ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿಸಿಎಂ ಡಿಕೆ.ಶಿವಕುಮಾರ್ ವಿರುದ್ಧ ಲೋಕಾಯುಕ್ತ ತನಿಖೆ ಆರಂಭ

ಅಕ್ರಮ ಆಸ್ತಿ ಗಳಿಕೆ ಪ್ರಕರಕ್ಕೆ ಸಂಬಂಧಿದಂತೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ತನಿಖೆ ಆರಂಭಿಸಿದೆ.
ಡಿಸಿಎಂ ಡಿಕೆ.ಶಿವಕುಮಾರ್
ಡಿಸಿಎಂ ಡಿಕೆ.ಶಿವಕುಮಾರ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಕ್ಕೆ ಸಂಬಂಧಿದಂತೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ತನಿಖೆ ಆರಂಭಿಸಿದೆ.

74.93 ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆದರೆ, ಪ್ರಕರಣ ಸಂಬಂಧ ವಿವರಗಳನ್ನು ವರ್ಗಾಯಿಸುವಂತೆ ಕೇಂದ್ರ ತನಿಖಾ ದಳ (ಸಿಬಿಐ)ಕ್ಕೆ ಮಾಡಿರುವ ಮನವಿಗೆ ಯಾವುದೇ ಪ್ರತಿಕ್ರಿಯೆಗಳು ಬಂದಿಲ್ಲ ಎಂದು ಮೂಲಗಳು ತಿಳಿಸಿವೆ.

ಶಿವಕುಮಾರ್ ಅವರ ಆಸ್ತಿ, ಆದಾಯ ಮತ್ತು ವೆಚ್ಚದ ವಿವರಗಳನ್ನು ಕೋರಿ ಲೋಕಾಯುಕ್ತ ತನಿಖಾಧಿಕಾರಿಗಳು ವಿವಿಧ ತನಿಖಾ ಸಂಸ್ಥಗೆಳಿಗ ನೋಟಿಸ್ ಜಾರಿ ಮಾಡಿದೆ.

ಡಿಸಿಎಂ ಡಿಕೆ.ಶಿವಕುಮಾರ್
ತೊಂದರೆ ಕೊಟ್ಟಷ್ಟೂ ರಾಜಕೀಯವಾಗಿ ಗಟ್ಟಿಯಾಗಿ ಬೆಳೆಯುತ್ತೇನೆ: ಡಿಸಿಎಂ ಡಿಕೆ.ಶಿವಕುಮಾರ್

ಆದಾಗ್ಯೂ, ಲೋಕಾಯುಕ್ತ ಅಧಿಕಾರಿಗಳು, ನೋಟಿಸ್ ನೀಡಿದ ನಿರ್ದಿಷ್ಟ ತನಿಖಾ ಸಂಸ್ಥೆಗಳ ಹೆಸರು ಹಾಗೂ ವಿವರಗಳನ್ನು ನೀಡಲು ನಿರಾಕರಿಸಿದ್ದಾರೆ.

ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾದ ಕೂಡಲೇ ಸಿಬಿಐಗೆ ಪತ್ರ ಬರೆಯಲಾಗಿದೆ. ತನಿಖೆಗೆ ಅಗತ್ಯವಾದ ಪ್ರಾಥಮಿಕ ದಾಖಲೆಗಳ ನೀಡುವಂತೆ ತಿಳಿಸಲಾಗಿದೆ. ಆದರೆ, ಸಿಬಿಐ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com