ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ: ಪ್ರಿಯಾಂಕ್ ಖರ್ಗೆ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸೋಮವಾರ ಹೇಳಿದ್ದಾರೆ.
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸೋಮವಾರ ಹೇಳಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್‌ನ ನಾಸೀರ್ ಹುಸೇನ್ ಪರ ಬೆಂಬಲಿಗರು ವಿಧಾನಸೌಧದ ಆವರಣದಲ್ಲಿ ಸಂಭ್ರಮಾಚರಣೆ ವೇಳೆ 'ಪಾಕಿಸ್ತಾನ​ ಜಿಂದಾಬಾದ್​​ ಘೋಷಣೆ' ಕೂಗಿರುವುದು ಖಾಸಗಿ ವಿಧಿ ವಿಜ್ಞಾನ ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢವಾಗಿದೆ ಎಂದಿರುವ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆಗೆ ಮುಕ್ತರಾಗಿದ್ದೇವೆ. 'ಏನೇ ಇರಲಿ, ನಾವು ತನಿಖೆಗೆ ಮುಕ್ತವಾಗಿದ್ದೇವೆ. ಕರ್ನಾಟಕದಲ್ಲಿ ನಮ್ಮಲ್ಲಿ ಬಹಳ ದೊಡ್ಡ ಪೊಲೀಸ್ ತಂಡವಿದೆ. ಅವರು ಅದನ್ನು ಎನ್ಐಎಗೆ ನೀಡಿದ್ದರೆ, ಅದರಲ್ಲಿ ಯಾವುದೇ ತಪ್ಪಿಲ್ಲ...' ಎಂದು ಖರ್ಗೆ ಸೋಮವಾರ ಸುದ್ದಿಸಂಸ್ಥೆ ಎಎನ್‌ಐಗೆ ತಿಳಿಸಿದರು.

ಪ್ರಿಯಾಂಕ್ ಖರ್ಗೆ
ವಿಧಾನಸೌಧ ಆವರಣದಲ್ಲಿ ಪಾಕ್​ ಪರ ​ಘೋಷಣೆ ಕೂಗಿರುವುದು ದೃಢ: ಬಿಜೆಪಿ ಟ್ವೀಟ್

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದ ತನಿಖೆಯನ್ನು ಗೃಹ ಸಚಿವಾಲಯವು ಎನ್‌ಐಎಗೆ ಹಸ್ತಾಂತರಿಸಿದ್ದು, ತನಿಖೆ ಆರಂಭಿಸಿದೆ.

ಮಾರ್ಚ್ 1 ರಂದು ಬೆಂಗಳೂರಿನ ವೈಟ್‌ಫೀಲ್ಡ್ ಪ್ರದೇಶದ ಕೆಫೆಯಲ್ಲಿ ಸ್ಫೋಟ ಸಂಭವಿಸಿದ್ದು, 10 ಜನರು ಗಾಯಗೊಂಡಿದ್ದರು. ಬೆಂಗಳೂರು ಪೊಲೀಸರು ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

‘ಪಾಕಿಸ್ತಾನ ಪರ’ ಘೋಷಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಖರ್ಗೆ, 'ಆರ್‌ಎಸ್‌ಎಸ್ ಬೆಂಬಲಿತ ಪ್ರತಿಷ್ಠಾನವು ಖಾಸಗಿ ಕಂಪನಿಗೆ ಈ ಕೆಲಸವನ್ನು ಹೇಗೆ ನೀಡಬಹುದು? ಅವರಿಗೆ ಈ ಕೆಲಸವನ್ನು ನೀಡಲು ಅವರು ಯಾರು? ಇದು ತುಂಬಾ ಗಂಭೀರವಾದ ವಿಷಯ. ಅವರು ಈ ಬಗ್ಗೆ ಸ್ವಲ್ಪ ಗಂಭೀರವಾಗಿರಬೇಕು. ಸಂವಾದ ಪ್ರತಿಷ್ಠಾನವು ಈ ಬಗ್ಗೆ ಆಸಕ್ತಿ ವಹಿಸಿದ್ದು ಏಕೆ ಮತ್ತು ಅದರ ತಾಳಕ್ಕೆ ಬಿಜೆಪಿ ಏಕೆ ಕುಣಿಯುತ್ತಿದೆ? ಪ್ರತಿಷ್ಠಾನಕ್ಕೂ ಅವರಿಗೂ ಏನು ಸಂಬಂಧವಿದೆ ಮತ್ತು ಅವರು ಖಾಸಗಿ ಫೋರೆನ್ಸಿಕ್ ಲ್ಯಾಬ್‌ಗೆ ನೀಡಿರುವ ದೃಶ್ಯಗಳು ಯಾವುವು?' ಎಂದು ಪ್ರಶ್ನಿಸಿದರು.

ಪ್ರಿಯಾಂಕ್ ಖರ್ಗೆ
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ತನಿಖೆ NIAಗೆ ಹಸ್ತಾಂತರ

'ಈ ವರದಿಯು ವಸ್ತುನಿಷ್ಠವಾಗಿಲ್ಲ. ಇದು ಸಂಪೂರ್ಣವಾಗಿ ಬಿಜೆಪಿಗೆ ಲಾಭದಾಯಕವಾಗಿದೆ. ನಾವು ಕಾನೂನಿನ ಪ್ರಕಾರ ನಿರ್ಧಾರ ತೆಗೆದುಕೊಳ್ಳುತ್ತೇವೆ. ನನಗೆ ತಿಳಿದಿರುವಂತೆ, ನಾವು ಅನೇಕ ದೃಶ್ಯಗಳನ್ನು ಪರಿಶೀಲಿಸುತ್ತಿದ್ದೇವೆ' ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com