ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಳ್ಗಿಚ್ಚು: ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ

ಬಿಳಿಗಿರಿರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಬಿಆರ್‌ಟಿ) ಇತ್ತೀಚೆಗೆ ಸಂಭವಿಸಿದ ಕಾಡ್ಗಿಚ್ಚಿನಿಂದ ಉಂಟಾದ ಹಾನಿಯ ನಿಖರವಾದ ಮಾಹಿತಿ ಕೋರಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಇಲಾಖೆಗೆ ಪತ್ರ ಬರೆದಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಹುಬ್ಬಳ್ಳಿ: ಬಿಳಿಗಿರಿರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಬಿಆರ್‌ಟಿ) ಇತ್ತೀಚೆಗೆ ಸಂಭವಿಸಿದ ಕಾಳ್ಗಿಚ್ಚಿನಿಂದ ಉಂಟಾದ ಹಾನಿಯ ನಿಖರವಾದ ಮಾಹಿತಿ ಕೋರಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಇಲಾಖೆಗೆ ಪತ್ರ ಬರೆದಿದ್ದಾರೆ.

ಗ್ರೌಂಡ್ ರಿಪೋರ್ಟ್ ಪಡೆಯಲು ನೋಡಲ್ ಅಧಿಕಾರಿಯನ್ನೂ ಅವರು ನೇಮಿಸಿದ್ದರು.

ಬಜೆಟ್ ಅಧಿವೇಶನದ ಸಂದರ್ಭದಲ್ಲಿ, ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಎಸ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಖಂಡ್ರೆ, ಬಿಆರ್‌ಟಿ ಅಭಯಾರಣ್ಯದಲ್ಲಿ ಫೆಬ್ರುವರಿಯಲ್ಲಿ ಸಂಭವಿಸಿದ ಕಾಡ್ಗಿಚ್ಚಿನಲ್ಲಿ ಸುಮಾರು 10 ಎಕರೆ ಅರಣ್ಯಕ್ಕೆ ಹಾನಿಯಾಗಿದೆ ಎಂದು ಹೇಳಿದರು. ಆದಾಗ್ಯೂ, ಬೆಂಕಿಯಿಂದ ಉಂಟಾದ ಹಾನಿಯ ಪ್ರಮಾಣವನ್ನು ತಪ್ಪಾಗಿ ವರದಿ ಮಾಡಲಾಗಿದೆ ಮತ್ತು ಆರಂಭದಲ್ಲಿ ಹೇಳಿದ್ದಕ್ಕಿಂತ ಹೆಚ್ಚಿನದಾಗಿದೆ ಎಂಬುದು ಸಚಿವರ ಗಮನಕ್ಕೆ ಬಂದಿತು ಎಂದು ಮೂಲಗಳು ತಿಳಿಸಿವೆ.

ಪ್ರಾತಿನಿಧಿಕ ಚಿತ್ರ
ಬಂಡಿಪುರ ಅಭಯಾರಣ್ಯದಲ್ಲಿ ಕಾಡ್ಗಿಚ್ಚು ಭೀತಿ: ಕೇಂದ್ರದ ನೀತಿಯಿಂದ ಅಗ್ನಿಶಾಮಕ ವಾಹನಗಳ ಕೊರತೆ, ಬೆಂಕಿ ಹತ್ತಿಕೊಂಡರೆ ದೇವರೇ ಗತಿ!

ಬಿಳಿಗಿರಿರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದಲ್ಲಿ ಸೋಮವಾರ ಕಾಳ್ಗಿಚ್ಚಿನಿಂದಾಗಿ 50 ಎಕರೆಗೂ ಹೆಚ್ಚು ಕಾಡು ಸುಟ್ಟು ಭಸ್ಮವಾಗಿದೆ. ಕುರಿಮಂದೆ, ಬಜೆಬಾವಿ ಪ್ರದೇಶದ ಮೂರು ಕಡೆಯಲ್ಲಿ ಕಾಳ್ಗಿಚ್ಚು ಕಾಣಿಸಿಕೊಂಡಿದ್ದು, ಸದ್ಯ ಬೆಂಕಿ ನಂದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com