ಪಾಕ್ ಪರ ಘೋಷಣೆ: ಬಂಧಿತ ಆರೋಪಿಗಳನ್ನು ಕರೆತಂದು ಪೊಲೀಸರಿಂದ ವಿಧಾನಸೌಧದಲ್ಲಿ ಇಂದು ಸ್ಥಳ ಮಹಜರು

ಪೊಲೀಸರು ಆರೋಪಿಗಳಾದ ಇಲ್ತಾಜ್, ಮುನಾವರ್, ಮೊಹಮ್ಮದ್ ನಾಶಿಪುಡಿ ಅವರನ್ನು ಕೋರಮಂಗಲದಲ್ಲಿರುವ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯದ ಜಡ್ಜ್ ಮುಂದೆ ಹಾಜರುಪಡಿಸಿದ್ದರು.
ಡಾ ನಾಸಿರ್ ಹುಸೇನ್ ಪರ ಸಂಭ್ರಮಾಚರಣೆ ಸಂದರ್ಭ
ಡಾ ನಾಸಿರ್ ಹುಸೇನ್ ಪರ ಸಂಭ್ರಮಾಚರಣೆ ಸಂದರ್ಭ

ಬೆಂಗಳೂರು: ವಿಧಾನಸೌಧ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬಂಧಿತ ಮೂವರು ಆರೋಪಿಗಳನ್ನು ಎರಡು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸರು ಆರೋಪಿಗಳಾದ ಇಲ್ತಾಜ್, ಮುನಾವರ್, ಮೊಹಮ್ಮದ್ ನಾಶಿಪುಡಿ ಅವರನ್ನು ಕೋರಮಂಗಲದಲ್ಲಿರುವ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯದ ಜಡ್ಜ್ ಮುಂದೆ ಹಾಜರುಪಡಿಸಿದ್ದರು.

ವಿಧಾನಸೌಧದ ಆವರಣದಲ್ಲಿಯೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ ವಿಧಾನಸೌಧ ಪೊಲೀಸರು, ದೆಹಲಿ ಮೂಲದ ಇಲ್ತಾಜ್, ಆರ್‌.ಟಿ. ನಗರ ಮೂಲದ ಮುನಾವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಅವರನ್ನು ಬಂಧಿಸಿದ್ದಾರೆ.

ಇಂದು ಪೊಲೀಸರಿಂದ ಸ್ಥಳ ಮಹಜರು: ಬಂಧಿತ ಆರೋಪಿಗಳನ್ನು ಕರೆತಂದು ಪೊಲೀಸರು ಇಂದು ವಿಧಾನಸೌಧ ಆವರಣದಲ್ಲಿ ಸ್ಥಳ ಮಹಜರು ನಡೆಸಲಿದ್ದಾರೆ.

ಮೂರು ದಿನ ಪೊಲೀಸ್ ಕಸ್ಟಡಿಗೆ: ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾಗಿದ್ದ ಮೂವರಿಗೆ 39 ಎಸಿಎಂಎಂ ನ್ಯಾಯಾಲಯ 3 ದಿನಗಳ ಪೊಲೀಸ್ ಕಸ್ಟಡಿ ನೀಡಿದೆ.

ಡಾ ನಾಸಿರ್ ಹುಸೇನ್ ಪರ ಸಂಭ್ರಮಾಚರಣೆ ಸಂದರ್ಭ
ಪಾಕ್ ಪರ ಘೋಷಣೆ ಪ್ರಕರಣ: ಬಂಧಿತ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಎಫ್‌ಎಸ್‌ಎಲ್ ವರದಿ, ಲಭ್ಯವಿರುವ ಸಾಕ್ಷಿಗಳು ಮತ್ತು ಸಾಕ್ಷ್ಯದ ಆಧಾರದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ವಿಭಾಗ ಡಿಸಿಪಿ ತಿಳಿಸಿದ್ದಾರೆ.

ನಿನ್ನೆ ಸಾಯಂಕಾಲ ಅಶೋಕನಗರ ಪೊಲೀಸರು ದೆಹಲಿ ಮೂಲದ ಇಲ್ತಾಜ್, ಆರ್‌ ಟಿ ನಗರದ ಮುನಾವರ್ ಹಾಗೂ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಬಂಧಿಸಿದ್ದರು. ಬಳಿಕ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಬಳಿಕ ಪೊಲೀಸರು ಕೋರಮಂಗಲದ 39ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com