ಪಾಕ್ ಪರ ಘೋಷಣೆ: ಕಾಂಗ್ರೆಸ್ ಸಂಸದ ನಾಸೀರ್ ಹುಸೇನ್ ವಿರುದ್ಧ ಬಿಜೆಪಿ ದೂರು; ಬಂಧನಕ್ಕೆ ಆಗ್ರಹ

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧ ರಾಜ್ಯಸಭಾ ಕಾಂಗ್ರೆಸ್ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ವಿಧಾನಸೌಧ ಪೊಲೀಸ್ ಠಾಣೆಗೆ ಬಿಜೆಪಿ ಮಂಗಳವಾರ ದೂರು ನೀಡಿದೆ.
ಬಿಜೆಪಿ
ಬಿಜೆಪಿ
Updated on

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧ ರಾಜ್ಯಸಭಾ ಕಾಂಗ್ರೆಸ್ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ವಿಧಾನಸೌಧ ಪೊಲೀಸ್ ಠಾಣೆಗೆ ಬಿಜೆಪಿ ಮಂಗಳವಾರ ದೂರು ನೀಡಿದೆ.

ರಾಜ್ಯ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಹಾಗೂ ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು ಅವರು ದೂರು ನೀಡಿದ್ದಾರೆ.

ಬಿಜೆಪಿ
ಪಾಕ್ ಪರ ಘೋಷಣೆ: ಬಂಧಿತರೆಲ್ಲರೂ ಕಾಂಗ್ರೆಸ್ ಕಾರ್ಯಕರ್ತರು, ಓರ್ವ ಲೋಕಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿ

ವಿಧಾನಸೌಧದ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗುವಂತೆ ನಾಸೀರ್ ಅವರು ತಮ್ಮ ಬೆಂಬಲಿಗರಿಗೆ ಪ್ರಚೋದನೆ ನೀಡಿದ್ದಾರೆಂದು ದೂರಿನಲ್ಲಿ ಆರೋಪಿಸಿದ್ದು, ಎಫ್‌ಐಆರ್‌ನಲ್ಲಿ ನಾಸೀರ್ ಅವರನ್ನು ಮೊದಲ ಆರೋಪಿ ಎಂದು ಹೆಸರಿಸುವಂತೆ ಒತ್ತಾಯಿಸಿದ್ದಾರೆ.

ಹುಸೇನ್ ಅವರನ್ನು ಪ್ರಕರಣದಲ್ಲಿ ಪ್ರಮುಖ ಆರೋಪಿ ನಂ. 1 ಎಂದು ಸೇರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಮತ್ತು ಅವರನ್ನು ಕೂಡಲೇ ಬಂಧಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com