ಟಿಕೆಟ್ ತಪ್ಪಿಸಲು ನನ್ನ ವಿರುದ್ಧ ಪಿತೂರಿ ನಡೆಯುತ್ತಿರುವುದು ನಿಜ ಆದರೆ, ಯಶಸ್ವಿಯಾಗಲ್ಲ: ಶೋಭಾ ಕರಂದ್ಲಾಜೆ

ಟಿಕೆಟ್ ತಪ್ಪಿಸಲು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ನನ್ನ ವಿರುದ್ಧ ಪಿತೂರಿ ನಡೆಯುತ್ತಿರುವುದು ನಿಜ. ಆದರೆ, ಇದು ಯಶಸ್ವಿಯಾಗುವುದಿಲ್ಲ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ಹೇಳಿದ್ದಾರೆ.
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ

ಬೆಳಗಾವಿ: ಟಿಕೆಟ್ ತಪ್ಪಿಸಲು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ನನ್ನ ವಿರುದ್ಧ ಪಿತೂರಿ ನಡೆಯುತ್ತಿರುವುದು ನಿಜ. ಆದರೆ, ಇದು ಯಶಸ್ವಿಯಾಗುವುದಿಲ್ಲ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವಾಗ ವಿರೋಧ ವ್ಯಕ್ತವಾಗುತ್ತದೆಯೋ ಆಗಲೇ ನಮ್ಮ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾರೆ. ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ‌ಕೆಲಸ ಮಾಡುತ್ತಿದ್ದಾರೆ,‌ ಪಕ್ಷದ ಕೆಲಸ ಮಾಡುತ್ತಾರೆ ಎಂದಷ್ಟೇ ‌ಹೇಳುತ್ತಿದ್ದರು ಎಂದು ಹೇಳಿದರು.

ಶೋಭಾರನ್ನು ಏಕೆ ವಿರೋಧ ಮಾಡುತ್ತಿದ್ದಾರೆ ಎಂದು ಪಕ್ಷದ ನಾಯಕರೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸತ್ಯ ಸೋಧನೆ ವೇಳೆ ಸತ್ಯ ತಿಳಿಯಲಿದೆ, ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಏನೆಂಬುದು ಗೊತ್ತಾಗುತ್ತವೆ. ಚುನಾವಣೆ ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಅನಾನುಕೂಲವಲ್ಲ. ಅದಕ್ಕಾಗಿ ನಮ್ಮ ಹೈಕಮಾಂಡ್‌ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಶೋಭಾ ಕರಂದ್ಲಾಜೆ
ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಟೀಕೆ

ಪಕ್ಷದ ಕೆಲಸ ಕೊಡಲಿ, ಸರ್ಕಾರದ ಕೆಲಸ ಕೊಡಲಿ ಪ್ರಮಾಣಿಕ ಸೇವೆ ಸಲ್ಲಿಸಿದ ಸಂತೃಪ್ತಿ ನನಗಿದೆ. ಇದು ಎಲ್ಲರಿಗೂ ಅನ್ವಯ ಆಗುತ್ತದೆ. ಕೆಲಸ ಮಾಡಿದವರಿಗೆ ಅವಕಾಶ ಸಿಕ್ಕಿಯೇ ಸಿಗುತ್ತದೆ. ಜಾತಿ ಸಮೀಕರಣ ಕಾರಣಕ್ಕೆ ಕೆಲ ಸಂದರ್ಭದಲ್ಲಿ ಇದು ವ್ಯತ್ಯಾಸ ಆಗಬಹುದಷ್ಟೇ. ನಮ್ಮ ಶ್ರಮ, ನಮ್ಮ ಕೆಲಸವನ್ನು ಹೈಕಮಾಂಡ್ ಗುರುತಿಸುತ್ತೆ ಎಂಬುದಕ್ಕೆ ನಾನೇ ಉದಾಹರಣೆ. ನನ್ನ ವಿರುದ್ಧ ನಡೆಯುತ್ತಿರುವ ಪಿತೂರಿಯಿಂದ ನನಗೆ ಅನುಕೂಲ ‌ಆಗಲಿದೆ. ಪಿತೂರಿ ಮಾಡಿದಾಗಲೇ ಹೈಕಮಾಂಡ್‌ ನಮ್ಮ ಬಗ್ಗೆ ಗಮನ ಕೊಡುತ್ತದೆ. ವಿರೋಧ ಏಕೆ ಮಾಡ್ತಿದ್ದಾರೆ ಎಂಬುದರ ವರದಿ ತರಿಸಿಕೊಳ್ಳುತ್ತಾರೆ, ಆಗ ಸತ್ಯ ಗೊತ್ತಾಗುತ್ತದೆ. ನನ್ನ ಕ್ಷೇತ್ರದಲ್ಲಿ ನಾನು ಸಾಕಷ್ಟು ಕೆಲಸ ಮಾಡಿದ್ದೇನೆ,‌ ಅಭಿವೃದ್ಧಿ ಆಧಾರದ ಮೇಲೆ‌ ಮತ‌ ಕೇಳುತ್ತೇನೆ ಎಂದು ತಿಳಿಸಿದರು.

ಟಿಕೆಟ್ ಕೊಡುವ ಬಗ್ಗೆ ನಿರ್ಧರಿಸಲು ಪ್ರಧಾನಿ ನರೇಂದ್ರ ಮೋದಿ, ನಮ್ಮ ಕೇಂದ್ರ ಚುನಾವಣೆ ಮಂಡಳಿ ಇದೆ. ಯಾರಿಗೆ ಎಲ್ಲಿಂದ ಟಿಕೆಟ್ ಕೊಡಬೇಕು, ಏಕೆ ಕೊಡಬೇಕು, ಅದರಿಂದಾಗುವ ಲಾಭ ಏನು ಎಂಬುದರ ಆಧಾರದ ಮೇಲೆ ಖಂಡಿತವಾಗಿ ನಮ್ಮ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಯಾರಿಗೆಗೆ ಟಿಕೆಟ್ ಸಿಗುತ್ತೆ, ಸಿಗಲ್ಲ ಎಂಬುದು ನನಗೆ ಗೊತ್ತಿಲ್ಲ. ಈಗ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತದೆ ಎಂಬ ಸಂಗತಿ ಮಾಧ್ಯಮಗಳಲ್ಲಿ ಬರುತ್ತಿದೆ. ಆದರೆ, ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪುತ್ತದೆ ಎಂದು ಪ್ರಧಾನಿಯೂ ಹೇಳಿಲ್ಲ, ನಡ್ಡಾ ಅವರೂ ಹೇಳಿಲ್ಲ, ಶಾ ಕೂಡ ಹೇಳಿಲ್ಲ. ಇವೆಲ್ಲ ಊಹಾಪೋಹ ಎನಿಸುತ್ತದೆ, ಮೂರ್ನಾಲ್ಕು ದಿನಗಳಲ್ಲಿ ಪಟ್ಟಿ ಬಿಡುಗಡೆ ಆಗಲಿದೆ, ಆಗ ಸತ್ಯ ಹೊರಬರುತ್ತದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com