ರಾಮೇಶ್ವರ ಕೆಫೆ ಸ್ಫೋಟ ಪ್ರಕರಣ: ಕರಾವಳಿ ಮೇಲೆ ಎನ್ಐಎ ಹದ್ದಿನ ಕಣ್ಣು, ಓರ್ವ ಶಂಕಿತ ವಶಕ್ಕೆ, ತೀವ್ರ ವಿಚಾರಣೆ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತ ವ್ಯಕ್ತಿಯನ್ನು ರಾಷ್ಟ್ರೀಯ ತನಿಖಾ ದಳ ಶುಕ್ರವಾರ ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ರಾಮೇಶ್ವರ ಕೆಫೆ ಸ್ಫೋಟ ಪ್ರಕರಣ: ಕರಾವಳಿ ಮೇಲೆ ಎನ್ಐಎ ಹದ್ದಿನ ಕಣ್ಣು, ಓರ್ವ ಶಂಕಿತ ವಶಕ್ಕೆ, ತೀವ್ರ ವಿಚಾರಣೆ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತ ವ್ಯಕ್ತಿಯನ್ನು ರಾಷ್ಟ್ರೀಯ ತನಿಖಾ ದಳ ಶುಕ್ರವಾರ ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತ​ನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ರಾಜ್ಯದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸಿದ್ದ ಆರೋಪದಡಿ ಬಳ್ಳಾರಿಯ ಕೌನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿದ್ದ, ನಿಷೇಧಿತ ಪಿಎಫ್ಐ ಸಂಘಟನೆಯ ಸದಸ್ಯ ಮಿನಾಜ್ ಹಾಗೂ ಆತನ ಗುಂಪಿನ ಮತ್ತೋರ್ವ ಸದಸ್ಯ ಸಯ್ಯದ್ ಸಮೀರ್ ಎಂಬಾತನನ್ನು ಈ ಹಿಂದೆ ಎನ್ಐಎ ಬಂಧಿಸಿತ್ತು. ಬಳಿಕ ಆತನನ್ನು ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು.

ರಾಮೇಶ್ವರ ಕೆಫೆ ಸ್ಫೋಟ ಪ್ರಕರಣ: ಕರಾವಳಿ ಮೇಲೆ ಎನ್ಐಎ ಹದ್ದಿನ ಕಣ್ಣು, ಓರ್ವ ಶಂಕಿತ ವಶಕ್ಕೆ, ತೀವ್ರ ವಿಚಾರಣೆ
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಟ್ಟೆ ಬದಲಿಸಿ ಬಸ್ ಹತ್ತಿದ ಬಾಂಬರ್, ತುಮಕೂರು ಮೂಲಕ ಬಳ್ಳಾರಿಗೆ ಪ್ರಯಾಣ

ಕೆಫೆ ಬಾಂಬ್ ಸ್ಫೋಟದ ಬಗ್ಗೆ ಹಲವು ಮಾಹಿತಿ ಸಂಗ್ರಹಿಸಿರುವ ಎನ್‌ಐಎ ಅಧಿಕಾರಿಗಳು, ಮಿನಾಜ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಜೈಲಿಗೆ ಭೇಟಿ ನೀಡಿ ಪರಿಶೀಲಿಸಿದ ವೇಳೆ ದೊರೆತ ಕೆಲ ಮಾಹಿತಿ ಆಧಾರದಲ್ಲಿ, ಮಿನಾಜ್‌ನನ್ನು ಬಾಡಿ ವಾರಂಟ್ ಮೂಲಕ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು’.‘ಮನವಿ ಪುರಸ್ಕರಿಸಿರುವ ನ್ಯಾಯಾಲಯ, ಮಿನಾಜ್‌ನನ್ನು ಮಾರ್ಚ್ 9ರವರೆಗೆ ಕಸ್ಟಡಿಗೆ ಒಪ್ಪಿಸಿದೆ.

ಬುಧವಾರ (ಮಾರ್ಚ್ 6) ಮಿನಾಜ್‌ನನ್ನು ಕಸ್ಟಡಿಗೆ ಪಡೆದಿರುವ ಎನ್‌ಐಎ ಅಧಿಕಾರಿಗಳು, ಮಾಹಿತಿ ಕಲೆಹಾಕುತ್ತಿದ್ದಾರೆ. ಸ್ಫೋಟದಲ್ಲಿ ಈತನ ಪಾತ್ರವೇನು? ಬಾಂಬ್‌ ಇಟ್ಟವನಿಗೂ ಈತನಿಗೂ ಏನಾದರೂ ಸಂಬಂಧವಿದೆಯಾ ‌ಎಂಬುದು ವಿಚಾರಣೆಯಿಂದ ತಿಳಿಯಬೇಕಿದೆ.

ಶಂಕಿತ ಉಗ್ರ ಮಿನಾಜ್, ಬಳ್ಳಾರಿ ಕೌಲ್‌ಬಜಾರ್‌ನಲ್ಲಿ ಬಟ್ಟೆ ಮಾರಾಟ ಮಳಿಗೆ ಇಟ್ಟುಕೊಂಡಿದ್ದ. ಪಿಎಫ್‌ಐ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ ಈತ, ಸ್ಥಳೀಯ ಮುಖಂಡರ ಜೊತೆ ಉತ್ತಮ ಒಡನಾಟ ಹೊಂದಿದ್ದ’.

ಐಎಸ್‌ ವಿವಿಧ ಘಟಕಗಳ ಮುಖ್ಯಸ್ಥರ ಜೊತೆ ಸಂಪರ್ಕ ಸಾಧಿಸಿದ್ದ ಈತ, ದೇಶದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ. ಇದಕ್ಕಾಗಿ ಕೆಲ ವಿದೇಶಿಯರಿಂದ ಹಣವನ್ನೂ ಪಡೆಯುತ್ತಿದ್ದ. ದೇಶದ ವಿವಿಧ ರಾಜ್ಯಗಳ ಮುಸ್ಲಿಂ ಸಮುದಾಯದ ಯುವಕರನ್ನು ಮೊಬೈಲ್ ಆ್ಯಪ್ ಮೂಲಕ ಸಂಪರ್ಕಿಸುತ್ತಿದ್ದ. ಧರ್ಮದ ಹೆಸರಿನಲ್ಲಿ ಯುವಕರನ್ನು ಭಯೋತ್ಪಾದನಾ ಕೃತ್ಯಕ್ಕೆ ಪ್ರಚೋದಿಸುತ್ತಿದ್ದ. ಇವರಲ್ಲಿ ಹೆಚ್ಚಿನವರು ಯುವಕರು, ಕಾಲೇಜು ವಿದ್ಯಾರ್ಥಿಗಳು ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಮೂಲಗಳು ಹೇಳಿವೆ.

ರಾಮೇಶ್ವರ ಕೆಫೆ ಸ್ಫೋಟ ಪ್ರಕರಣ: ಕರಾವಳಿ ಮೇಲೆ ಎನ್ಐಎ ಹದ್ದಿನ ಕಣ್ಣು, ಓರ್ವ ಶಂಕಿತ ವಶಕ್ಕೆ, ತೀವ್ರ ವಿಚಾರಣೆ
ರಾಮೇಶ್ವರ ಕೆಫೆ ಸ್ಫೋಟ ಪ್ರಕರಣ: ಬಾಂಬರ್ʼನ ಮಾಸ್ಕ್ ರಹಿತ ರೇಖಾಚಿತ್ರ ಬಿಡಿಸಿದ ಕಲಾವಿದ!

ಮಿನಾಜ್ ಜೊತೆಯಲ್ಲೇ ಬಳ್ಳಾರಿಯ ಸೈಯದ್ ಸಮೀರ್, ಬೆಂಗಳೂರಿನ ಮೊಹಮ್ಮದ್ ಮುನಿರುದ್ದೀನ್, ಸೈಯದ್ ಸಮೀವುಲ್ಲಾ, ಮೊಹಮ್ಮದ್ ಮುಜಮಿಲ್, ಮುಂಬೈನ ಅನಸ್ ಇಕ್ಬಾಲ್ ಶೇಖ್, ದೆಹಲಿಯ ಶಿಯಾನ್ ರಹಮಾನ್ ಅಲಿಯಾಸ್ ಹುಸೇನ್, ಜಾರ್ಖಂಡ್‌ನ ಮೊಹಮ್ಮದ್ ಶಹಬಾಜ್ ಅಲಿಯಾಸ್ ಜುಲ್ಫಿಕರ್ ಅಲಿಯಾಸ್ ಗುಡ್ಡುನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು. ಇದರಲ್ಲಿ ಕೆಲವರು ಎಂಜಿನಿಯರಿಂಗ್ ಹಾಗೂ ಕಾನೂನು ವಿದ್ಯಾರ್ಥಿಗಳು’ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ ಕೆಫೆ ಬಾಂಬ್ ಸ್ಫೋಟ ಘಟನೆ ಬಳಿಕ ಎನ್ಐಎ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಹದ್ದಿನ ಕಣ್ಣಿಟ್ಟಿದೆ.

ಎನ್‌ಐಎ ಘಟಕವನ್ನು ಮಂಗಳೂರಿನಲ್ಲಿ ಸ್ಥಾಪಿಸಬೇಕೆಂಬ ಬೇಡಿಕೆಗೆ ಪುಷ್ಟಿ ನೀಡುವಂತೆ ಪದೇಪದೆ ಎನ್‌ಐಎ ದ.ಕ. ಜಿಲ್ಲೆಯಲ್ಲಿ ಶೋಧ ನಡೆಸುವ ಸ್ಥಿತಿ ಉಂಟಾಗುತ್ತಿದೆ. ಕೆಲವೊಮ್ಮೆ ಭಾರೀ ಪ್ರತಿರೋಧದ ನಡುವೆ ಪೊಲೀಸ್‌ ಭದ್ರತೆಯೊಂದಿಗೆ ಶೋಧ ಕೂಡ ನಡೆಸಿತ್ತು.

ಬೆಂಗಳೂರು ಕೆಫೆಯಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟಕ್ಕೆ ಸಂಬಂಧಿಸಿದಂತೆ ಮತ್ತೆ ಎನ್‌ಐಎ ಕಣ್ಣು ಕರಾವಳಿ ಮೇಲೆ ಬಿದ್ದಿದೆ. ಮಂಗಳವಾರ ದ.ಕ ಜಿಲ್ಲೆಯ ಎರಡು ಕಡೆ ಶೋಧ ನಡೆಸಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com