ಮೈಸೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ಕುಡಿಯುವ ನೀರು ಪೂರೈಕೆಗಾಗಿ ಕೃಷ್ಣರಾಜ ಸಾಗರ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ.
ಬೆಂಗಳೂರು ನಗರದ ಹಲವಾರು ಬೋರ್‌ವೆಲ್‌ಗಳು ಬತ್ತಿ ಹೋಗಿದ್ದು, ತೀವ್ರ ನೀರಿನ ಕೊರತೆಯಿಂದ ತತ್ತರಿಸುತ್ತಿದೆ. ಇದರ ನಡುವಲ್ಲೇ ನಗರದ 1.3 ಕೋಟಿ ನಿವಾಸಿಗಳ ಬೇಡಿಕೆಯನ್ನು ಪೂರೈಸಲು BWSSB ಮೇಲೆ ಒತ್ತಡವಿದೆ.
ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ಮಾಡಲುವ ಸಲುವಾಗಿ ಜಲಾಶಯದಿಂದ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಳ್ಳಲಾಗಿತ್ತು. ಮನವಿ ಮೇರೆಗೆ ಅಧಿಕಾರಿಗಳು ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದಾರೆ. ಆದರೆ, ರೈತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆಂದು ಬಿಡಬ್ಲ್ಯೂಎಸ್‌ಎಸ್‌ಬಿ ಅಧಿಕಾರಿಗಳು ಹೇಳಿದ್ದಾರೆ.
ನೀರಾವರಿ ಇಲಾಖೆಯ ಅಧಿಕಾರಿಗಳು ಶನಿವಾರ ಜಲಾಶಯದ ನಾಲ್ಕು ಕ್ರೆಸ್ಟ್ ಗೇಟ್‌ಗಳಿಂದ 3,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಳವಳ್ಳಿ ಸಮೀಪದ ತೊರೆಕಾಡನಹಳ್ಳಿ ನದಿಗೆ ಇನ್ನೂ 2 ಸಾವಿರ ಕ್ಯೂಸೆಕ್ ನೀರು ಬಿಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ನಗರವು ದಿನಕ್ಕೆ ಸುಮಾರು 1,450 ಮಿಲಿಯನ್ ಲೀಟರ್ (MLD) ನೀರಿನ ಅಗತ್ಯವಿದ್ದು, 1,680 MLD ನೀರಿನ ಕೊರತೆಯನ್ನು ಎದುರಾಗಿದೆ.
ನದಿಗಳ ಸಾಮರ್ಥ್ಯ ಹೆಚ್ಚಿಸಲು ಕೆಆರ್‌ಎಸ್‌ನಿಂದ ನೀರು ಬಿಡುಗಡೆ ಮಾಡಲಾಗಿದ್ದು, ಇದರಿಂದ ನೀರಿನ ಪಂಪ್‌ಗೆ ತೊಂದರೆಯಾಗುವುದಿಲ್ಲ ಎಂದು ಕೆಆರ್‌ಎಸ್ ಮುಖ್ಯ ಎಂಜಿನಿಯರ್ (ದಕ್ಷಿಣ) ವೆಂಕಟೇಶ್ ಹೇಳಿದ್ದಾರೆ.
Advertisement