ಬೆಂಗಳೂರು: ವಿಂಡ್ಸರ್​ ಮ್ಯಾನರ್​ ಬ್ರಿಡ್ಜ್​ ಮೇಲಿಂದ ಕೆಳಗೆ ಬಿದ್ದು ವ್ಯಕ್ತಿ ದುರ್ಮರಣ

ನಗರದ ಹೃದಯಭಾಗದಲ್ಲಿರುವ ವಿಂಡ್ಸರ್ ಮ್ಯಾನರ್ ಸೇತುವೆ ಮೇಲಿಂದ ಕೆಳಗೆ ಬಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ನಗರದ ಹೃದಯಭಾಗದಲ್ಲಿರುವ ವಿಂಡ್ಸರ್ ಮ್ಯಾನರ್ ಸೇತುವೆ ಮೇಲಿಂದ ಕೆಳಗೆ ಬಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ಸೇತುವೆ ಮೇಲಿಂದ ಸುಮಾರು 35 ರಿಂದ 40 ವರ್ಷದ ವ್ಯಕ್ತಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದ್ದಾನೆ. ಇದರಿಂದ ಕಾರಿನ ಗಾಜುಗಳು ಪುಡಿಪುಡಿಯಾಗಿವೆ.

ಗಾಯಾಳುವನ್ನು ಪೊಲೀಸರು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಹೈಗ್ರೌಂಡ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಾಂದರ್ಭಿಕ ಚಿತ್ರ
ಬೆಂಗಳೂರು: ಒಂದೇ ದಿನ ಮೂರು ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟ!

ಚಲಿಸುತ್ತಿದ್ದ ರೈಲಿನಿಂದ ಬಿದ್ದನಾ? ಅಥವಾ ಆತ್ಮಹತ್ಯೆಗೆ ಯತ್ನಿಸಿದ್ದಾನಾ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದು, ಅಪರಿಚಿತನ ಗುರುತು ಪತ್ತೆ ಹಚ್ಚಲು ಮುಂದಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com