ಟಿಕೆಟ್ ಕೊಡುವ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ, ವದಂತಿಗಳಿಗೆ ಕಿವಿಗೊಡಬೇಡಿ: ಕಾರ್ಯಕರ್ತರಿಗೆ ಪ್ರಹ್ಲಾದ್ ಜೋಶಿ

ಟಿಕೆಟ್ ಕೊಡುವ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ, ಊಹಾಪೋಹಗಳ ಬಗ್ಗೆ ಕವಿಗೊಡಬೇಡಿ ಎಂದು ಪಕ್ಷದ ಕಾರ್ಯಕರ್ತರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ
ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ
Updated on

ಹುಬ್ಬಳ್ಳಿ: ಟಿಕೆಟ್ ಕೊಡುವ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ, ಊಹಾಪೋಹಗಳ ಬಗ್ಗೆ ಕವಿಗೊಡಬೇಡಿ ಎಂದು ಪಕ್ಷದ ಕಾರ್ಯಕರ್ತರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಎಲ್ಲಿಂದ ಚುನಾವಣೆಗೆ ಸ್ಪರ್ಧಿಸಬೇಕು ಎಂಬುದರ ಕುರಿತು ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಪಕ್ಷದ ಕಾರ್ಯಕರ್ತರು ಊಹಾಪೋಹಗಳಿಗೆ ಕಿವಿಕೊಡಬಾರದು. ವದಂತಿಗಳ ಹಬ್ಬಿಸಿ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವುದು ಕೆಲವರ ಕೆಲಸವಾಗಿದೆ ಎಂದು ಹೇಳಿದರು.

ಹಳಬರಿಗೆ ಟಿಕೆಟ್ ಕೊಡಲ್ಲ, ಹೊಸಬರಿಗೆ ಅವಕಾಶ ಕೊಡ್ತಾರೆ ಅನ್ನೋದು ಊಹಾಪೋಹವಷ್ಟೆ. ಎಂಟು ಬಾರಿ ಗೆದ್ದವರಿಗೂ ಅವಕಾಶ ಕೊಟ್ಟಿದ್ದೇವೆ . ಪಾಕಿಸ್ತಾನ್ ಜಿಂದಾಬಾದ್ ಘೋಷಣೆ‌ ಕೂಗಿದವನು ಕಾಂಗ್ರೆಸ್ ಪಾರ್ಟಿಗೆ ಹತ್ತಿರ ಇದ್ದಾನೆ. ನಾಸಿರ್ ಹುಸೇನ್ ಕನಿಷ್ಠ ಪಕ್ಷ ಕ್ಷಮೆ‌ ಕೇಳಬೇಕು, ಕಾಂಗ್ರೆಸ್‌ನವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ
ಕರ್ನಾಟಕವನ್ನು ಭಯೋತ್ಪಾದಕರ ತಾಣವನ್ನಾಗಿ ಮಾಡಬೇಡಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಘೋಷಣೆ ಕೂಗಿದ ಆರೋಪಿ‌ ರಾಹುಲ್ ಗಾಂಧಿ, ಸಿದ್ದರಾಮಯ್ಯ ಜೊತೆ ಫೊಟೋದಲ್ಲಿ ಇದ್ದಾನೆ. ಒಳಗೊಳಗೆ ಪುಷ್ಟೀಕರಣಕ್ಕೆ ತಲೆ‌ ಮೇಲೆ ಕೂರಿಸಿಕೊಂಡು, ಅಪ್ಪಿ ಮುದ್ದಾಡುತ್ತಾರೆ. ಆರೋಪಿಗೆ ನಾಸಿರ್ ಹುಸೇನ್ ಆಶೀರ್ವಾದ ಇದೆ. ನಾಸಿರ್‌ ಹುಸೇನ್ ಬೇಷರತ್ ಕ್ಷಮೆ ಕೇಳಬೇಕು. ಅಲ್ಲಿಯವರೆಗೆ ಪ್ರಮಾಣ ವಚನ ಸ್ವೀಕರಿಸಬಾರದು ಎಂದು ಹೇಳಿದರು.

ಸುಧಾಮೂರ್ತಿಗೆ ರಾಜ್ಯಸಭೆಗೆ ನಾಮನಿರ್ದೇಶನ ವಿಚಾರ‌ಕ್ಕೆ ಪ್ರತಿಕ್ರಿಯೆ ನೀಡಿ, ಹುಬ್ಬಳ್ಳಿಯ ಹೆಮ್ಮೆಯ ಪುತ್ರಿ ಸುಧಾಮೂರ್ತಿ ಅವರನ್ನ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿರುವುದು ಸಂತಸದ ವಿಷಯ. ಅವರು ಒಳ್ಳೆಯ ಲೇಖಕರಿದ್ದಾರೆ. ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಮಹಿಳಾ ದಿನಾಚರಣೆಯಂದೇ ಅವರನ್ನ ರಾಜ್ಯಸಭೆಗೆ ನಾಮನಿರ್ದೇಶನ‌ ಮಾಡಿರುವುದು ಸಂತಸ ತಂದಿದೆ. ಸುಧಾಮೂರ್ತಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪ್ರಧಾನಿ ಮೋದಿಯವರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com