ಪಾಕ್ ಪರ ಘೋಷಣೆ: ನಾಸೀರ್​ ಹುಸೇನ್​​ಗೆ ಪ್ರತಿಜ್ಞಾವಿಧಿ ಬೋಧಿಸದಂತೆ ಉಪ ರಾಷ್ಟ್ರಪತಿಗಳಿಗೆ ಹಿರಿಯ ಅಧಿಕಾರಿಗಳ ಪತ್ರ!

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಸಯ್ಯದ್​ ನಾಸೀರ್ ಹುಸೇನ್ ಅವರಿ​ಗೆ ಪ್ರತಿಜ್ಞಾವಿಧಿ ಬೋಧಿಸದಂತೆ ನಿವೃತ್ತ ಐಎಎಸ್, ಐಪಿಎಸ್, ಐಎಫ್​ಎಸ್ ಮತ್ತು ಐಆರ್​​ಎಸ್ ಅಧಿಕಾರಿಗಳು ಉಪ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದು, ಅಧಿಕಾರಿಗಳ ನಡೆಯನ್ನು ಬಿಜೆಪಿ ಸ್ವಾಗತಿಸಿದೆ.
ನಾಸೀರ್ ಹುಸೇನ್
ನಾಸೀರ್ ಹುಸೇನ್

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಸಯ್ಯದ್​ ನಾಸೀರ್ ಹುಸೇನ್ ಅವರಿ​ಗೆ ಪ್ರತಿಜ್ಞಾವಿಧಿ ಬೋಧಿಸದಂತೆ ನಿವೃತ್ತ ಐಎಎಸ್, ಐಪಿಎಸ್, ಐಎಫ್​ಎಸ್ ಮತ್ತು ಐಆರ್​​ಎಸ್ ಅಧಿಕಾರಿಗಳು ಉಪ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದು, ಅಧಿಕಾರಿಗಳ ನಡೆಯನ್ನು ಬಿಜೆಪಿ ಸ್ವಾಗತಿಸಿದೆ.

ಉಪ ರಾಷ್ಟ್ರಪತಿಗಳಿಗೆ ಪತ್ರ ಬರೆದಿರುವ ಅಧಿಕಾರಿಗಳು, ರಾಜ್ಯಸಭೆಗೆ ಹೊಸದಾಗಿ ಚುನಾಯಿತರಾದ ಸೈಯದ್ ನಸೀರ್ ಹುಸೇನ್ ಅವರಿಗೆ ಸಂಸತ್ತಿನ ಪ್ರತಿಷ್ಠಿತ ಮೇಲ್ಮನೆ ಸದಸ್ಯರಾಗಿ ಕಾರ್ಯನಿರ್ವಹಿಸಲು ಪ್ರಮಾಣ ವಚನ ಬೋಧಿಸಬೇಡಿ ಎಂದು ಮನವಿ ಮಾಡಿದ್ದಾರೆ.

ಅಧಿಕಾರಿಗಳ ನಡೆಯನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸ್ವಾಗತಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯಸಭಾ ಚುನಾವಣೆಯಲ್ಲಿ ಚುನಾಯಿತರಾಗಿರುವ ಕಾಂಗ್ರೆಸ್ ನಾಯಕ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ ಘಟನೆ ಹಿನ್ನೆಲೆಯಲ್ಲಿ ಅವರಿಗೆ ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಬಾರದು ಎಂದು 17 ನಿವೃತ್ತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಘನತೆವೆತ್ತ ಉಪರಾಷ್ಟಪತಿಗಳು ಹಾಗೂ ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ಹಿರಿಯ ಅಧಿಕಾರಿಗಳ ನಿಲುವನ್ನು ಸ್ವಾಗತಿಸುತ್ತೇನೆ ಮತ್ತು ಬೆಂಬಲಿಸುತ್ತೇನೆಂದು ಹೇಳಿದ್ದಾರೆ.

ನಾಸೀರ್ ಹುಸೇನ್
ವಿಧಾನಸಭೆಯಲ್ಲಿ 'ಪಾಕಿಸ್ತಾನ ಪರ' ಘೋಷಣೆ: ಆರೋಪಿ ಮೆಣಸಿನಕಾಯಿ ವ್ಯಾಪಾರಿ, ನಾಸೀರ್ ಹುಸೇನ್ ಆಪ್ತ!

ದೇಶದ್ರೋಹಿಗಳನ್ನು ಪೋಷಿಸಿ, ಬೆಂಬಲಿಸಿ ಅವರು ರಾಷ್ಟ್ರ ವಿದ್ರೋಹದ ಪಾಪದ ಕೆಲಸ ಮಾಡಿದ ಮೇಲೂ ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ವ್ಯಕ್ತಿಗೆ ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತಿನ ಒಳಗೆ ಪ್ರವೇಶಿಸುವ ಅರ್ಹತೆಯೇ ಇಲ್ಲ. ಇಂತಹ ವ್ಯಕ್ತಿಗಳಿಗೆ ರಾಜ್ಯಸಭಾ ಸದಸ್ಯತ್ವ ನೀಡಲು ಹೊರಟಿರುವ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಯಾಗಬೇಕು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್ ಅವರಿಗೆ ಕಿಂಚಿತ್ತಾದರೂ ದೇಶಪ್ರೇಮವಿದ್ದರೆ ನಾಸಿರ್ ಹುಸೇನ್ ಅವರ ರಾಜೀನಾಮೆ ಪಡೆದು ಮರುಚುನಾವಣೆ ನಡೆಸಬೇಕು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com