ಅಪ್ರಾಪ್ತ ಮಕ್ಕಳ ಮೇಲೆ ನಿಲ್ಲದ ಕ್ರೌರ್ಯ: 3 ವರ್ಷಗಳಲ್ಲಿ ಸಹಾಯವಾಣಿಗೆ ಬಂದಿವೆ 1,07,305 ಕರೆಗಳು!

ರಾಜ್ಯದಲ್ಲಿ ಅಪ್ರಾಪ್ತ ಮಕ್ಕಳ ಮೇಲಿನೆ ದೌರ್ಜನ್ಯ, ಕಿರುಕುಳ ಪ್ರಕರಣಗಳು ಹೆಚ್ಚುತ್ತಿದ್ದು, ಈ ಬೆಳವಣಿಗೆಗೆ ಮಕ್ಕಳ ಹಕ್ಕುಗಳ ಕಾರ್ಯಕರ್ತರು ಕಳವಳ ವ್ಯಕ್ತಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಅಪ್ರಾಪ್ತ ಮಕ್ಕಳ ಮೇಲಿನೆ ದೌರ್ಜನ್ಯ, ಕಿರುಕುಳ ಪ್ರಕರಣಗಳು ಹೆಚ್ಚುತ್ತಿದ್ದು, ಈ ಬೆಳವಣಿಗೆಗೆ ಮಕ್ಕಳ ಹಕ್ಕುಗಳ ಕಾರ್ಯಕರ್ತರು ಕಳವಳ ವ್ಯಕ್ತಪಡಿಸಿದ್ದಾರೆ.

ಅಧಿವೇಶನದಲ್ಲಿ ಎಂಎಲ್‌ಸಿ ಮಧು ಜಿ ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಕಳೆದ ಮೂರು ವರ್ಷಗಳಲ್ಲಿ ಕಿರುಕುಳ, ದೌರ್ಜನ್ಯ, ನಿಂದನೆ, ವೈದ್ಯಕೀಯ, ಆಶ್ರಯ, ಪುನರ್ ವಸತಿ ಸೇರಿದಂತೆ ವಿವಿಧ ಕಾರಣಗಳಿಗಾಗಿ ಸೌಲಭ್ಯ, ರಕ್ಷಣೆ ಕೋರಿ ಒಟ್ಟು 1,07,305 ಕರೆಗಳು ಸ್ವೀಕೃತವಾಗಿವೆ ಎಂದು ಹೇಳಿದರು.

ಸ್ವಯಂ ಸೇವಾ ಸಂಸ್ಥೆಯ ಮೂಲಕ ನಿರ್ವಹಿಸಲಾಗುತ್ತಿದ್ದ ಉಚಿತ ಮಕ್ಕಳ ಸಹಾಯವಾಣಿ ಸಂಖ್ಯೆ1098 ಅನ್ನು ಹಿಂಪಡೆದು ‘ಮಿಷನ್ ವಾತ್ಸಲ್ಯ ಯೋಜನೆ’ಯಡಿ ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ತುರ್ತು ಸ್ಪಂದನಾ ಸಹಾಯ ವ್ಯವಸ್ಥೆ-112 (ಇ.ಆರ್.ಎಸ್.ಎಸ್.) ಯೊಂದಿಗೆ ವಿಲೀನಗೊಳಿಸಲಾಗಿದೆ. ಕಳೆದ 3 ವರ್ಷಗಳಲ್ಲಿ 2506 ದೌರ್ಜನ್ಯ, 1526 ಕಿರುಕುಳ, 852 ಆಶ್ರಯ, 328 ನಿಂದನೆ, 223 ಪುನರ್ ವಸತಿ, 141 ವೈದ್ಯಕೀಯ ಸೇರಿದಂತೆ 1,01,729 ಕರೆಗಳು ಸೇರಿದಂತೆ ರಾಜ್ಯದಾದ್ಯಂತ ಒಟ್ಟು 1,07,305 ಕರೆಗಳು ಸ್ವೀಕೃತವಾಗಿವೆ ಎಂದು ಮಾಹಿತಿ ನೀಡಿದರು.

ಸಂಗ್ರಹ ಚಿತ್ರ
ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣ: ಬೆಂಗಳೂರು ಆಗ್ನೇಯ ಪೊಲೀಸರಿಂದ 'ವಿ ಕೇರ್' ಸಹಾಯವಾಣಿ ಆರಂಭ

ಸ್ವದೇಶಿ ಮತ್ತು ವಿದೇಶಿ ದತ್ತು ಪ್ರಕ್ರಿಯೆ ಪ್ರಕಾರ, 2013-14ನೇ ಸಾಲಿನಿಂದ 17 ಫೆಬ್ರವರಿ 2024ರವರೆಗೆ ಒಟ್ಟು 3,175 ಮಕ್ಕಳನ್ನು ದತ್ತು ನೀಡಲಾಗಿದೆ. ಇದರಲ್ಲಿ ಸ್ವದೇಶಿ ದತ್ತು ಪೋಷಕರಿಗೆ ಒಟ್ಟು 2,880 ಮಕ್ಕಳನ್ನು ಹಾಗೂ ವಿದೇಶಿ ದತ್ತು ಪೋಷಕರಿಗೆ 295 ಮಕ್ಕಳನ್ನು ದತ್ತು ನೀಡಲಾಗಿದೆ. ಅಲ್ಲದೆ, ಬಾಲನ್ಯಾಯ(ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ, 2015ರಡಿ ಗುರುತಿಸಲ್ಪಡುವ ಅನಾಥ, ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳ ಪುನರ್ವಸತಿಗಾಗಿ ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.

ಸಚಿವ ಈ ಮಾಹಿತಿಗೆ ಮಕ್ಕಳ ಹಕ್ಕು ರಕ್ಷಣೆ ಕಾರ್ಯಕರ್ತರು ಕಳವಳ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (KSCPCR) ಮಾಜಿ ಸದಸ್ಯ ವಾಸುದೇವ್ ಶರ್ಮಾ ಅವರು ಮಾತನಾಡಿ, ಅಂಕಿಅಂಶಗಳಉ ಜಿಲ್ಲೆಗಳು ತಾವು ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಅರ್ಥಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಪ್ರಸ್ತುತ ವರದಿಯಾಗಿರುವ ಅಪರಾಧಗಳ ವಿರುದ್ಧ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದನ್ನು ಸರ್ಕಾರ ಬಹಿರಂಗಪಡಿಸಬೇಕು. ಎಫ್ಐಆರ್ ದಾಖಲು. ಎಷ್ಟು ಮಂದಿಯ ಬಂಧನವಾಗಿದೆ, ನ್ಯಾಯಾಲಯದಲ್ಲಿರುವ ಪ್ರಕರಣಗಳೆಷ್ಟು, ಎಷ್ಟು ಮಕ್ಕಳಿಗೆ ಪುನರ್ವಸತಿ ಕಲ್ಪಿಸಲಾಗಿದೆ ಎಂಬುದನ್ನೂ ಬಹಿರಂಗಪಡಿಸಬೇಕೆಂದು ಆಗ್ರಹಿಸಿದ್ದಾರೆ.

ಸರ್ಕಾರದೊಂದಿಗೆ ನಾನೂ ಕೆಲಸ ಮಾಡಿದ್ದೇನೆ. ನನ್ನ ಪ್ರಕಾರ ನಗರದಲ್ಲಿಯೇ ಗರಿಷ್ಠ ಪ್ರಕರಣಗಳು ವರದಿಯಾಗುತ್ತಿವೆ. ಜಿಲ್ಲೆಗಳಲ್ಲಿ ಹೆಚ್ಚು ವರದಿಯಾಗದೆಯೂ ಇರಬಹುದು. ಈ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com