ಲಂಚ ಪಡೆದಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ

ಯಾರಿಂದಲಾದರೂ ಲಂಚ ಪಡೆದಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು.
ಗುತ್ತಿಗೆದಾರರ ರಾಜ್ಯ ಮಟ್ಟದ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು.
ಗುತ್ತಿಗೆದಾರರ ರಾಜ್ಯ ಮಟ್ಟದ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು.
Updated on

ಬೆಂಗಳೂರು: ಯಾರಿಂದಲಾದರೂ ಲಂಚ ಪಡೆದಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು.

ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ರಾಜ್ಯ ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಾಗಲೀ, ಪ್ರಸ್ತುತದ ಆಡಳಿತಾವಧಿಯಲ್ಲಿ ಆಗಲೀ ಲಂಚ ಪಡೆದಿಲ್ಲ. 2013-2018 ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಾಗಲೀ ಅಥವಾ ಇದೀಗ ಎರಡನೇ ಬಾರಿ ಸಿಎಂ ಆಗಿರುವ ಅವಧಿಯಲ್ಲಾಗಲೀ ಅಥವಾ ನಾನು ವಿರೋಧ ಪಕ್ಷದ ನಾಯಕನಾಗಿರುವ ಅವಧಿಯಲ್ಲಾಗಿರಲಿ ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆಂದು ಹೇಳಿದರು.

ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ ಕ್ಷೇತ್ರವಾರು 25 ಕೋಟಿಯಂತೆ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆಂದು ಇದೇ ವೇಳೆ ತಿಳಿಸಿದರು.

ಗುತ್ತಿಗೆದಾರರ ರಾಜ್ಯ ಮಟ್ಟದ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು.
ಲೋಕಸಭಾ ಚುನಾವಣೆ: ರಾಜ್ಯದಲ್ಲಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ; ಸಿಎಂ ಸಿದ್ದರಾಮಯ್ಯ

ಬಳಿಕ ಕೇಂದ್ರ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಇಬ್ಬರೂ ಬಜೆಟ್ ನಲ್ಲೇ ಘೋಷಿಸಿದರು. ಆದರೆ, ಇವತ್ತಿನವರೆಗೂ ಒಂದೇ ಒಂದು ರೂಪಾಯಿ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಎಷ್ಟೇ ಅಸಹಕಾರ ಕೊಟ್ಟರೂ ಗುತ್ತಿಗೆದಾರರ ಅಷ್ಟೂ ಹಣವನ್ನು ನಾವೇ ಹಂತ ಹಂತವಾಗಿ ಪಾವತಿಸುತ್ತೇವೆ ಎಂದರು.

2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ ಸಿಎಂ ಆಗಿರುವ ಅವಧಿಯಲ್ಲಾಗಲೀ ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಬಿಜೆಪಿಯವರ ಟೀಕೆಗಳಿಗೆ ಸವಾಲು ಹಾಕಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com