ಸಿದ್ದಗಂಗಾ ಜಾತ್ರೆಗೆ ಬಂದಿದ್ದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಆರೋಪಿಗಳ ಬಂಧನ

ಸಿದ್ದಗಂಗಾ ಮಠದ ಜಾತ್ರೆಗೆ ಬಂದಿದ್ದ 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಬಾಲಕಿಯು ತನ್ನ ಸ್ನೇಹಿತನೊಟ್ಟಿಗೆ ಬೆಟ್ಟದ ಬಳಿ ಕುಳಿತಿದ್ದಳು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತುಮಕೂರು: ಸಿದ್ದಗಂಗಾ ಮಠದ ಜಾತ್ರೆಗೆ ಬಂದಿದ್ದ 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಬಾಲಕಿಯು ತನ್ನ ಸ್ನೇಹಿತನೊಟ್ಟಿಗೆ ಬೆಟ್ಟದ ಬಳಿ ಕುಳಿತಿದ್ದಳು. ಅಲ್ಲಿಗೆ ಬಂದ ಮೂವರು ಕಿರಾತಕರು ಬಾಲಕಿಯನ್ನು ಬೆದರಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ.

ಸ್ನೇಹಿತನ ಜತೆಗೆ ಸಿದ್ದಗಂಗಾ ಮಠದ ಜಾತ್ರೆಗೆ ಬಾಲಕಿ ಬಂದಿದ್ದಳು. ಈ ವೇಳೆ ಮೂವರು ಕಿರಾತಕರು ಮೊಬೈಲ್‌ನಲ್ಲಿ ವಿಡಿಯೊವನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ಬಳಿಕ ಆ ವಿಡಿಯೊವನ್ನು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಮಾಡುವುದಾಗಿ ಬಾಲಕಿಗೆ ಬೆದರಿಕೆ ಹಾಕಿದ್ದಾರೆ.

ಇದರಿಂದ ಬಾಲಕಿ ಭಯಗೊಂಡಿದ್ದಾಳೆ. ಈ ವೇಳೆ ಬಾಲಕಿಯನ್ನು ಬಲವಂತವಾಗಿ ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮಠದ ಪಕ್ಕದಲ್ಲಿರುವ ಬಂಡೆಪಾಳ್ಯದ ರೂಂನಲ್ಲೇ ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ.

ಸಾಂದರ್ಭಿಕ ಚಿತ್ರ
ಅಮಲು ಪದಾರ್ಥ ನೀಡಿ ಕಾರಿನಲ್ಲಿಯೇ ಕಲಾವಿದೆ ಮೇಲೆ ಸಹ ಕಲಾವಿದರಿಂದ ಸಾಮೂಹಿಕ ಅತ್ಯಾಚಾರ

ಅತ್ಯಾಚಾರವೆಸಗಿದ ನಂತರ ಬಾಲಕಿಯನ್ನು ಮತ್ತೆ ಮಠದ ಹತ್ತಿರ ಕರೆತಂದು ಬಿಟ್ಟು ಅಲ್ಲಿಂದ ಕಾಲ್ಕಿತ್ತಿದ್ದಾರೆ. ನಂತರ ಬಾಲಕಿಯ ಸ್ನೇಹಿತ ಆಸ್ಪತ್ರೆಗೆ ಸೇರಿಸಿದ್ದಾನೆ. ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು.

ಅತ್ಯಾಚಾರದ ದೂರು ದಾಖಲಾಗುತ್ತಿದ್ದಂತೆ ಅಲರ್ಟ್ ಆದ ಪೊಲೀಸರು ಬಂಡೆಪಾಳ್ಯದಲ್ಲಿ ವಾಸವಿದ್ದ ಅಮೋಘ, ಹನುಮಂತ, ಪ್ರತಾಪ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com