5, 8, 9 ಮತ್ತು 11ನೇ ತರಗತಿಗೆ ಬೋರ್ಡ್​ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು

ಮಹತ್ವದ ಬೆಳವಣಿಗೆಯಲ್ಲಿ 5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್‌ ವಿಭಾಗೀಯ ಪೀಠ ಗುರುವಾರ ಅನುಮತಿ ನೀಡಿದೆ.
ಕರ್ನಾಟಕ ಹೈಕೋರ್ಟ್ ಮತ್ತು ಬೋರ್ಡ್ ಪರೀಕ್ಷೆ
ಕರ್ನಾಟಕ ಹೈಕೋರ್ಟ್ ಮತ್ತು ಬೋರ್ಡ್ ಪರೀಕ್ಷೆ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ 5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್‌ ವಿಭಾಗೀಯ ಪೀಠ ಗುರುವಾರ ಅನುಮತಿ ನೀಡಿದೆ.

ನಿನ್ನೆ 5, 8, 9 ಮತ್ತು 11ನೇ ತರಗತಿಗೆ ಬೋರ್ಡ್​ ಪರೀಕ್ಷೆಯನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ನಿಗದಿಯಂತೆ ಸೋಮವಾರದಿಂದ ಬೋರ್ಡ್ ಪರೀಕ್ಷೆಗಳು ನಡೆಯಲಿವೆ.

​2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್​ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್​ ಪರೀಕ್ಷೆಯನ್ನು ರದ್ದುಪಡಿಸಿತ್ತು. ಆದರೆ ರಾಜ್ಯ ಸರ್ಕಾರ ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿತ್ತು.

ಕರ್ನಾಟಕ ಹೈಕೋರ್ಟ್ ಮತ್ತು ಬೋರ್ಡ್ ಪರೀಕ್ಷೆ
5, 8, 9 ತರಗತಿ ಪಬ್ಲಿಕ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಆದೇಶ

9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್‌ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಗಂಭೀರತೆ ಕಾಣಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com