ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಕಾಂಗ್ರೆಸ್ ನಾಯಕನ ವಿರುದ್ಧ ಎಫ್‌ಐಆರ್ ದಾಖಲು

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕನ ವಿರುದ್ಧ ಪೊಲೀಸರು ಮಂಗಳವಾರ ಎಫ್‌ಐಆರ್ ದಾಖಲಿಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ಕಲ್ಲೇಶಯ್ಯ ಸಲ್ಲಿಸಿದ ದೂರಿನ ಆಧಾರದ ಮೇಲೆ ಕಾರ್ಮಿಕ ಕಲ್ಯಾಣ ಮಂಡಳಿ ಅಧ್ಯಕ್ಷ ಜಿಎಸ್ ಮಂಜುನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ನಾಯಕ ಜಿಎಸ್ ಮಂಜುನಾಥ್
ಕಾಂಗ್ರೆಸ್ ನಾಯಕ ಜಿಎಸ್ ಮಂಜುನಾಥ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕನ ವಿರುದ್ಧ ಪೊಲೀಸರು ಮಂಗಳವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಚಿತ್ರದುರ್ಗ ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ಕಲ್ಲೇಶಯ್ಯ ಸಲ್ಲಿಸಿದ ದೂರಿನ ಆಧಾರದ ಮೇಲೆ ಕಾರ್ಮಿಕ ಕಲ್ಯಾಣ ಮಂಡಳಿ ಅಧ್ಯಕ್ಷ ಜಿಎಸ್ ಮಂಜುನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ.

ಮಂಜುನಾಥ್ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿ ಕದಡುವ ಮೂಲಕ ಪ್ರಧಾನಿ ಹುದ್ದೆಗೆ ಅಪಖ್ಯಾತಿ ಬಂದಿದೆ ಎಂದು ದೂರುದಾರರು ತಿಳಿಸಿದ್ದಾರೆ.

ಪೊಲೀಸರು ಮಂಜುನಾಥ್ ವಿರುದ್ಧ ಐಪಿಸಿ ಸೆಕ್ಷನ್ 504 ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕಾಂಗ್ರೆಸ್ ನಾಯಕ ಜಿಎಸ್ ಮಂಜುನಾಥ್
ಗ್ಯಾಸ್ ಸಿಲಿಂಡರ್ ದರ ಇಳಿಕೆ ಮಾಡಿದವನಿಗೆ ನನ್ನ ಕಾಲಲ್ಲಿರುವುದನ್ನು ತೆಗೆದು ಹೊಡೆಯುತ್ತೇನೆ: ಕರ್ನಾಟಕ ಕಾಂಗ್ರೆಸ್ ನಾಯಕ

ಮಂಜುನಾಥ್ ಹೇಳಿದ್ದೇನು?

ಇತ್ತೀಚೆಗಷ್ಟೇ ಎಲ್‌ಪಿಜಿ ಬೆಲೆಯನ್ನು 100 ರೂ. ಇಳಿಸುವ ಪ್ರಧಾನಿ ಮೋದಿಯವರ ಘೋಷಣೆ ವಿರುದ್ಧ ಜಿಎಸ್ ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದ್ದು, ಮೋದಿಯವರನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಭಾಷಣದ ವಿಡಿಯೋ ಕೂಡ ವೈರಲ್ ಆಗಿತ್ತು.

ವೇದಿಕೆಯಲ್ಲಿದ್ದ ಜನರನ್ನುದ್ದೇಶಿಸಿ ಮಾತನಾಡಿದ ಮಂಜುನಾಥ್, ಚುನಾವಣೆ ಬರುತ್ತಿದ್ದು, ಗ್ಯಾಸ್ ಸಿಲಿಂಡರ್ ಬೆಲೆ 100 ರೂ. ಇಳಿಸಲಾಗಿದೆ. ಆತ ಸಿಕ್ಕರೆ ನನ್ನ ಕಾಲಲ್ಲಿ ಏನಿದೆಯೋ ಅದರಲ್ಲೇ ಹೊಡೆಯುತ್ತೇನೆ. ಈಗೇಕೆ ಇಷ್ಟೆಲ್ಲಾ ಮಾಡುತ್ತಿದ್ದೀರಿ? ನಾನು ಇದನ್ನು ಕಾಂಗ್ರೆಸ್ ನಾಯಕನಾಗಿ ಅಲ್ಲ, ಒಬ್ಬ ಸಾಮಾನ್ಯ ಮನುಷ್ಯನಾಗಿ ಕೇಳುತ್ತಿದ್ದೇನೆ. ನೀವೂ ಈ ಪ್ರಶ್ನೆಯನ್ನು ಕೇಳಬೇಕಾಗುತ್ತದೆ. ಇಲ್ಲದಿದ್ದರೆ ಯಾರೂ ನಿಮ್ಮ ಮಾತನ್ನು ಕೇಳುವುದಿಲ್ಲ. ನಾವು ಪ್ರಶ್ನೆಗಳನ್ನು ಕೇಳಲು ಕಲಿಯದಿದ್ದರೆ, ನಾವು ಸಂಪೂರ್ಣವಾಗಿ ಮತ ಚಲಾಯಿಸಲು ಅರ್ಹರಾಗಿರುವುದಿಲ್ಲ. 15 ದಿನಗಳ ನಂತರ ಚುನಾವಣೆ ನಡೆಯುವಾಗ 100 ರೂಪಾಯಿ ಬೆಲೆ ಇಳಿಸಿದರೆ ನಿಮಗೇಕೆ ಖುಷಿ? ಎಂದು ಪ್ರಶ್ನಿಸಿದ್ದಾನೆ.

ಈ ಸಂಬಂಧ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಕರ್ನಾಟಕ ಬಿಜೆಪಿ ಕೂಡ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com