ರಾಜಕೀಯ ಉದ್ದೇಶದಿಂದ ಸಿಎಎ ಅಧಿಸೂಚನೆ ಹೊರಡಿಸಲಾಗಿದೆ: ಗೃಹ ಸಚಿವ ಪರಮೇಶ್ವರ್

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ರಾಜಕೀಯ ಉದ್ದೇಶದಿಂದ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಸಂಬಂಧಿಸಿ ಅಧಿಸೂಚನೆ ಹೊರಡಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಸೋಮವಾರ ಹೇಳಿದರು.
ಗೃಹ ಸಚಿವ ಪರಮೇಶ್ವರ್
ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ರಾಜಕೀಯ ಉದ್ದೇಶದಿಂದ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಸಂಬಂಧಿಸಿ ಅಧಿಸೂಚನೆ ಹೊರಡಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಸೋಮವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಗೆ ಬಹಳಷ್ಟು ಜನರು ವಿರೋಧ ವ್ಯಕ್ತಪಡಿಸಿರುವುದನ್ನು ನಾವೆಲ್ಲ ನೋಡಿದ್ದೇವೆ. ಇದರ ನಡುವೆಯೂ ಕೇಂದ್ರ ಸರ್ಕಾರ ಇಂತಹ ನಿರ್ಧಾರಕ್ಕೆ ಬಂದಿದೆ. ಇದರಲ್ಲಿ ರಾಜಕೀಯ ಉದ್ದೇಶವಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದು ಹೇಳಿದರು.

ಬಿಜೆಪಿಯವರಿಗೆ ಎಲ್ಲೋ ಒಂದು ಕಡೇ ಸೋಲಿನ ಆತಂಕ ಕಾಡುತ್ತಿದೆ. ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತರಾದರೂ ಸೋಲಿನ ಭಯವಿದೆ. ಬಿಜೆಪಿಯವರಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸ ಕಡಿಮೆಯಾದಂತಿದೆ. ಅದಕ್ಕಾಗಿ ಇಂತಹ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.

ಗೃಹ ಸಚಿವ ಪರಮೇಶ್ವರ್
ಸಿಎಎ ಜಾರಿಗೆ ಕೇಂದ್ರ ಅಧಿಸೂಚನೆ: ದೆಹಲಿಯ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಳ

ಸೈಬರ್ ಕ್ರೈಂ ವಿಷಯಗಳ ಕುರಿತು ಸಭೆ

ಸುಳ್ಳು ಸುದ್ದಿ ಹರಡುವುದು, ಫೋಟೋ ಮತ್ತು ವಿಡಿಯೋಗಳನ್ನು ತಿರುಚಿ ಬಿತ್ತರಿಸುವುದು ಸೇರಿದಂತೆ ವಿವಿಧ ರೀತಿಯ ಸೈಬರ್ ಕ್ರೈಂ ನಡೆಯುತ್ತಿವೆ. ಇಂತಹ ಪ್ರಕರಣಗಳಿಗೆ ಯಾವ ರೀತಿ ಕ್ರಮ ತೆಗದುಕೊಳ್ಳಬೇಕು ಎಂಬುದರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಂಮತ್ರಿ‌ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸೈಬರ್ ಕ್ರೈಂ ವಿಷಯಗಳ ಕುರಿತ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇನ್ನೆರಡು ದಿನಗಳಲ್ಲಿ ಸರ್ಕಾರ ಆದೇಶ‌ ಹೊರಡಿಸುತ್ತದೆ ಎಂದು ಇದೇ ವೇಳೆ ಗೃಹ ಸಚಿವರು ತಿಳಿಸಿದರು.

ಮಲ್ಟಿ ಡಿಪಾರ್ಟ್‌ಮೆಂಟ್ ಕೋರ್ಡಿನೇಷನ್ ಕಮಿಟಿಯನ್ನು ರಚಿಸಲಾಗಿದೆ. ಇದಕ್ಕೆ ಹಿರಿಯ ಪೊಲೀಸ್ ಅಧಿಕಾರಿ ಮುಖ್ಯಸ್ಥರಾಗಿರುತ್ತಾರೆ. ನೋಡಲ್ ಅಧಿಕಾರಿಯನ್ನು ನೇಮಿಸಲಾಗುತ್ತದೆ. ನೋಡಲ್ ಅಧಿಕಾರಿಗೆ ಹೆಚ್ಚಿನ ಜವಾಬ್ಧಾರಿಯನ್ನು ವಹಿಸಲಾಗುತ್ತಿದೆ. ಡಿಜಿ ಮತ್ತು ಐಜಿಪಿ ಮೂಲಕ ಸರಕಾರಕ್ಕೆ ಮಾಹಿತಿ ಕೊಡುತ್ತಾರೆ ಎಂದು ವಿವರಿಸಿದರು‌.

ಗೃಹ ಸಚಿವ ಪರಮೇಶ್ವರ್
ಚುನಾವಣೆ ಸಂದರ್ಭದಲ್ಲಿ ಪ್ರಚಾರ ಪಡೆಯಲು ಸಿಎಎ ಕಾಯ್ದೆ ಅಧಿಸೂಚನೆ ಪ್ರಕಟ: ಕಾಂಗ್ರೆಸ್

ಮೆಣಸಿನಕಾಯಿ ದರ ರೂ. 20 ಸಾವಿರದಿಂದ ರೂ. 8 ಸಾವಿರಕ್ಕೆ ಒಂದೇ ದಿನದಲ್ಲಿ ಕುಸಿತವಾಗಿದೆ. ಇದರಿಂದ ಹಾವೇರಿ ಎಪಿಎಂಸಿ ಮಾರುಕಟ್ಟೆಯಲ್ಲಿ ಗಲಾಟೆಯಾಗಿದೆ ಎಂಬುದು ಗೊತ್ತಾಗಿದೆ.‌ ಈ ರೀತಿಯ ದರ ಕುಸಿತ ಎಲ್ಲ‌‌ ಎಪಿಎಂಸಿ ಮಾರುಕಟ್ಟೆಗಳಲ್ಲಿ ಆಗಿದಿಯಾ ಅಥವಾ ಹಾವೇರಿ ಮಾರುಕಟ್ಟೆಯಲ್ಲಿ ಮಾತ್ರ ಆಗಿದಿಯಾ ಎಂಬುದರ ಬಗ್ಗೆ ಪರಿಶೀಲಿಸಲಾಗುತ್ತಿದೆ.

ಎಪಿಎಂಸಿ ಕಚೇರಿಗೆ ನುಗ್ಗಿ ಪೀಠೋಪಕರಣ ಧ್ವಂಸ ಮಾಡಲಾಗಿದೆ. ಒಂದೇ ದಿನದಲ್ಲಿ 12 ಸಾವಿರ ರೂ. ದರ‌ ಕುಸಿಯಲು ಏನು ಕಾರಣವೇನು ಎಂಬುದನ್ನು ತಿಳಿಯಲು ವರದಿ ನೀಡುವಂತೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು‌ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com