ಪಾಕ್ ಪರ ಘೋಷಣೆ ಕೂಗುವವರ ಗುಂಡಿಕ್ಕಿ ಕೊಲ್ಲಬೇಕು: ಸಚಿವ ರಾಜಣ್ಣ

ಪಾಕಿಸ್ತಾನದ ಪರ ಘೋಷಣೆ ಕೂಗುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಹೋದ್ಯೋಗಿ ಕೆ.ಎನ್.ರಾಜಣ್ಣ ಅವರು ಶನಿವಾರ ಹೇಳಿದರು.
ಸಚಿವ ರಾಜಣ್ಣ
ಸಚಿವ ರಾಜಣ್ಣ

ತುಮಕೂರು: ಪಾಕಿಸ್ತಾನದ ಪರ ಘೋಷಣೆ ಕೂಗುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಹೋದ್ಯೋಗಿ ಕೆ.ಎನ್.ರಾಜಣ್ಣ ಅವರು ಶನಿವಾರ ಹೇಳಿದರು.

ಇತ್ತೀಚೆಗೆ ವಿಧಾನಸೌಧದಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಕಾಂಗ್ರೆಸ್‌ನ ಸೈಯದ್ ನಸೀರ್ ಹುಸೇನ್ ಬೆಂಬಲಿಗರಿಂದ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಸಹಕಾರ ಸಚಿವ ರಾಜಣ್ಣ ಉತ್ತರಿಸಿದರು.

ಸಮಾಜ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿ ಕಾನೂನು ಸುವ್ಯವಸ್ಥೆ ಜಾರಿಯಾಗಬೇಕು ಎಂದು ಸಲಹೆ ನೀಡಿದರು. ಉತ್ತರ ಪ್ರದೇಶದಲ್ಲಿ ಗಲಭೆ ಪ್ರಕರಣಗಳಲ್ಲಿ ಆರೋಪಿಗಳ ಮನೆಗಳು ಮತ್ತು ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ, ಆದರೆ, ಹಾಗೆ ಮಾಡಲು ಕಾನೂನು ಅನುಮತಿ ಇಲ್ಲ. ಆದರೆ, ಕಾಯ್ದೆಯು ಯುಪಿಯಲ್ಲಿ ಗಲಭೆ ಮತ್ತು ಇತರ ಸಮಾಜ ವಿರೋಧಿ ಚಟುವಟಿಕೆಗಳನ್ನು ತಡೆಯಲು ಸಹಾಯ ಮಾಡಿದೆ ಎಂದು ಹೇಳಿದರು.

ಸಚಿವ ರಾಜಣ್ಣ
ತುಮಕೂರು ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ನ ಮುದ್ದ ಹನುಮೇಗೌಡರ ವಿರುದ್ಧ ಸೋಮಣ್ಣ ಸ್ಪರ್ಧೆ; ಸಚಿವ ಕೆ.ಎನ್ ರಾಜಣ್ಣ

ಇದೇ ವೇಳೆ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಘಟನೆಯಿಂದ ಕಾಂಗ್ರೆಸ್ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗುವುದಿಲ್ಲ ಎಂದು ಸಮರ್ಥಿಸಿಕೊಂಡರು

ಸಮಾಜ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕರ್ನಾಟಕ ಪೊಲೀಸರು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಾರೆಂಬ ವಿಶ್ವಾಸವಿದೆ. ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಸಮಾಜದಲ್ಲಿ ಶಾಂತಿ ನೆಲೆಸಬೇಕು. ಒಂದು ವೇಳೆ ಇಲ್ಲಿ ತೊಂದರೆಯಾದರೆ ಇದು ರಾಜ್ಯದ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತದೆ ಎಂದರು.

ಬಳಿಕ ಚುನಾವಣೆ ಕುರಿತು ಮಾತಾಡಿ ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇತ್ತೀಚೆಗೆ ಭವಿಷ್ಯ ನುಡಿದಿದ್ದರೂ, ಪಕ್ಷವು ಸುಮಾರು 16 ಸ್ಥಾನಗಳನ್ನು ಗೆಲ್ಲಬಹುದು ಎಂದು ರಾಜಣ್ಣ ಹೇಳಿದರು.

ನಂತರ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಂಸದ ದಿವಂಗತ ಜಿ ಪುಟ್ಟಸ್ವಾಮಿಗೌಡ ಅವರ ಮೊಮ್ಮಗರಾಗಿರುವ ಶ್ರೇಯಸ್‌ಗೆ ಜಿಲ್ಲೆಯ ಎಲ್ಲ ಸಮುದಾಯಗಳ ಬೆಂಬಲವಿದೆ. ತುಮಕೂರಿನಲ್ಲಿ ಎಸ್‌ಪಿ ಮುದ್ದಹನುಮೇಗೌಡ ಗೆಲ್ಲುತ್ತಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com