ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಕೆಫೆ ಸ್ಫೋಟ ಪ್ರಕರಣ ಭೇದಿಸುತ್ತಾರೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಕಡಿಮೆ ತೀವ್ರತೆಯ ಸ್ಫೋಟಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಈಗ ಮಹತ್ವದ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಪ್ರಕರಣವನ್ನು ಭೇದಿಸುತ್ತಿದ್ದಾರೆ.
ಗೃಹ ಸಚಿವ ಪರಮೇಶ್ವರ್
ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಕಡಿಮೆ ತೀವ್ರತೆಯ ಸ್ಫೋಟಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಈಗ ಮಹತ್ವದ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಪ್ರಕರಣವನ್ನು ಭೇದಿಸುತ್ತಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಬುಧವಾರ ಹೇಳಿದ್ದಾರೆ.

ಕಳೆದ ಎರಡು ದಿನಗಳಲ್ಲಿ ಪೊಲೀಸರಿಗೆ ಕೆಲವು ಮಹತ್ವದ ಸುಳಿವು ಸಿಕ್ಕಿದ್ದು, ಅವು ಪ್ರಕರಣ ಭೇದಿಸುವ ಭರವಸೆ ಮೂಡಿಸಿವೆ ಎಂದು ಪರಮೇಶ್ವರ್ ಅವರು ಇಂದು ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಮ್ಮ ಅಧಿಕಾರಿಗಳು ಶೀಘ್ರದಲ್ಲೇ ಪ್ರಕರಣ ಭೇದಿಸುತ್ತಾರೆ. ನಿನ್ನೆ ಮತ್ತು ಹಿಂದಿನ ದಿನ ಕೆಲವು ಪ್ರಮುಖ ಮಾಹಿತಿಗಳನ್ನು ಸ್ವೀಕರಿಸಲಾಗಿದೆ. ಅದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಇದೇ ರೀತಿ ಮುಂದುವರಿದರೆ ತನಿಖೆ ಪೂರ್ಣಗೊಳಿಸುತ್ತೇವೆ ಎಂದು ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗೃಹ ಸಚಿವ ಪರಮೇಶ್ವರ್
ಬೆಂಗಳೂರು ಕೆಫೆ ಸ್ಫೋಟ ಪ್ರಕರಣ: ಆರೋಪಿಗಳು ರಾಜ್ಯ ತೊರೆದಿರುವ ಸಾಧ್ಯತೆ ಇದೆ!

ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ. ಅನುಮಾನದ ಆಧಾರದ ಮೇಲೆ, ಕೆಲವು ಜನರನ್ನು ಪೊಲೀಸರು ವಶಕ್ಕೆ ಪಡೆದು ಅವರಿಂದ "ಮಾಹಿತಿ" ಸಂಗ್ರಹಿಸಿದ್ದಾರೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಪ್ರಕರಣವನ್ನು ಕೈಗೆತ್ತಿಕೊಳ್ಳಬೇಕಿತ್ತು. ಆದರೆ ಅವರು ಇನ್ನೂ ಬಂದಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com