ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಗಾಯಗೊಂಡಿದ್ದ ಮಹಿಳೆ ಆರೋಗ್ಯದಲ್ಲಿ ಚೇತರಿಕೆ, ಐಸಿಯುನಿಂದ ವಾರ್ಡ್'ಗೆ ಶಿಫ್ಟ್

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇದೀಗ ಅವರನ್ನು ತೀವ್ರ ನಿಗಾ ಘಟಕ (ಐಸಿಯು)ದಿಂದ ವಿಶೇಷ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಗಾಯಾಳುವನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಗಾಯಾಳುವನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇದೀಗ ಅವರನ್ನು ತೀವ್ರ ನಿಗಾ ಘಟಕ (ಐಸಿಯು)ದಿಂದ ವಿಶೇಷ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಬ್ರೂಕ್‌ಫೀಲ್ಡ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಪ್ರದೀಪ್ ಕುಮಾರ್ ಟಿಜೆ ಅವರು ಮಾಹಿತಿ ನೀಡಿದ್ದಾರೆ.

ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ 10 ಮಂದಿಯ ಪೈಕಿ 46 ವರ್ಷದ ಮಹಿಳೆಗೆ ಶೇ.40ರಷ್ಟು ಸುಟ್ಟಗಾಯಗಳಾಗಿತ್ತು. ಐದು ದಿನಗಳಿಂದ ಐಸಿಯುನಲ್ಲಿದ್ದರು.

ವೈಟ್‌ಫೀಲ್ಡ್‌ನಲ್ಲಿರುವ ಮಲ್ಟಿ ನ್ಯಾಷನಲ್ ಕಂಪನಿಯಲ್ಲಿ ಅಕೌಂಟೆಂಟ್ ಆಗಿರುವ ಸ್ವರ್ಣಾಂಬಾ ಅವರಿಗೆ ಗಂಭೀರವಾಗಿ ಸುಟ್ಟಗಾಯಗಳಾಗಿತ್ತು. ಗಾಯಗಳಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿದ್ದು, ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

ತಲೆಗೆ ಯಾವುದೇ ಗಾಯಗಳಾಗಿಲ್ಲ. ಸಿಟಿ ಸ್ಕ್ಯಾನ್ ಮೂಲಕ ವೈದ್ಯರು ದೃಢಪಡಿಸಿದ್ದಾರೆ, ಸ್ಫೋಟದ ಶಬ್ಧದ ತೀವ್ರತೆಯಿಂದಾಗಿ ಪತ್ನಿ ತೀವ್ರ ಆಘಾತಕ್ಕೊಳಗಾಗಿದ್ದ, ಆಕೆಗೆ ಘಟನೆಯನ್ನು ಸ್ಮರಿಸಲು ಸಾಧ್ಯವಾಗುತ್ತಿಲ್ಲ. ಡಿಸ್ಚಾರ್ಜ್ ದಿನಾಂಕ ಇನ್ನೂ ತಿಳಿದಿಲ್ಲ. ಇದೀಗ ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು ಸ್ವರ್ಣಾಂಬಾ ಅವರ ಪತಿ ಶ್ಯಾಮ್ ಸುಂದರ್ ಅವರು ಹೇಳಿದ್ದಾರೆ.

ಗಾಯಾಳುವನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಾಂಬರ್ ಭಟ್ಕಳಕ್ಕೆ ತೆರಳಿರುವ ಶಂಕೆ, ಬಳ್ಳಾರಿ-ತುಮಕೂರು ಬಸ್‌ ನಿಲ್ದಾಣದಲ್ಲಿ ಎನ್ಐಎ ಶೋಧ

ಸ್ವರ್ಣಾಂಬಾ ಅವರು ಸಿಂಥೆಟಿಕ್ ಕುರ್ತಾವನ್ನು ಧರಿಸಿದ್ದರು. ಇದರಿಂದ ಬೆಂಕಿ ಸುಲಭವಾಗಿ ಹೊತ್ತಿಕೊಂಡಿದೆ. ಹೀಗಾಗಿ ತೀವ್ರ ಸುಟ್ಟಗಾಯಗಳಾಗಿವೆ ಎಂದು ಸ್ವರ್ಣಾಂಬ ಅವರ ಸಹೋದ್ಯೋಗಿಯಾಗಿರುವ ಗಾಯಾಳು ಶ್ರೀನಿವಾಸನ್ ಅವರ ಪತ್ನಿ ಕಮಲಾ ಶ್ರೀನಿವಾಸನ್ ಅವರು ಹೇಳಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಖಾಸಗಿ ಸಂಸ್ಥೆಯ ಉದ್ಯೋಗಿ ದೀಪಾಂಶು (23) ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಕೆಫೆಯಲ್ಲಿ ಹೌಸ್‌ಕೀಪಿಂಗ್ ಸಿಬ್ಬಂದಿಗಳಲ್ಲಿ ಒಬ್ಬರಾದ ಫಾರೂಕ್ ಹುಸೇನ್ (19) ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ಬ್ರೂಕ್‌ಫೀಲ್ಡ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com