ಮಹಾ ಶಿವರಾತ್ರಿ, ವಾರಾಂತ್ಯ ರಜೆ: ಕೆಎಸ್ ಆರ್ ಟಿಸಿಯಿಂದ ವಿಶೇಷ ಬಸ್ಸು ಸಂಚಾರ

ಬೆಂಗಳೂರಿನಿಂದ ವಿವಿಧ ನಗರಗಳಿಗೆ 1,500 ಹೆಚ್ಚುವರಿ ಬಸ್ ಸೇವೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಇದೇ ಮಾರ್ಚ್ 8ರಂದು ಮಹಾ ಶಿವರಾತ್ರಿ ನಂತರ ವಾರಾಂತ್ಯದ (Weekend) ರಜೆ ಇರುವುದರಿಂದ ಜನರು ಊರುಗಳಿಗೆ ಸಂಚರಿಸುವುದು ಅಧಿಕವಾಗಿರುತ್ತದೆ. ಪ್ರಯಾಣಿಕರ ದಟ್ಟಣೆ ಹಾಗೂ ಬೇಡಿಕೆಯನ್ನು ಪೂರೈಸಲು ಮಾರ್ಚ್ 7 ಮತ್ತು 10 ರ ನಡುವೆ ಬೆಂಗಳೂರಿನಿಂದ ವಿವಿಧ ನಗರಗಳಿಗೆ 1,500 ಹೆಚ್ಚುವರಿ ಬಸ್ ಸೇವೆ ಒದಗಿಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ತಿಳಿಸಿದೆ.

ಮಾರ್ಚ್​ 10 ಮತ್ತು 11ರಂದು ವಾಪಸ್ ಬರುವವರಿಗಾಗಿ ವಿವಿಧ ನಗರಗಳಿಂದ ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದಲೂ ವಿಶೇಷ ಬಸ್​​ಗಳು ಕಾರ್ಯಾಚರಿಸಲಿವೆ.

ಹೆಚ್ಚುವರಿ ಬಸ್ಸುಗಳು: ಹೆಚ್ಚುವರಿ ವಿಶೇಷ ಬಸ್ಸುಗಳು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮತ್ತಿತರ ಕಡೆಗಳಿಗೆ ಸಂಚರಿಸಲಿವೆ.

ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಮತ್ತು ಮಡಿಕೇರಿ ಕಡೆಗೆ ವಿಶೇಷ ಬಸ್‌ಗಳು ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಕಾರ್ಯನಿರ್ವಹಿಸಲಿವೆ.

ಸಾಂದರ್ಭಿಕ ಚಿತ್ರ
ಮಹಾ ಶಿವರಾತ್ರಿ: ಚಿಕ್ಕಬಳ್ಳಾಪುರ ಇಶಾ ಫೌಂಡೇಶನ್ ಗೆ ಬಿಎಂಟಿಸಿಯಿಂದ ಹೊಸ ಟೂರ್ ಪ್ಯಾಕೇಜ್ ಆರಂಭ

ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿರಾಪಳ್ಳಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕೋಝಿಕ್ಕೋಡ್, ತಮಿಳುನಾಡು ಮತ್ತು ಕೇರಳದ ಇತರ ಸ್ಥಳಗಳಿಗೆ ಎಲ್ಲಾ ಪ್ರೀಮಿಯಂ ವಿಶೇಷ ಬಸ್‌ಗಳು ಶಾಂತಿನಗರ ಬಸ್ ನಿಲ್ದಾಣದಿಂದ ಹೊರಡಲಿವೆ ಎಂದು ಕೆಎಸ್​ಆರ್​​​ಟಿಸಿ ತಿಳಿಸಿದೆ.

ಮಾರ್ಚ್ 10 ಮತ್ತು 11 ರಂದು ಕರ್ನಾಟಕದ ವಿವಿಧ ನಗರಗಳಿಂದ ಬೆಂಗಳೂರಿಗೆ ಮತ್ತು ಬೆಂಗಳೂರಿನಿಂದ ವಿಶೇಷ ಬಸ್‌ಗಳ ಸೇವೆ ಒದಗಿಸಲಾಗುವುದು ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ. ಇದರಿಂದ ಹಬ್ಬ ಮುಗಿಸಿ ಊರುಗಳಿಂದ ಬೆಂಗಳೂರಿಗೆ ವಾಪಸಾಗುವವರಿಗೆ ಮತ್ತು ರಜೆಗೆಂದು ಬೆಂಗಳೂರಿಗೆ ಬಂದವರಿಗೆ ಊರುಗಳಿಗೆ ತೆರಳಲು ಅನುಕೂಲವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com