ಬೆಂಗಳೂರು: ವಾರದ ಬಳಿಕ ರಾಮೇಶ್ವರಂ ಕೆಫೆ ಪುನರಾರಂಭ!

ಬಾಂಬ್ ಸ್ಫೋಟ ಸಂಭವಿಸಿದ ವಾರದ ಬಳಿಕ ಬೆಂಗಳೂರಿನ ರಾಮೇಶ್ವರಂ ಮತ್ತೆ ಶುಕ್ರವಾರ ಕಾರ್ಯಾರಂಭ ಮಾಡಿದೆ.
ರಾಮೇಶ್ವರಂ ಕೆಫೆ
ರಾಮೇಶ್ವರಂ ಕೆಫೆ

ಬೆಂಗಳೂರು: ಬಾಂಬ್ ಸ್ಫೋಟ ಸಂಭವಿಸಿದ ವಾರದ ಬಳಿಕ ಬೆಂಗಳೂರಿನ ರಾಮೇಶ್ವರಂ ಮತ್ತೆ ಶುಕ್ರವಾರ ಕಾರ್ಯಾರಂಭ ಮಾಡಿದೆ.

ಶಿವರಾತ್ರಿ ದಿನವೇ ಕೆಫೆ ಪುನರಾರಂಭ ಮಾಡುವುದಾಗಿ ಕೆಫೆ ಮಾಲೀಕರು ತಿಳಿಸಿದ್ದರು. ಅದರಂತೆ ಶುಕ್ರವಾರ ಬೆಳಿಗ್ಗೆಯೇ ಕೆಫೆ ಪುನರಾರಂಭಗೊಂಡಿದೆ.

ಕೆಫೆಯಲ್ಲಿ ಬೆಳಗ್ಗೆಯಿಂದಲೇ ಪೂಜಾ ಕೈಂಕರ್ಯಗಳು ನೆರವೇರಿದವು. ಆ ಮೂಲಕ ಮತ್ತೆ ಗ್ರಾಹಕರಿಗೆ ಕೆಫೆ ಮುಕ್ತವಾಗಿದೆ.

ಇನ್ನು ಬಾಂಬ್ ಸ್ಫೋಟದ ಘಟನೆಯಿಂದ ಎಚ್ಚೆತ್ತುಕೊಂಡಿರುವ ಕೆಫೆ ಮಾಲೀಕರು, ಇದೀಗ ಪುನರಾರಂಭದ ವೇಳೆ ಸೂಕ್ತ ಮುನ್ನೆಚ್ಚರಿಕೆ, ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.

ರಾಮೇಶ್ವರಂ ಕೆಫೆ
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಟ್ಟೆ ಬದಲಿಸಿ ಬಸ್ ಹತ್ತಿದ ಬಾಂಬರ್, ತುಮಕೂರು ಮೂಲಕ ಬಳ್ಳಾರಿಗೆ ಪ್ರಯಾಣ

ಕೆಫೆಯ ಪ್ರವೇಶ ದ್ವಾರದ ಬಳಿ 2 ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ. ಶನಿವಾರದಿಂದ ಪ್ರತಿ ಗ್ರಾಹಕರನ್ನು ಹ್ಯಾಂಡ್ ಡಿಟೆಕ್ಟರ್ ಮೂಲಕ ತಪಾಸಣೆ ಮಾಡಿಯೇ ಒಳ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುತ್ತದೆ. ಈ ನಡುವೆ ಕೆಫೆ ಸುತ್ತ ಅಳವಡಿಸಿದ್ದ ಬ್ಯಾರಿಕೇಡ್​ಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ.

ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್​ 1ರಂದು ಶುಕ್ರವಾರ ಸಂಭವಿಸಿದ್ದ ಬಾಂಬ್ ಸ್ಫೋಟದಲ್ಲಿ ಐದು ಮಂದಿ ಗಾಯಗೊಂಡಿದ್ದರು. ಬಾಂಬ್ ಇಟ್ಟು ಹೋಗಿದ್ದ ವ್ಯಕ್ತಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಘಟನೆ ಸಂಬಂಧ ತನಿಖೆಯೂ ಪ್ರಗತಿಯಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com