ವಂದೇ ಭಾರತ್ ಎಕ್ಸ್‌ಪ್ರೆಸ್ ಸ್ಲೀಪರ್ ಕೋಚ್ ನಿರ್ವಹಣೆಗೆ ಥಣಿಸಂದ್ರದಲ್ಲಿ 270 ಕೋಟಿ ರೂ. ವೆಚ್ಚದಲ್ಲಿ ಹೊಸ ಡಿಪೋ ನಿರ್ಮಾಣ

ಬೆಂಗಳೂರು ರೈಲ್ವೆ ವಿಭಾಗವು ವಂದೇ ಭಾರತ್‌ನ ಸ್ಲೀಪರ್ ಕೋಚ್‌ಗಳನ್ನು ನಿರ್ವಹಿಸಲು ಥಣಿಸಂದ್ರ ರೈಲು ನಿಲ್ದಾಣದ ಬಳಿ 270 ಕೋಟಿ ರೂ. ವೆಚ್ಚದಲ್ಲಿ ಹೊಸ ಡಿಪೋ-ಕಮ್-ವರ್ಕ್‌ಶಾಪ್ ಅನ್ನು ನಿರ್ಮಿಸಲಿದೆ ಎಂದು ಬೆಂಗಳೂರು ರೈಲ್ವೆ ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪರೀಕ್ಷಿತ್ ಮೋಹನ್‌ಪುರಿ ಪ್ರಕಟಿಸಿದ್ದಾರೆ.
ವಂದೇ ಭಾರತ್ ಎಕ್ಸ್‌ಪ್ರೆಸ್
ವಂದೇ ಭಾರತ್ ಎಕ್ಸ್‌ಪ್ರೆಸ್

ಬೆಂಗಳೂರು: ಬೆಂಗಳೂರು ರೈಲ್ವೆ ವಿಭಾಗವು ವಂದೇ ಭಾರತ್‌ನ ಸ್ಲೀಪರ್ ಕೋಚ್‌ಗಳನ್ನು ನಿರ್ವಹಿಸಲು ಥಣಿಸಂದ್ರ ರೈಲು ನಿಲ್ದಾಣದ ಬಳಿ 270 ಕೋಟಿ ರೂ. ವೆಚ್ಚದಲ್ಲಿ ಹೊಸ ಡಿಪೋ-ಕಮ್-ವರ್ಕ್‌ಶಾಪ್ ಅನ್ನು ನಿರ್ಮಿಸಲಿದೆ ಎಂದು ಬೆಂಗಳೂರು ರೈಲ್ವೆ ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪರೀಕ್ಷಿತ್ ಮೋಹನ್‌ಪುರಿ ಪ್ರಕಟಿಸಿದ್ದಾರೆ.

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ನಿರ್ವಹಿಸುವ ಸೌಲಭ್ಯದಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಬೋಗಿಗಳನ್ನು ಪರೀಕ್ಷಿಸಿದರು.

ಭಾನುವಾರ ಸಂಜೆ ಡಿಆರ್‌ಎಂ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮೋಹನ್‌ಪುರಿ, 'ರೈಲ್ವೆ ಮಂಡಳಿಯು ಈಗಾಗಲೇ ಇದಕ್ಕೆ ಅನುಮೋದನೆ ನೀಡಿದೆ. ಈಗ ಕಾರ್ಯಾಗಾರಕ್ಕಾಗಿ ಸಮೀಕ್ಷೆ ನಡೆಸುತ್ತಿದ್ದೇವೆ. ಈ ವರ್ಷದ ಅಂತ್ಯದ ವೇಳೆಗೆ ಬೋಗಿಗಳು ನಿರ್ವಹಣೆಗಾಗಿ ಇಲ್ಲಿಗೆ ಬರುತ್ತವೆ ಎಂದು ನಾವು ನಿರೀಕ್ಷಿಸುತ್ತಿದ್ದೇವೆ ಮತ್ತು ಆ ಹೊತ್ತಿಗೆ ವರ್ಕ್‌ಶಾಪ್ ಅನ್ನು ಸಿದ್ಧವಾಗಿಡಲು ಬಯಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಇಲ್ಲಿ ರೈಲುಗಳ ಅಭಿವೃದ್ಧಿಗೆ ವರ್ಚುಯಲ್ ಆಗಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ' ಎಂದರು.

ವಂದೇ ಭಾರತ್ ಎಕ್ಸ್‌ಪ್ರೆಸ್
ಕೇಂದ್ರ ಬಜೆಟ್ 2024: ರೈಲ್ವೆಗೆ ದೊಡ್ಡ ಕೊಡುಗೆ, 40 ಸಾವಿರ ಸಾಮಾನ್ಯ ಬೋಗಿಗಳು ವಂದೇ ಭಾರತ್ ದರ್ಜೆಗೆ!

ಪ್ರಧಾನಿ ಮೋದಿಯವರು ಮೈಸೂರು-ಎಂಜಿಆರ್ ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ. 20663/20664) ಮತ್ತು ಕಲಬುರಗಿ-ಎಸ್‌ಎಂವಿಟಿ ಬೆಂಗಳೂರು-ಕಲಬುರಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ (ಟ್ರೇನ್ ಸಂಖ್ಯೆ 22231/22232) ಜೊತೆಗೆ ದೇಶದಾದ್ಯಂತ ಎಂಟು ವಂದೇ ಭಾರತ್ ಎಕ್ಸ್‌‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಅವರು ಹೇಳಿದರು.

ಇದರೊಂದಿಗೆ, ಪೆನುಕೊಂಡದಲ್ಲಿ ಸುಧಾರಿತ ಮೂಲಸೌಕರ್ಯದೊಂದಿಗೆ ಪುನರಾಭಿವೃದ್ಧಿಗೊಂಡಿರುವ ಗೂಡ್ಸ್ ಶೆಡ್ ಅನ್ನು ಮತ್ತು ದೊಡ್ಡಬಳ್ಳಾಪುರದ ಬಳಿಯ ಒಡ್ಡರಹಳ್ಳಿಯಲ್ಲಿ ಗತಿ ಶಕ್ತಿ ಮಲ್ಟಿಮೋಡಲ್ ಕಾರ್ಗೋ ಟರ್ಮಿನಲ್ ಅನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗುವುದು. ಈ ಟರ್ಮಿನಲ್ ರೈಲು ಸರಕು ಸಂಚಾರವನ್ನು ವೇಗಗೊಳಿಸುತ್ತದೆ. ನೇರ ಮತ್ತು ಪರೋಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಹೇಳಿದರು.

ವಂದೇ ಭಾರತ್ ಎಕ್ಸ್‌ಪ್ರೆಸ್
ಕರ್ನಾಟಕಕ್ಕೆ 2 ವಂದೇ ಭಾರತ್ ರೈಲು ಸೇರಿ 8 ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ: ಎಲ್ಲಿಗೆ ಸಂಪರ್ಕ? ಇಲ್ಲಿದೆ ಮಾಹಿತಿ...

ಬೆಂಗಳೂರು ಮತ್ತು ಬಂಗಾರಪೇಟೆ ರೈಲು ನಿಲ್ದಾಣಗಳಲ್ಲಿನ ಎರಡು ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು (ಅಗ್ಗದ ಬೆಲೆಯಲ್ಲಿ ಜೆನೆರಿಕ್ ಔಷಧಿಗಳ ಮಾರಾಟ) ಪ್ರಧಾನಿ ಔಪಚಾರಿಕವಾಗಿ ಉದ್ಘಾಟಿಸಲಿದ್ದಾರೆ.

ಹೆಚ್ಚುವರಿಯಾಗಿ, ಬೆಂಗಳೂರು ಡಿವಿಷನ್‌ನ 40 ರೈಲು ನಿಲ್ದಾಣಗಳಲ್ಲಿ 'ಒಂದು ನಿಲ್ದಾಣ ಒಂದು ಉತ್ಪನ್ನ' ಮಳಿಗೆಗಳನ್ನು ಕಾರ್ಯಾರಂಭ ಮಾಡಲಾಗುವುದು. ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಬೆಂಗಳೂರು ಕಂಟೋನ್ಮೆಂಟ್, ಕೃಷ್ಣರಾಜಪುರಂ, ಬಂಗಾರಪೇಟೆ, ಕುಪ್ಪಂ, ಹಿಂದೂಪುರ, ಸತ್ಯ ಸಾಯಿ ಪ್ರಶಾಂತಿ ನಿಲಯಂ, ಮಂಡ್ಯ ಮತ್ತು ತುಮಕೂರು ನಿಲ್ದಾಣಗಳಲ್ಲಿ ಸ್ಟಾಲ್‌ಗಳನ್ನು ತೆರೆಯಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com