರಂದ್ಲಾಜೆ
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ತನಿಖೆ NIAಗೆ ಹಸ್ತಾಂತರ

"ಕಡಬ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಇತ್ತೀಚೆಗೆ ವಿದ್ಯಾರ್ಥಿನಿಯರ ಮೇಲೆ ಕೇರಳದ ಆರೋಪಿಯೊಬ್ಬ ನಡೆಸಿದ ಆಸಿಡ್ ದಾಳಿಯು ಭೀಕರವಾದ ಕಾನೂನು ಮತ್ತು ಸುವ್ಯವಸ್ಥೆಯನ್ನು ಎತ್ತಿ ತೋರಿಸುತ್ತದೆ. ಹೆಚ್ಚುತ್ತಿರುವ ಅಪರಾಧಗಳ ಪ್ರಮಾಣವನ್ನು ನಿಯಂತ್ರಿಸುವಲ್ಲಿ ವಿಫಲವಾದ ಕಾರಣಕ್ಕಾಗಿ ಗೃಹ ಸಚಿವ ಜಿ ಪರಮೇಶ್ವರ ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ,ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದಾರೆ.

ಪ್ರತಿದಿನವೂ ಹೊಸ ಅಪರಾಧಗಳು ನಡೆಯುತ್ತಿರುವುದು ಸರ್ಕಾರದ ಅಸಮರ್ಥತೆಯನ್ನು ತೋರಿಸುತ್ತದೆ. ಗೃಹ ಸಚಿವ ಪರಮೇಶ್ವರ ಅವರ ನಿಷ್ಪರಿಣಾಮಕಾರಿ ನಾಯಕತ್ವ ಎದ್ದುಕಾಣುತ್ತಿದೆ. ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತೇನೆ. ಕರ್ನಾಟಕದ ನಾಗರಿಕರ ಸುರಕ್ಷತೆಗೆ ಧಕ್ಕೆ ತರಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com