ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ; NIAಗೆ ಮಹತ್ವದ ಸುಳಿವು, ಮೂವರು ಶಂಕಿತರು ವಶಕ್ಕೆ!

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್ಐಎಗೆ ಮಹತ್ವದ ಸುಳಿವು ಸಿಕ್ಕಿದೆ. ಈ ಸಂಬಂಧ ಮತ್ತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ಎನ್ಐಎ
ಎನ್ಐಎ
Updated on

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್ಐಎಗೆ ಮಹತ್ವದ ಸುಳಿವು ಸಿಕ್ಕಿದೆ. ಈ ಸಂಬಂಧ ಮತ್ತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ಪ್ರಕರಣ ಸಂಬಂಧ ಶಂಕಿತ ಉಗ್ರ ಬಳ್ಳಾರಿಯ ಮಿನಾಜ್ ಅಲಿಯಾಸ್ ಸುಲೇಮಾನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಇದೇ ವೇಳೆ ನ್ಯಾಯಾಲಯದ ಆದೇಶದ ಮೇರೆಗೆ ಬಳ್ಳಾರಿಯ ಸೈಯದ್ ಸಮೀರ್, ಮುಂಬೈ ನ ಅನಾಸ್ ಇಕ್ಬಾಲ್ ಶೇಖ್ ಹಾಗೂ ದೆಹಲಿಯ ಶಯಾನ್ ರಹಮಾನ್ ಅಲಿಯಾಸ್ ಹುಸೈನ್ ನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಎನ್ಐಎ
ಬೆಂಗಳೂರು: ವಾರದ ಬಳಿಕ ರಾಮೇಶ್ವರಂ ಕೆಫೆ ಪುನರಾರಂಭ!

ವಶಕ್ಕೆ ಪಡೆದಿರುವ ಶಂಕಿತ ಉಗ್ರರು ISIS ಜೊತೆ ನಂಟು ಹೊಂದಿದ್ದಾರೆ. ದೇಶದಲ್ಲಿ ವಿದ್ವಂಸಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆಹಾಕಿದ್ದ ಎನ್ಐಎ ಅಧಿಕಾರಿಗಳು 2023ರ ಡಿಸೆಂಬರ್ 18ರಂದು ಮಿನಾಜ್ ಹಾಗೂ ಇತರರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.

ಸದ್ಯ ವಶಕ್ಕೆ ಪಡೆದಿರುವ ಶಂಕಿತರನ್ನು ಬಳ್ಳಾರಿಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com