ಬೆಂಗಳೂರು: ಮೆಟ್ರೋ ಹಳಿ ಮೇಲೆ ಯುವಕನ ಓಡಾಟ; ಅರ್ಧ ಗಂಟೆ ರೈಲು ಸೇವೆ ಸ್ಥಗಿತ

ಜ್ಞಾನಭಾರತಿ ಸ್ಟೇಷನ್​ನಿಂದ ಪಟ್ಟಣಗೆರೆ ಸ್ಟೇಷನ್ ನಡುವೆ ಮೆಟ್ರೋ ಹಳಿಯಲ್ಲಿ ಯುವಕ ಕಾಣಿಸಿಕೊಂಡಿದ್ದು, ನೇರಳೆ ಮಾರ್ಗದಲ್ಲಿ ಸುಮಾರು ಅರ್ಧ ಗಂಟೆ ಮೆಟ್ರೋ ಸೇವೆ ಸ್ಥಗಿತಗೊಳಿಸಲಾಗಿದೆ.
ಮೆಟ್ರೋ ರೈಲು ಸಾಂದರ್ಭಿಕ ಚಿತ್ರ
ಮೆಟ್ರೋ ರೈಲು ಸಾಂದರ್ಭಿಕ ಚಿತ್ರ

ಬೆಂಗಳೂರು: ಇತ್ತೀಚಿಗೆ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಕಿಡಿಗೇಡಿಗಳ ಹುಚ್ಚಾಟ ಹೆಚ್ಚಾಗುತ್ತಿದ್ದು, ಯುವಕನ ಹುಚ್ಚಾಟಕ್ಕೆ ಅರ್ಧ ಗಂಟೆ ಮೆಟ್ರೋ ಸೇವೆ ಸ್ಥಗಿತಗೊಂಡ ಘಟನೆ ಮಂಗಳವಾರ ನಡೆದಿದೆ.

ಇಂದು ಮಧ್ಯಾಹ್ನ ಜ್ಞಾನಭಾರತಿ ಸ್ಟೇಷನ್​ನಿಂದ ಪಟ್ಟಣಗೆರೆ ಸ್ಟೇಷನ್ ನಡುವೆ ಮೆಟ್ರೋ ಹಳಿಯಲ್ಲಿ ಯುವಕ ಕಾಣಿಸಿಕೊಂಡಿದ್ದು, ಮೈಸೂರು ರಸ್ತೆ ನಿಲ್ದಾಣದಿಂದ ಚಲ್ಲಘಟ್ಟ ನಡುವಿನ ನೇರಳೆ ಮಾರ್ಗದಲ್ಲಿ ಸುಮಾರು ಅರ್ಧ ಗಂಟೆ ಮೆಟ್ರೋ ಸೇವೆ ಸ್ಥಗಿತಗೊಳಿಸಲಾಗಿದೆ.

ಹಳಿ ಮೇಲೆ ಯುವಕನ ಓಡಾಟವನ್ನು ಗಮನಿಸಿದ ಅಧಿಕಾರಿಗಳು ಕೂಡಲೇ ಮೆಟ್ರೋ ಸೇವೆಯನ್ನು ಸ್ಥಗಿತಗೊಳಿಸಿದ್ದಾರೆ. ಮೆಟ್ರೋ ಹಳಿಗಳ ಬಳಿ ಹೈವೊಲ್ಟೇಜ್ ವಿದ್ಯುತ್ ಇರುವುದರಿಂದ ಪವರ್ ಆಫ್ ಮಾಡಿಸಿ ಮದ್ಯಾಹ್ನ 3 ಗಂಟೆಯಿಂದ 3.27 ರವರೆಗೆ ಮೆಟ್ರೋ ಸೇವೆ ಸ್ಥಗಿತಗೊಳಿಸಲಾಗಿದೆ.

ಮೆಟ್ರೋ ರೈಲು ಸಾಂದರ್ಭಿಕ ಚಿತ್ರ
ನಾಳೆ 'ನಮ್ಮ ಮೆಟ್ರೋ' ರೈಲು ಒಂದು ಗಂಟೆ ಮುಂಚಿತವಾಗಿ ಆರಂಭ!

ಘಟನೆ ನಂತರ ಯುವಕನನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಬಳಿಕ ಎಂದಿನಂತೆ ಮೆಟ್ರೋ ಸೇವೆ ಆರಂಭಗೊಂಡಿದೆ ಎಂದು ಬಿಎಂಆರ್​ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com