'ನಮ್ಮ ಶಾಲೆ, ನಮ್ಮ ಜವಾಬ್ದಾರಿ': ಸರ್ಕಾರಿ ಶಾಲೆಗಳ ಅಭಿವೃದ್ಧಿ, ಬಲವರ್ಧನೆ ಕಾರ್ಯಕ್ರಮಕ್ಕೆ ಚಾಲನೆ

ನಮ್ಮ ಶಾಲೆ ನಮ್ಮ ಜವಾಬ್ದಾರಿ- ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಚಾಲನೆ ನೀಡಿದರು.
ಮಕ್ಕಳೊಂದಿಗೆ ಸಿಎಂ ಸಿದ್ದರಾಮಯ್ಯ ಮತ್ತಿತರರು
ಮಕ್ಕಳೊಂದಿಗೆ ಸಿಎಂ ಸಿದ್ದರಾಮಯ್ಯ ಮತ್ತಿತರರು

ಬೆಂಗಳೂರು: 'ನಮ್ಮ ಶಾಲೆ ನಮ್ಮ ಜವಾಬ್ದಾರಿ- ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಚಾಲನೆ ನೀಡಿದರು. ಮುಖ್ಯಮಂತ್ರಿ ಓದಿದ ಕುಪ್ಪೇಗಾಲದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸಿದ್ದರಾಮನಹುಂಡಿಯ ಕೆ.ಪಿ.ಎಸ್ ಶಾಲೆಗೆ 10 ಲಕ್ಷ ರೂ. ಗಳ ದೇಣಿಗೆ ನೀಡುವ ಮೂಲಕ ಯೋಜನೆಯನ್ನು ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿದ ಮುಖ್ಯಮಂತ್ರಿ, ಸಂವಿಧಾನವನ್ನು ಅರಿತುಕೊಳ್ಳಬೇಕು, ಕೇವಲ ಕಂಠಪಾಠ ಮಾಡಿದರೆ ಸಾಲದು, ಅದರ ತಿರುಳನ್ನು ಅರಿತು ಅದರಂತೆ ನಡೆಯಬೇಕು ಎಂದರು. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ತಿರುಳು . ಸಮಾನತೆ ಸಮಸಮಾಜ ನಿರ್ಮಾಣ ವಾಗಬೇಕು. ಬುದ್ಧ, ಬಸವ, ಅಂಬೇಡ್ಕರ್ ಅವರು ಇದನ್ನೇ ಹೇಳಿಕೊಂಡು ಬಂದಿದ್ದಾರೂ ಇದು ಪೂರ್ಣವಾಗಿ ಹೋಗಿಲ್ಲ. ಇದೆಲ್ಲ ಓದಿ ಅರ್ಥ ಮಾಡಿಕೊಂಡು ಮಕ್ಕಳು ಮನುಷ್ಯತ್ವ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಮಕ್ಕಳಿಗೆ ಕಿವಿಮಾತು ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ಕೆಲವು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಯ ಅಭಿವೃದ್ಧಿಗೆ ಸರ್ಕಾರ ಉಚಿತ ಶಿಕ್ಷಣ ನೀಡುತ್ತಿದೆ. ಸಂವಿಧಾನ ಜಾರಿಗೆ ಬಂದ ನಂತರ ಉಚಿತ ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ಮಾಡಿದೆ. ಹಾಗಾಗಿ ಎಲ್ಲರಿಗೂ ಶಿಕ್ಷಣ ಕಡ್ಡಾಯವಾಗಿದೆ.ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಜ್ಞಾನದ ವಿಕಾಸವಾಗಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

ಮಕ್ಕಳೊಂದಿಗೆ ಸಿಎಂ ಸಿದ್ದರಾಮಯ್ಯ ಮತ್ತಿತರರು
ಲಂಚ ಪಡೆದಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ

ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, 6 ಕೋಟಿ ರೂ.ಗಳನ್ನು ಹಳೆಯ ಶಾಲೆಯ ವಿದ್ಯಾರ್ಥಿಗಳು ನೀಡಿದ್ದಾರೆ. ಮಾಲೂರಿನಲ್ಲಿಯೂ ಕೂಡ ಆರು ಕೋಟಿ ರೂ.ಗಳು ಹಳೆಯ ವಿದ್ಯಾರ್ಥಿಗಳು ಸಂಗ್ರಹಿಸಿದ್ದಾರೆ. ಸಾಮಾಜಿಕ ಕಳಕಳಿಯುಳ್ಳವರು ಮಕ್ಕಳಿಗೆ ಪಾಠವನ್ನೂ ಮಾಡಿದ್ದಾರೆ. 4, 8000 ಸರ್ಕಾರಿ ಶಾಲೆಗಳಲ್ಲಿ 14 000 ವಾಟ್ಸಾಪ್ ಗುಂಪುಗಳಾಗಿವೆ. ಸರ್ಕಾರಿ ಶಾಲೆಗಳ ಅಭಿವೃದ್ಧಿ ಕುರಿತು ದೊಡ್ಡ ಗುರಿಯನ್ನು ಹೊಂದಿದ್ದೇವೆ. 44 ಸಾವಿರ ಕೋಟಿ ರೂ.ಗಳನ್ನು ಸರ್ಕಾರಿ ಶಾಲೆ ಗಳ ಅಭಿವೃದ್ಧಿಗೆ ಮೀಸಲಿರಿಸಲಾಗಿದೆ. ಸಿ.ಎಸ್.ಆರ್. ನಿಂದಲೂ ಇತರೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು.

ಕೈಗಾರಿಕಾ ಸಚಿವ ಎಂ. ಬಿ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಉನ್ನತ ಶಿಕ್ಷಣ ಸಚಿವ ಸುಧಾಕರ್, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com