ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು: ಮಾರ್ಚ್ 11 ರಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಕರ್ನಾಟಕ ಬಿಜೆಪಿ ಸೋಮವಾರ (ಮಾರ್ಚ್ 11) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಕರ್ನಾಟಕ ಬಿಜೆಪಿ ಸೋಮವಾರ (ಮಾರ್ಚ್ 11) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದೆ.

ನೀರಿನ ಸಮಸ್ಯೆಯನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರದ ಅಸಮರ್ಥತೆಯಿಂದಾಗಿ ಈಗ ಅನೇಕ ಎಂಎನ್‌ಸಿಗಳು ಬೆಂಗಳೂರಿನಿಂದ ಹೊರಹೋಗಲು ಬಯಸುತ್ತಿವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಈ ಸರ್ಕಾರ ಯಾವತ್ತೂ ನೈಜ ಸಮಸ್ಯೆಗಳತ್ತ ಗಮನಹರಿಸಿಲ್ಲ ಮತ್ತು ಪ್ರಮುಖ ವಿಷಯಗಳನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸಿದೆ. ನಗರದ ಹಲವು ಅಪಾರ್ಟ್‌ಮೆಂಟ್‌ಗಳಲ್ಲಿ ನಿವಾಸಿಗಳಿಗೆ ಕುಡಿಯುವ ನೀರಿಲ್ಲ. ಪರಿಸ್ಥಿತಿ ಮುಂದುವರಿದರೆ ಎಂಎನ್‌ಸಿಗಳು ಇತರ ಸ್ಥಳಗಳಿಗೆ ತೆರಳಲು ಯೋಜಿಸುತ್ತಿವೆ. ಮಾರ್ಚ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ ನಮ್ಮ ಬೇಡಿಕೆಗಳನ್ನು ಘೋಷಿಸುತ್ತೇವೆ. ಬೇಡಿಕೆ ಈಡೇರದಿದ್ದರೆ, ನಾವು ಮುಂದಿನ ಕ್ರಮವನ್ನು ಪ್ರಕಟಿಸುತ್ತೇವೆ' ಎಂದರು.

ಪ್ರಾತಿನಿಧಿಕ ಚಿತ್ರ
ಬೆಂಗಳೂರು ನಗರದಲ್ಲಿ ನೀರಿನ ಬಿಕ್ಕಟ್ಟು: ಈ ಉದ್ದೇಶಗಳಿಗೆ ಕುಡಿಯುವ ನೀರು ಬಳಸಿದರೆ ₹5000 ದಂಡ!

ಇಂತಹ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಮೂರು ತಿಂಗಳ ಭೀಕರ ಬರಗಾಲದ ನಂತರವೇ ರಾಜ್ಯವು ಬರಪೀಡಿತ ಎಂದು ಸರ್ಕಾರ ಘೋಷಿಸಿತು. ಅವರು ಉದ್ದೇಶಪೂರ್ವಕವಾಗಿ ಇದನ್ನು ಮಾಡಿದರು. ಇದರಿಂದ ಬರ ಪರಿಹಾರ ಪಾವತಿಯಾಗಲಿಲ್ಲ. ಕುಡಿಯುವ ನೀರು ಸಿಗದಿದ್ದಾಗ ಖಾತರಿ ಯೋಜನೆಗಳ ಪ್ರಯೋಜನವೇನು? ಎಂದು ಪ್ರಶ್ನಿಸಿದರು.

ಈ ಹಿಂದೆ ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್‌ಎಸ್‌ಬಿ ಅಧಿಕಾರಿಗಳೊಂದಿಗೆ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಶೇಷ ಸಭೆ ನಡೆಸಿದ್ದು, ಬೆಂಗಳೂರಿನಲ್ಲಿ ನೀರಿನ ಕೊರತೆಯನ್ನು ಎದುರಿಸಲು ಸೂಕ್ತ ಯೋಜನೆ ರೂಪಿಸಬೇಕು. ಬೇಸಿಗೆ ಸಮೀಪಿಸುತ್ತಿದ್ದಂತೆ, ಈ ಬಿಕ್ಕಟ್ಟು ಇನ್ನಷ್ಟು ಹದಗೆಟ್ಟರೆ ಪರಿಸ್ಥಿತಿಯನ್ನು ನಿಭಾಯಿಸಲು ಸಿದ್ಧವಾಗುವಂತೆ ನಿರ್ದೇಶಿಸಿದರು.

ಪ್ರಾತಿನಿಧಿಕ ಚಿತ್ರ
ಕರ್ನಾಟಕದ ಅರ್ಧಕ್ಕಿಂತ ಹೆಚ್ಚು ಜಿಲ್ಲೆಗಳಲ್ಲಿ ನೀರಿನ ಬಿಕ್ಕಟ್ಟು; ತುರ್ತು ಯೋಜನೆ ರೂಪಿಸಲು ಸರ್ಕಾರ ಸೂಚನೆ

ಈಮಧ್ಯೆ, ಶನಿವಾರ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ. ವಿ ರಾಮ್ ಪ್ರಸಾದ್ ಮನೋಹರ್, ಬರದಿಂದ ನಗರದಲ್ಲಿ ನೀರಿನ ಕೊರತೆ ಉಂಟಾಗಿದೆ ಮತ್ತು ಇದು ಮಾನವ ನಿರ್ಮಿತ ಅನಾಹುತವಲ್ಲ. ಕಡಿಮೆ ಮಳೆ ಮತ್ತು ಬರಗಾಲದಂತಹ ಪರಿಸ್ಥಿತಿಯಿಂದಾಗಿ ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ನೀರಿನ ಕೊರತೆಯಿದೆ. ಇದು ನೈಸರ್ಗಿಕ ವಿಪತ್ತು. ಬೆಂಗಳೂರಿನ ಬ್ರ್ಯಾಂಡ್ ಇಮೇಜ್ ಅಥವಾ ಬಿಡಬ್ಲ್ಯುಎಸ್ಎಸ್‌ಬಿಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com