ಇತರ ಉದ್ದೇಶಗಳಿಗೆ ಕುಡಿಯುವ ನೀರಿನ ಬಳಕೆ ನಿಷೇಧ, ರಾಜ್ಯಸಭೆಗೆ ಸುಧಾಮೂರ್ತಿ: ದಿನದ ಮುಖ್ಯಾಂಶಗಳು 08-03-2024

ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ನೀರಿನ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕುಡಿಯುವ ನೀರನ್ನು ಇತರೆ ಉದ್ದೇಶಗಳಿಗೆ ಬಳಸುವುದನ್ನು ನಿಷೇಧಿಸಿದೆ.
ಇತರ ಉದ್ದೇಶಗಳಿಗೆ ಕುಡಿಯುವ ನೀರಿನ ಬಳಕೆ ನಿಷೇಧ, ರಾಜ್ಯಸಭೆಗೆ ಸುಧಾಮೂರ್ತಿ: ದಿನದ ಮುಖ್ಯಾಂಶಗಳು 08-03-2024
Updated on

ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ನೀರಿನ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕುಡಿಯುವ ನೀರನ್ನು ಇತರೆ ಉದ್ದೇಶಗಳಿಗೆ ಬಳಸುವುದನ್ನು ನಿಷೇಧಿಸಿದ್ದು, ನಿಯಮ ಉಲ್ಲಂಘನೆಯಾದರೆ 5 ಸಾವಿರ ದಂಡ ವಿಧಿಸುವುದಾಗಿ ಹೇಳಿದೆ. ಕಾರು ತೊಳೆಯಲು, ಕೈದೋಟ, ನಿರ್ಮಾಣ ಕಾಮಗಾರಿ, ನೀರಿನ ಕಾರಂಜಿ ಮತ್ತು ರಸ್ತೆ ನಿರ್ಮಾಣ ಮತ್ತು ನಿರ್ವಹಣೆಗೆ ಕುಡಿಯುವ ನೀರಿನ ಬಳಕೆಯನ್ನು ನಿಷೇಧಿಸಲಾಗಿದೆ. ಈ ಆದೇಶ ಉಲ್ಲಂಘಿಸಿದರೆ 5,000 ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ನಗರದಲ್ಲಿ ನೀರಿನ ಬಿಕ್ಕಟ್ಟು ತಲೆದೋರಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ ತಿಳಿಸಲಾಗಿದೆ.

ಇತರ ಉದ್ದೇಶಗಳಿಗೆ ಕುಡಿಯುವ ನೀರಿನ ಬಳಕೆ ನಿಷೇಧ, ರಾಜ್ಯಸಭೆಗೆ ಸುಧಾಮೂರ್ತಿ: ದಿನದ ಮುಖ್ಯಾಂಶಗಳು 08-03-2024
ನೀರಿನ ಸಮಸ್ಯೆ ನಿರ್ವಹಣೆಗೆ ನಿಯಂತ್ರಣ ಕೊಠಡಿ, ಸಹಾಯವಾಣಿ ಆರಂಭ; ಸ್ಥಳೀಯ ಶಾಸಕರ ನೇತೃತ್ವದಲ್ಲಿ ಕಾರ್ಯಪಡೆ ರಚನೆ: ಸಿಎಂ

ರಾಜ್ಯಸಭೆಗೆ ಇನ್ಫೋಸಿಸ್ ಪ್ರತಿಷ್ಠಾನದ ಮಾಜಿ ಮುಖ್ಯಸ್ಥೆ, ಲೇಖಕಿ ಸುಧಾ ಮೂರ್ತಿ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ವಿಶ್ವ ಮಹಿಳಾ ದಿನಾಚರಣೆಯಂದೆ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಡಬಲ್ ಅಚ್ಚರಿ ಮೂಡಿಸಿದೆ ಎಂದು ಸುಧಾ ಮೂರ್ತಿ ಪ್ರತಿಕ್ರಿಯೆ ನೀಡಿದ್ದಾರೆ. ತಾನು ಎಂದಿಗೂ ಈ ಸ್ಥಾನವನ್ನು ನಿರೀಕ್ಷೆ ಮಾಡಿರಲಿಲ್ಲ ಮತ್ತು ಕೇಂದ್ರ ಸರ್ಕಾರ ನನ್ನನ್ನು ರಾಜ್ಯಸಭೆಗೆ ಏಕೆ ನಾಮನಿರ್ದೇಶನ ಮಾಡಿದೆ ಅಂತ "ಸಂಪೂರ್ಣವಾಗಿ ಗೊತ್ತಿಲ್ಲ" ನನಗೆ ತುಂಬಾ ಸಂತೋಷವಾಗಿದೆ. ನಾನು ನಮ್ಮ ಪ್ರಧಾನಿಗೆ ಕೃತಜ್ಞಳಾಗಿದ್ದೇನೆ" ಎಂದು ಸುಧಾ ಮೂರ್ತಿ ಹೇಳಿದ್ದಾರೆ.

ಇತರ ಉದ್ದೇಶಗಳಿಗೆ ಕುಡಿಯುವ ನೀರಿನ ಬಳಕೆ ನಿಷೇಧ, ರಾಜ್ಯಸಭೆಗೆ ಸುಧಾಮೂರ್ತಿ: ದಿನದ ಮುಖ್ಯಾಂಶಗಳು 08-03-2024
ಬೆಂಗಳೂರು: ವಾರದ ಬಳಿಕ ರಾಮೇಶ್ವರಂ ಕೆಫೆ ಪುನರಾರಂಭ!

ಗೃಹ ಬಳಕೆಯ ಎಲ್​​ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಘೋಷಣೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಬದ್ಧತೆಗೆ ಪೂರಕವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ, ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ಈ ನಿರ್ಧಾರವು ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ ಎಂದು ಮೋದಿ ಹೇಳಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್ಐಎಗೆ ಮಹತ್ವದ ಸುಳಿವು ಸಿಕ್ಕಿದ್ದು, ಈ ಸಂಬಂಧ ಮತ್ತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಶಂಕಿತ ಉಗ್ರರಾದ ಬಳ್ಳಾರಿಯ ಮಿನಾಜ್ ಅಲಿಯಾಸ್ ಸುಲೇಮಾನ್ ಸೈಯದ್ ಸಮೀರ್, ಮುಂಬೈ ನ ಅನಾಸ್ ಇಕ್ಬಾಲ್ ಶೇಖ್ ಹಾಗೂ ದೆಹಲಿಯ ಶಯಾನ್ ರಹಮಾನ್ ಅಲಿಯಾಸ್ ಹುಸೈನ್ ನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ಮಧ್ಯೆ, ಬಾಂಬ್ ಸ್ಫೋಟ ಸಂಭವಿಸಿದ ವಾರದ ಬಳಿಕ ಬೆಂಗಳೂರಿನ ರಾಮೇಶ್ವರಂ ಇಂದಿನಿಂದ ಮತ್ತೆ ಕಾರ್ಯಾರಂಭ ಮಾಡಿದೆ.

ಇತರ ಉದ್ದೇಶಗಳಿಗೆ ಕುಡಿಯುವ ನೀರಿನ ಬಳಕೆ ನಿಷೇಧ, ರಾಜ್ಯಸಭೆಗೆ ಸುಧಾಮೂರ್ತಿ: ದಿನದ ಮುಖ್ಯಾಂಶಗಳು 08-03-2024
ರಂಜಾನ್ ಪ್ರಯುಕ್ತ ಮುಸ್ಲಿಂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಲೆಗಳ ಸಮಯ ಬದಲಿಸಿದ ರಾಜ್ಯ ಸರ್ಕಾರ

ರಂಜಾನ್ ಆಚರಣೆಗಾಗಿ ಮುಸ್ಲಿಂ ಶಾಲಾ ಮಕ್ಕಳ ವೇಳಾಪಟ್ಟಿ ಸಡಿಲಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಂಜಾನ್ ಆರಂಭ ದಿನದಿಂದ ಹಿಡಿದು 1 ತಿಂಗಳ ಕಾಲ ಉರ್ದು ಶಾಲಾ ಸಮಯದಲ್ಲಿ ವ್ಯತ್ಯಯ ಮಾಡಲಾಗಿದ್ದು, ಸರ್ಕಾರಿ ಅನುದಾನ ಮತ್ತು ಅನುದಾನ ರಹಿತ ಶಾಲೆಯಲ್ಲಿನ ಮುಸ್ಲಿಂ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳು ಸಂಜೆ ಅರ್ಧಗಂಟೆ ಮುಂಚಿತವಾಗಿ ತೆರಳಲು ಅನುಮತಿ ನೀಡಲಾಗಿದೆ. ರಂಜಾನ್ ತಿಂಗಳಲ್ಲಿ ಉರ್ದು ಶಾಲೆಯ ಸಮಯ ಬದಲಾವಣೆಗೆ ಕೆಲ ಮುಸ್ಲಿಂ ಶಾಸಕರು ಮನವಿ ಮಾಡಿದ್ದರು.

ಇತರ ಉದ್ದೇಶಗಳಿಗೆ ಕುಡಿಯುವ ನೀರಿನ ಬಳಕೆ ನಿಷೇಧ, ರಾಜ್ಯಸಭೆಗೆ ಸುಧಾಮೂರ್ತಿ: ದಿನದ ಮುಖ್ಯಾಂಶಗಳು 08-03-2024
ಬೆಂಗಳೂರು ನಗರದಲ್ಲಿ ನೀರಿನ ಬಿಕ್ಕಟ್ಟು: ಈ ಉದ್ದೇಶಗಳಿಗೆ ಕುಡಿಯುವ ನೀರು ಬಳಸಿದರೆ ₹5000 ದಂಡ!

ಬೆಂಗಳೂರಿನಲ್ಲಿ ಬೈಕ್‍ಟ್ಯಾಕ್ಸಿ ಸೇವೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೈಕ್‌ಗಳಂತಹ ಸಾರಿಗೆಯೇತರ ವಾಹನಗಳನ್ನು ಟ್ಯಾಕ್ಸಿಗಳಂತೆ ಮತ್ತು ಖಾಸಗಿ ಅಪ್ಲಿಕೇಶನ್‌ಗಳನ್ನು ಅವುಗಳ ಕಾರ್ಯಾಚರಣೆಗೆ ಬಳಸುವುದು ಮೋಟಾರು ವಾಹನ ಕಾಯ್ದೆಗೆ ವಿರುದ್ಧವಾಗಿದೆ ಹಾಗೂ ಬೈಕ್ ಟ್ಯಾಕ್ಸಿಗಳು ಮಹಿಳೆಯರಿಗೆ ಸುರಕ್ಷಿತವಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 36 ಖಾಸಗಿ ಸಾರಿಗೆ ಸಂಸ್ಥೆಗಳ ಬೆಂಬಲದೊಂದಿಗೆ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟವು ಕಳೆದ ವರ್ಷ ಬೆಂಗಳೂರು ಬಂದ್‌ಗೆ ಕರೆ ನೀಡಿತ್ತು, ಹೀಗಾಗಿ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದರು

ಹಾವೇರಿ ಸಾಮೂಹಿಕ ಅತ್ಯಾಚಾರ ಪ್ರಕರಣದಕ್ಕೆ ಸಂಬಂಧಿಸಿ ಕೊನೆಗೂ ಪೊಲೀಸರು 19 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಜನವರಿ 8ರಂದು ಹಾನಗಲ್ ಬಳಿ ಶಿರಸಿ ಮೂಲದ ಮುಸ್ಲಿಂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಪ್ರಕರಣ ಸಂಬಂಧ 19 ಆರೋಪಿಗಳನ್ನು ಹಾನಗಲ್ ಪೊಲೀಸರು ಬಂಧಿಸಿದ್ದರು. ಹಾನಗಲ್ ಪೊಲೀಸರು ಘಟನೆ ಸಂಬಂಧ 20 ದಿನಗಳ ಹಿಂದೆಯೇ ತನಿಖೆಯನ್ನು ಪೂರ್ಣಗೊಳಿಸಿದ್ದರು. ಆದರೆ ಎಫ್​​ಎಸ್​ಎಲ್ ವರದಿ ಹಾಗೂ ಡಿಎನ್​ಎ ವರದಿಗಳಿಗಾಗಿ ಕಾಯುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com