ಬೆಂಗಳೂರು: ವಾಟರ್ ಟ್ಯಾಂಕರ್ ಮಾಫಿಯಾ’ಗೆ ಸರ್ಕಾರ ಬ್ರೇಕ್; ಹೊಸ ದರ ನಿಗದಿ ಮಾಡಿ ಜಿಲ್ಲಾಡಳಿತ ಆದೇಶ!

ಬೇಸಿಗೆಯ ಆರಂಭವಾಗಿದ್ದು, ನಗರದಲ್ಲಿ ನೀರಿನ ಅಭಾವ ಶುರುವಾಗಿದೆ. ಈ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡು ಕೆಲವರು ಸಾರ್ವಜನಿಕರಿಂದ ತಮ್ಮಗಿಷ್ಟ ಬಂದ ದರ ನಿಗದಿ ಮಾಡಿ ಹಣ ವಸೂಲಿ ಮಾಡುತ್ತಿದ್ದರು. ಈ ಮಾಫಿಯಾಗೆ ಕೊನೆಗೂ ಸರ್ಕಾರ ಬ್ರೇಕ್ ಹಾಕಿದ್ದು, ಟ್ಯಾಂಕರ್ ನೀರಿಗೆ ದರ ನಿಗದಿ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬೇಸಿಗೆಯ ಆರಂಭವಾಗಿದ್ದು, ನಗರದಲ್ಲಿ ನೀರಿನ ಅಭಾವ ಶುರುವಾಗಿದೆ. ಈ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡು ಕೆಲವರು ಸಾರ್ವಜನಿಕರಿಂದ ತಮ್ಮಗಿಷ್ಟ ಬಂದ ದರ ನಿಗದಿ ಮಾಡಿ ಹಣ ವಸೂಲಿ ಮಾಡುತ್ತಿದ್ದರು. ಈ ಮಾಫಿಯಾಗೆ ಕೊನೆಗೂ ಸರ್ಕಾರ ಬ್ರೇಕ್ ಹಾಕಿದ್ದು, ಟ್ಯಾಂಕರ್ ನೀರಿಗೆ ದರ ನಿಗದಿ ಮಾಡಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ನೀರಿನ ಟ್ಯಾಂಕರ್‌ಗಳಿಗೆ ದರ ನಿಗದಿಪಡಿಸಿ ಆದೇಶ ಹೊರಡಿಸಿದ್ದು, ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ,

ಸರ್ಕಾರವು 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಬೆಂಗಳೂರು ನಗರ ಜಿಲ್ಲೆಯ ನೀರು ಸರಬರಾಜಿಗೆ ತಾತ್ಕಾಲಿಕವಾಗಿ 4 ತಿಂಗಳ ಅವಧಿಗೆ 200 ಖಾಸಗಿ ನೀರಿನ ಟ್ಯಾಂಕರ್‌ಗಳನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ನೀಡಲು ಹಾಗೂ ದರ ನಿಗದಿಪಡಿಸಲು ಕೋರಿರುತ್ತಾರೆ. ಅದರಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಕುಡಿಯುವ ನೀರನ್ನು ಸಮರ್ಪಕವಾಗಿ ನಿಭಾಯಿಸುವ ದೃಷ್ಟಿಯಿಂದ ಟ್ಯಾಂಕರ್‌ಗಳಿಗೆ ದರ ನಿಗದಿಪಡಿಸಲು ತಾಂತ್ರಿಕ ಸಮಿತಿಯನ್ನು ರಚಿಸಲಾಗಿತ್ತು. ಈಗ ಆ ತಾಂತ್ರಿಕ ಸಮಿತಿಯ ಶಿಫಾರಿಸಿನ ಮೇರೆಗೆ ದರ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ.

6 ಸಾವಿರ ಲೀಟರ್‌ ಸಾಮರ್ಥ್ಯದ ವಾಟರ್‌ ಟ್ಯಾಂಕರ್‌ ಅನ್ನು ಬಾಡಿಗೆ ಪಡೆದರೆ ಪ್ರತಿ ದಿನಕ್ಕೆ 5,200 ರೂಪಾಯಿಗಳನ್ನು ಪಾವತಿಸಬೇಕಾಗಿದ್ದು, 12 ಸಾವಿರ ಲೀಟರ್‌ ಸಾಮರ್ಥ್ಯದ ವಾಟರ್‌ ಟ್ಯಾಂಕರ್‌ ಬಾಡಿಗೆ ಪಡೆದರೆ ಪ್ರತಿ ದಿನಕ್ಕೆ 7,100 ರೂಪಾಯಿಗಳನ್ನು ಪಾವತಿಸಬೇಕಿದೆ.

ಸಂಗ್ರಹ ಚಿತ್ರ
ವಾಟರ್ ಟ್ಯಾಂಕರ್ ಮಾಫಿಯಾ ಕಡಿವಾಣಕ್ಕೆ ಬಿಬಿಎಂಪಿ ಮುಂದು: ಮಾರ್ಚ್ 7ರೊಳಗೆ ನೋಂದಣಿ ಕಡ್ಡಾಯ

6 ಸಾವಿರ ಲೀಟರ್‌ ನೀರನ್ನು ತೆಗೆದುಕೊಂಡರೆ 600 ರಿಂದ 750 ರೂ. ಇದೆ. 8 ಸಾವಿರ ಲೀಟರ್‌ ನೀರಿಗೆ 700 ರಿಂದ 850 ರೂ. ನಿಗದಿಪಡಿಸಲಾಗಿದೆ. 12 ಸಾವಿರ ಲೀಟರ್‌ ನೀರಿಗೆ 1,000 ದಿಂದ 1,200 ರೂ. ದರವನ್ನು ನಿಗದಿಪಡಿಸಲಾಗಿದೆ. ತಿಂಗಳ ಬಾಡಿಗೆ ಒಪ್ಪಿಕೊಳ್ಳುವವರಿಗೆ 5 ಕಿ.ಮೀಟರ್ ಗೆ 510 ರೂ ಮತ್ತು 10 ಕಿಲೋ ಮೀಟರ್ ದೂರ ಹೋದರೆ 650 ರೂ. ದರ ನಿಗದಿ ಮಾಡಲಾಗಿದೆ.

ನಗರದಲ್ಲಿ ನೀರಿನ ಅಭಾವ ತಲೆದೂರಿದ್ದು, ಟ್ಯಾಂಕರ್ ಮಾಫಿಯಾಗೆ ಬಿಬಿಎಂಪಿ ಕಡಿವಾಣ ಹಾಕುತ್ತಿದೆ. ಈ ನಿಟ್ಟಿನಲ್ಲಿ ಮಾ. 7 ರೊಳಗೆ ಸ್ವಯಂ ನೋಂದಾಯಿಸಿಕೊಳ್ಳಲು ಬಿಬಿಎಂಪಿ ಗಡುವು ನೀಡಿದೆ.

ಬೇಸಿಗೆ ಹಿನ್ನೆಲೆ ನೀರಿನ ಅಭಾವವಿರುವ ಬೆಂಗಳೂರು ನಗರದ ಪ್ರದೇಶಗಳಲ್ಲಿ ಖಾಸಗಿ ಟ್ಯಾಂಕರ್ಗಳು ಹೆಚ್ಚಿನ ದರಕ್ಕೆ ಮಾರಾಟ ಮಾಡುವುದನ್ನು ತಡೆಯಲು ಬಿಬಿಎಂಪಿ ಕಠಿಣ ಕ್ರಮ ಕೈಗೊಂಡಿದೆ. ಮಾರ್ಚ್ 7ರೊಳಗೆ ಸ್ವಯಂ ನೋಂದಣಿ ಮಾಡಿಕೊಳ್ಳಲು ಟ್ಯಾಂಕರ್ ಮಾಲೀಕರಿಗೆ ಗಡುವು ನೀಡಿದೆ.

ಬೆಂಗಳೂರು ನಗರದಲ್ಲಿ ಒಟ್ಟು 3,500 ನೀರಿನ ಟ್ಯಾಂಕರ್‌ಗಳ ಪೈಕಿ ಶೇ 10ರಷ್ಟು ಅಂದರೆ 219 ಟ್ಯಾಂಕರ್‌ಗಳು ಮಾತ್ರ ನೋಂದಣಿಯಾಗಿವೆ. ಗಡುವಿನೊಳಗೆ ನೋಂದಣಿ ಮಾಡದಿದ್ದರೆ ಸರ್ಕಾರ ಅವುಗಳನ್ನು ವಶಪಡಿಸಿಕೊಳ್ಳಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com