ಗದಗ: ಹಳ್ಳಿಗುಡಿ ಬಳಿ ಕ್ಯಾಂಟರ್ ಪಲ್ಟಿಯಾಗಿ ಮೂವರು ಸಾವು, ಮೂವರಿಗೆ ಗಾಯ

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ಬುಧವಾರ ಕ್ಯಾಂಟರ್ ವಾಹನವೊಂದು ಪಲ್ಟಿಯಾಗಿದ್ದು, ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
ಮೈಸೂರು: ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಮೂವರು ಸಾವು
ಮೈಸೂರು: ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಮೂವರು ಸಾವು
Updated on

ಗದಗ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ಬುಧವಾರ ಕ್ಯಾಂಟರ್ ವಾಹನವೊಂದು ಪಲ್ಟಿಯಾಗಿದ್ದು, ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.

ಇಂದು ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮೃತರನ್ನು ನವೀನ್ ಕುಂಬಾರ್(23), ನಾಗಪ್ಪ ಕಾಳಿ (23), ಗಂಗಪ್ಪ ಅಕ್ಕಿ(22) ಎಂದು ಗುರುತಿಸಲಾಗಿದೆ. ಮೃತರು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದವರು ಎಂದು ತಿಳಿದುಬಂದಿದೆ.

ಮೈಸೂರು: ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಮೂವರು ಸಾವು
ದಾವಣಗೆರೆಯಲ್ಲಿ ಭೀಕರ ಅಪಘಾತ: ಟೈರ್ ಸ್ಫೋಟಗೊಂಡು ಬೋಲೆರೋ ವಾಹನ ಪಲ್ಟಿ, ಮೂವರ ದುರ್ಮರಣ

ಕುಂದಗೋಳದಿಂದ ಕೊಪ್ಪಳ ಜಿಲ್ಲೆಯ ಕನಕಗಿರಿಗೆ ಹೋಗುತ್ತಿದ್ದಾಗ ಈ ದುರ್ಘಟನ ನಡೆದಿದ್ದು, ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ.

ಈ ಸಂಬಂಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com