ಮಂಡ್ಯ: ವಿಸಿ ನಾಲೆಯಲ್ಲಿ ಮತ್ತೊಂದು ದುರಂತ; 25 ಅಡಿ ಆಳಕ್ಕೆ ಬಿದ್ದ ಕಾರು, ಓರ್ವ ಸಾವು

ತಡೆಗೋಡೆ ಇಲ್ಲದ ಕಾರಣ ಮಂಡ್ಯದ ವಿಸಿ ನಾಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ, ತಡೆಗೋಡೆ ಇಲ್ಲದ ಕಾರಣ ಕಾರು ನಾಲೆಗೆ ಉರುಳಿ ಬಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
 ವಿಸಿ ನಾಲೆಗೆ ಬಿದ್ದ ಕಾರು
ವಿಸಿ ನಾಲೆಗೆ ಬಿದ್ದ ಕಾರು

ಮಂಡ್ಯ: ತಡೆಗೋಡೆ ಇಲ್ಲದ ಕಾರಣ ಮಂಡ್ಯದ ವಿಸಿ ನಾಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ, ತಡೆಗೋಡೆ ಇಲ್ಲದ ಕಾರಣ ಕಾರು ನಾಲೆಗೆ ಉರುಳಿ ಬಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.

ಮಂಡ್ಯದ ಅವ್ವೇರಹಳ್ಳಿ ಗ್ರಾಮದ ಬಳಿ ಈ ದುರ್ಘಟನೆ ಜರುಗಿದೆ. ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ನಾಲೆಗೆ ಸ್ವಿಫ್ಟ್ ಕಾರು ಉರುಳಿದೆ. ಇದರಿಂದ ಕಾರು ಸಂಪೂರ್ಣ ಜಖಂ ಆಗಿದೆ. ಈ ಪರಿಣಾಮ ಕಾರಿನಲ್ಲಿದ್ದ ಇಬ್ಬರ ಪೈಕಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ. ಮೃತ ಹಾಗೂ ಗಾಯಗೊಂಡ ವ್ಯಕ್ತಿಯ ವಿಳಾಸ ಇನ್ನೂ ತಿಳಿದು ಬಂದಿಲ್ಲ.

ಗಾಯಗೊಂಡ ವ್ಯಕ್ತಿಯನ್ನು ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ. ವಿಸಿ ನಾಲೆಯ‌ ಹಲವು ಕಡೆ ತಡೆಗೋಡೆ ಇಲ್ಲದ ಕಾರಣ ಇಂತಹ ಘಟನೆಗಳು ಪದೇ ಪದೇ ಜರುಗುತ್ತಿದ್ದು, ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೀಗಿದ್ದರೂ ಸಹ ಜಿಲ್ಲಾಡಳಿತ ಈ ಬಗ್ಗೆ ಹೆಚ್ಚು ಗಮನವರಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

 ವಿಸಿ ನಾಲೆಗೆ ಬಿದ್ದ ಕಾರು
ಬೆಳಗಾವಿಯಲ್ಲಿ ಮತ್ತೊಂದು ಭೀಕರ ಅಪಘಾತ: 6 ಮಂದಿ ದುರ್ಮರಣ

ಕಾವೇರಿ ನೀರಾವರಿ ನಿಗಮ ಹಲವು ದಿನಗಳಿಂದ ನಾಲೆಗೆ ನೀರು ನಿಲ್ಲಿಸಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com