ಸಿದ್ದರಾಮಯ್ಯ ಮತ್ತು ಡಾ ಯತೀಂದ್ರ ಸಿದ್ದರಾಮಯ್ಯ(ಸಂಗ್ರಹ ಚಿತ್ರ)
ರಾಜ್ಯ
ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರಗೆ ವರುಣಾ ಕ್ಷೇತ್ರದ ಗ್ರಾಮಸ್ಥರ ಘೇರಾವ್
ವರುಣಾ ಕ್ಷೇತ್ರದ ಮುದ್ದುಬೀರನಹುಂಡಿ ಗ್ರಾಮದ ಕುಂದು ಕೊರತೆ ಆಲಿಸಲು ಹೋಗಿದ್ದ ಡಾ ಯತೀಂದ್ರ
ವರುಣಾ(ಮೈಸೂರು): ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯಗೆ ವರುಣಾ ಕ್ಷೇತ್ರದಲ್ಲಿನ ಗ್ರಾಮಸ್ಥರು ಘೇರಾವ್ ಹಾಕಿದ ಘಟನೆ ನಡೆದಿದೆ.
ವರುಣಾ ಕ್ಷೇತ್ರದ ಮುದ್ದುಬೀರನಹುಂಡಿ ಗ್ರಾಮದ ಕುಂದು ಕೊರತೆ ಆಲಿಸಲು ಹೋದಾಗ ಜನರು ತಮ್ಮ ಸಮಸ್ಯೆಗಳನ್ನು ಸಂಕಷ್ಟಗಳನ್ನು ಹೇಳುವ ಬದಲು ಘೇರಾವ್ ಹಾಕಿ ಇಲ್ಲಿಂದ ಹೋಗಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಜನರನ್ನು ಸಮಾಧಾನಮಾಡಲು ಸಾಧ್ಯವಾಗದೆ ಪೊಲೀಸರು ಮಧ್ಯೆ ಪ್ರವೇಶಿಸಬೇಕಾಗಿ ಬಂತು.
ಕೊನೆಗೆ ಯತೀಂದ್ರ ಸಿದ್ದರಾಮಯ್ಯನವರು ಮಾತನಾಡದೆ ಅಲ್ಲಿಂದ ತೆರಳಿದ ದೃಶ್ಯ ಸೆರೆಯಾಗಿದೆ. ಮಹಿಳೆಯರು ಕೂಡ ಯತೀಂದ್ರ ವಿರುದ್ಧ ಸಿಟ್ಟು, ಆಕ್ರೋಶ ಹೊರಹಾಕಿದ್ದಾರೆ. ಸ್ಥಳದಲ್ಲಿ ನೂಕಾಟ, ತಳ್ಳಾಟ ನಡೆದು ಗೊಂದಲದ ವಾತಾವರಣ ಸೃಷ್ಟಿಯಾಯಿತು.
ತಮ್ಮ ತಂದೆ ಸಿಎಂ ಸಿದ್ದರಾಮಯ್ಯ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಇತ್ತೀಚೆಗೆ ಹಲವು ಬಾರಿ ವಿವಾದಗಳುಂಟಾಗಿತ್ತು.

