ಕಲಬುರಗಿ ಬಿಜೆಪಿ ಕಾರ್ಯಕರ್ತನ ಹತ್ಯೆ ಪ್ರಕರಣ: ಅಪ್ರಾಪ್ತ ಸೇರಿ ನಾಲ್ವರ ಬಂಧನ

ಕಲಬುರಗಿ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಗಿರೀಶ್ ಚಕ್ರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮಂಗಳವಾರ ಅಪ್ರಾಪ್ತ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸಚಿನ್ ಕಿರಸಾವಳಗಿ, ವಿಶ್ವನಾಥ ಅಲಿಯಾಸ್ ಕುಮ್ಯಾ ಮತ್ತು ಪ್ರಜ್ವಲ್ ಎಂದು ಗುರುತಿಸಲಾಗಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಕಲಬುರಗಿ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಗಿರೀಶ್ ಚಕ್ರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮಂಗಳವಾರ ಅಪ್ರಾಪ್ತ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸಚಿನ್ ಕಿರಸಾವಳಗಿ, ವಿಶ್ವನಾಥ ಅಲಿಯಾಸ್ ಕುಮ್ಯಾ ಮತ್ತು ಪ್ರಜ್ವಲ್ ಎಂದು ಗುರುತಿಸಲಾಗಿದೆ.

ಗಂಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫೆಬ್ರುವರಿ 29ರಂದು ಮೂವರು ಆರೋಪಿಗಳು ಮತ್ತು ಅಪ್ರಾಪ್ತ ಸೇರಿ ಗಿರೀಶ್ ಚಕ್ರ ಎಂಬುವವರನ್ನು ಕೊಂದಿದ್ದರು.

ಪೊಲೀಸರ ಪ್ರಕಾರ, ಗಿರೀಶ್ ಚಕ್ರ ಕಲಬುರಗಿಯ ಬಿಜೆಪಿ ಸಂಸದ ಡಾ. ಉಮೇಶ ಜಾಧವ್ ಅವರ ಬಲಗೈ ಬಂಟರಾಗಿದ್ದರು. ಗಿರೀಶ್ ಅವರನ್ನು ಇತ್ತೀಚೆಗಷ್ಟೇ ಬಿಎಸ್ಎನ್‌ಎಲ್‌ನ ಸಲಹಾ ಸಮಿತಿ ಸದಸ್ಯರನ್ನಾಗಿ ಉಮೇಶ್ ಜಾಧವ್ ಅವರು ನೇಮಿಸಿದ್ದರು. ಹೀಗಾಗಿ ಆತನ ಸ್ನೇಹಿತರು ಪಾರ್ಟಿ ಕೊಡುವುದಾಗಿ ಆಹ್ವಾನಿಸಿ, ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಾತಿನಿಧಿಕ ಚಿತ್ರ
ಕಲಬುರಗಿ: ಕಣ್ಣಿಗೆ ಖಾರದ ಪುಡಿ ಎರಚಿ ಬಿಜೆಪಿ ಸಂಸದ ಉಮೇಶ್ ಜಾಧವ್ ಬಂಟನ ಬರ್ಬರ ಹತ್ಯೆ!

ಇದು ಸುಪಾರಿ ಕೊಲೆ ಎಂದು ಕುಟುಂಬದವರು ಶಂಕಿಸಿದ್ದರು.

ಈ ಸಂಬಂಧ ಕರ್ನಾಟಕ ಬಿಜೆಪಿ ಘಟಕವು ಆರ್‌ಡಿಪಿಆರ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರತ್ತ ಬೆರಳು ತೋರಿಸಿದ್ದರಿಂದ ಈ ಬೆಳವಣಿಗೆ ರಾಜ್ಯದಲ್ಲಿ ವಿವಾದವನ್ನು ಹುಟ್ಟುಹಾಕಿತ್ತು.

ಪ್ರಿಯಾಂಕ್ ಖರ್ಗೆ ಅವರು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಕಲಬುರಗಿ ಜಿಲ್ಲೆಯಲ್ಲಿ ಕೊಲೆ, ಸುಲಿಗೆ ಪ್ರಕರಣಗಳು ಹೆಚ್ಚಿವೆ. ಕಲಬುರಗಿಯಲ್ಲಿನ ಸದ್ಯದ ಪರಿಸ್ಥಿತಿಗೆ ಅವರೇ ನೇರ ಹೊಣೆ ಎಂದು ಬಿಜೆಪಿ ಆರೋಪಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com